Homeಕರ್ನಾಟಕಸ್ಮಶಾನಕ್ಕಾಗಿ ಹಾಡಿ ಜನರ ಆಗ್ರಹ: ಶವ ಇಟ್ಟು ಪ್ರತಿಭಟನೆ; ವಿಡಿಯೊ ವೈರಲ್‌‌

ಸ್ಮಶಾನಕ್ಕಾಗಿ ಹಾಡಿ ಜನರ ಆಗ್ರಹ: ಶವ ಇಟ್ಟು ಪ್ರತಿಭಟನೆ; ವಿಡಿಯೊ ವೈರಲ್‌‌

- Advertisement -
- Advertisement -

ಶವಸಂಸ್ಕಾರ ಮಾಡಲು ಸ್ಮಶಾನವಿಲ್ಲ ಎಂದು ಆರೋಪಿಸಿ ಶವವನ್ನಿಟ್ಟು ಪ್ರತಿಭಟನೆ ಮಾಡಿರುವ ಘಟನೆ ಸರಗೂರು ತಾಲೂಕಿನ ಬಿ. ಮಟಕೆರೆ ಗ್ರಾಮಪಂಚಾಯತಿ ವ್ಯಾಪ್ತಿಯ ಆಲನಹಳ್ಳಿ ಹಾಡಿಯಲ್ಲಿ ನಡೆದಿದೆ.

ಕಾಡು ಕುರುಬ ಜನಾಂಗದ ವ್ಯಕ್ತಿಯೊಬ್ಬರು ಗುರುವಾರ ತೀರಿಕೊಂಡಿದ್ದರು. ಆದರೆ ಶವ ಸಂಸ್ಕಾರ ಮಾಡಲು ಸರಿಯಾದ ಜಾಗವಿಲ್ಲದೆ ಪರದಾಡಿದರು. ಈ ಕುರಿತು ಮಾಡಿರುವ ವಿಡಿಯೊ ಈಗ ವೈರಲ್‌ ಆಗಿದೆ.

ತಾಲೂಕಿನ ಬಿ. ಮಟಕೆರೆ ಗ್ರಾಮಪಂಚಾಯತಿಯ ಸದಸ್ಯ ಬೆಟ್ಟಸ್ವಾಮಿ ಮಾತನಾಡಿರುವುದು ವಿಡಿಯೊದಲ್ಲಿ ದಾಖಲಾಗಿದ್ದು, “ಕಳೆದ ಮೂವತ್ತು ವರ್ಷಗಳಿಂದಲೂ ಇಲ್ಲಿ ಇದೇ ಸಮಸ್ಯೆಯನ್ನು ಹಾಡಿ ಜನರು ಎದುರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ರಸ್ತೆ ಇಲ್ಲ. ಹೆಣ ಹೂಳಲು ಜಾಗವಿಲ್ಲ. ಬರೀ ಆಶ್ವಾಸನೆಗಳನ್ನಷ್ಟೇ ಅಧಿಕಾರಿಗಳು ನೀಡುತ್ತಾರೆ. ಹಾಡಿಯ ಜನರು ಅರಣ್ಯ ಒತ್ತುವರಿ ಜಾಗದಲ್ಲಿ ಶವಸಂಸ್ಕಾರ ಮಾಡಬೇಕಾಗಿದೆ. ಆದರೆ ಅರಣ್ಯ ಇಲಾಖೆಯವರು ತಂತಿ ಹಾಕಿದ್ದಾರೆ. ಹಾಡಿ ಜನರು ಅವುಗಳನ್ನು ದಾಟಿ ಹೋಗಬೇಕು. ಹೀಗಾಗಿ ಸರ್ಕಾರ ಈ ದೃಶ್ಯವನ್ನು ನೋಡಿಯಾದರೂ ಎಚ್ಚೆತ್ತುಕೊಳ್ಳಬೇಕು. ಈ ಕಾಡು ಕುರುಬ ಜನರಿಗೆ ಸ್ಮಶಾನ ಜಾಗವನ್ನು ನೀಡಿ, ಅಲ್ಲಿಗೆ ಸಮರ್ಪಕ ರಸ್ತೆ ನಿರ್ಮಿಸಿಕೊಡಬೇಕು” ಎಂದು ಬೆಟ್ಟಸ್ವಾಮಿ ಆಗ್ರಹಿಸಿದ್ದಾರೆ.

ಸ್ಮಶಾನ ಜಾಗವನ್ನು ನೀಡದಿದ್ದರೆ ಮುಂದಿನ ದಿನಗಳಲ್ಲಿ ತಹಶೀಲ್ದಾರ್‌ ಕಚೇರಿಯ ಮುಂದೆ ಶವವನ್ನಿಟ್ಟು ಪ್ರತಿಭಟನೆ ಮಾಡಲಾಗುವುದು. ಈ ದೃಶ್ಯವನ್ನು ನೋಡಿದ ಕೂಡಲೇ ತಹಶೀಲ್ದಾರ್‌‌ ಅವರು ಈ ಜಾಗವನ್ನು ಹದ್ದುಬಸ್ತು ಮಾಡಿ ಸರಿಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಹಾಡಿ ಮಹಿಳೆಯೊಬ್ಬರು ಮಾತನಾಡಿ, “ನಮಗೆ ಬಾಳ ತೊಂದ್ರಿ ಕೊಡ್ತಾರ. ಈ ಸೋಲರ್‌ ತಂತಿ ಇರಕೂಡದು ಇಲ್ಲಿ. ನಾವು ಹಿಂಗೆ ತಂದು ಮಡಿಕಂಡು, ಅವರು ತಗೀಗಂಟ ಹಿಂಗೆ ಕಾಯ್ಕೊಂಡು ನಿಂತಿರ್‍ಬೇಕು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹಾಡಿಯ ಪುರುಷರೊಬ್ಬರು ಮಾತನಾಡಿ, “ಹಿರಿಯರ ಕಾಲದಲ್ಲಿ ನಡೆದಂತೆಯೇ ಈಗಲೂ ನಡೆಯಬೇಕು. ಬರೋಕೆ ನಮಗೆ ಜಾಗ ಇಲ್ಲ. ಸರ್ಕಾರ ನಮಗೆ ಏನು ಮಾಡಿಕೊಟ್ಟಿದೆ?” ಎಂದು ಕೇಳಿದ್ದಾರೆ.

ಆಲನಹಳ್ಳಿ ಹಾಡಿಯಷ್ಟೇ ಅಲ್ಲದೇ ಸರಗೂರು ತಾಲ್ಲೂಕಿನ ಹಲವು ಹಾಡಿಗಳು ಇದೇ ಸಮಸ್ಯೆಯನ್ನು ಎದುರಿಸುತ್ತಿವೆ ಎಂದು ಮೂಲಗಳು ತಿಳಿಸಿದೆ.

ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಸರಗೂರು ತಹಸೀಲ್ದಾರ್‌ ಚೆಲುವರಾಜು ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ನಮ್ಮೊಂದಿಗೆ ಮಾತನಾಡಿದ ಅವರು, “ಆಲನಹಳ್ಳಿ ಹಾಡಿಗೆ ಇಂದು ಭೇಟಿ ನೀಡಿದ್ದೆನು. ಸ್ಮಶಾನಕ್ಕಾಗಿ ಜಾಗವನ್ನು ಗುರುತು ಮಾಡಿದ್ದೇವೆ. ಸರ್ಕಾರಕ್ಕೆ ಪ್ರಸ್ತಾವನೆ ಕಳಿಹಿಸಿದ್ದೇವೆ. ಸರ್ಕಾರ ಮಂಜೂರು ಮಾಡಿ ಕಳುಹಿಸಲಿದೆ” ಎಂದು ತಿಳಿಸಿದರು.

ಸರಗೂರು ತಾಲ್ಲೂಕಿನ ಉಳಿದ ಹಾಡಿಗಳಲ್ಲೂ ಇದೆ ಸಮಸ್ಯೆ ಇದೆ ಎಂಬುದರ ಬಗ್ಗೆ ಕೇಳಿದಾಗ, “ಸರ್ಕಾರಿ ಜಮೀನು ಎಲ್ಲಿದಿಯೋ ಅಲ್ಲಿ ಗುರುತು ಮಾಡಿ ಸಾರ್ವಜನಿಕ ಸ್ಮಶಾನಗಳನ್ನು ಮಾಡುತ್ತೇವೆ. ಹಾಡಿ ಜನರು ಅಲ್ಲಿಯೇ ಶವಸಂಸ್ಕಾರ ಮಾಡಬೇಕಾಗುತ್ತದೆ. ಸ್ಮಶಾನಕ್ಕೆ ಜಾಗವಿರದ ಕಡೆ ಭೂಮಿಯನ್ನು ಖರೀದಿಸುತ್ತಿದ್ದೇವೆ. ಸನ್ಮಾನದ ಸಮಸ್ಯೆ ತಲೆದೋರದಂತೆ ಕ್ರಮವಹಿಸಲಾಗುತ್ತಿದೆ” ಎಂದರು.


ಇದನ್ನೂ ಓದಿರಿ: ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...