Homeಚಳವಳಿಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ನಾವು ಅಂಬೇಡ್ಕರ್ ಬಗ್ಗೆ ಅಹಂ ಬೆಳೆಸಿಕೊಳ್ಳಬಾರದು ಬದಲಿಗೆ ಅಂಬೇಡ್ಕರ್ ಬಗ್ಗೆ ಅರಿವು ಬೆಳೆಸಿಕೊಳ್ಳೋಣ. ಅಂದರೆ ಸಂವಿಧಾನದ ಅರಿವು ನಮ್ಮದಾಗಲಿ

- Advertisement -
- Advertisement -

ಮಹಿಳಾ ಸಮಾನತೆಗಾಗಿ ಹಿಂದೂ ಕೋಡ್ ಬಿಲ್ ರಚಿಸಿ, ಜಾರಿಯಾಗದಿದ್ದಾಗ ಕ್ಯಾಬಿನೆಟ್‌ಗೆ ರಾಜೀನಾಮೆ ನೀಡಿದ ಇತಿಹಾಸದ ಏಕೈಕ ನಾಯಕ ಡಾ.ಬಿ.ಆರ್ ಅಂಬೇಡ್ಕರ್ ಎಂದು ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟೀಸ್ ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.

ಅಂಬೇಡ್ಕರ್‌ರವರು ಕಾರ್ಮಿಕ ಸಚಿವರಾಗಿ ಈ ದೇಶದ ಕಾರ್ಮಿಕರಿಗೆ ಹಕ್ಕುಗಳನ್ನು ನೀಡಿದರು. ಶ್ರೇಷ್ಟ ವಕೀಲರಾಗಿ, ಅರ್ಥಶಾಸ್ತ್ರಜ್ಞರಾಗಿ, ದಕ್ಷ ಆಡಳಿತಗಾರರಾಗಿ, ಸಂವಿಧಾನ ಶಿಲ್ಪಿಯಾಗಿ, ಮಾನವತಾವಾದಿಯಾಗಿ ಇಡೀ ದೇಶಕ್ಕೆ ಕೊಡುಗೆ ಕೊಟ್ಟವರನ್ನು ಈ ದೇಶ ಮರೆಯಬಾರದು ಎಂದರು.

ನ್ಯಾಷನಲ್ ಕಾಲೇಜು ಮೈದಾನದಲ್ಲಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  “ಈ ಸಂದರ್ಭದಲ್ಲಿ ಅಂಬೇಡ್ಕರ್‌ರವರಿಗೆ ಸಲಾಮ್ ಹೊಡೆದರೆ ಸಾಲುವುದಿಲ್ಲ, ನಾವು ಅಂಬೇಡ್ಕರ್ ಬಗ್ಗೆ ಅಹಂ ಬೆಳೆಸಿಕೊಳ್ಳಬಾರದು ಬದಲಿಗೆ ಅಂಬೇಡ್ಕರ್ ಬಗ್ಗೆ ಅರಿವು ಬೆಳೆಸಿಕೊಳ್ಳೋಣ. ಅಂದರೆ ಸಂವಿಧಾನದ ಅರಿವು ನಮ್ಮದಾಗಲಿ” ಎಂದರು.

ಅಂಬೇಡ್ಕರ್ ಪರಿನಿಬ್ಬಾಣ ಹೊಂದಿದ ದಿನದಂದೇ ಬಾಬ್ರಿ ಮಸೀದಿಯನ್ನು ಕೆಡವಲಾಯಿತು. ಸಂವಿಧಾನ ಅಂಬೇಡ್ಕರ್‌ರವರು ಬರೆದಿಲ್ಲ ಎಂದು ಸುಳ್ಳು ಹಬ್ಬಿಸಲಾಗಿದೆ. ಸಂವಿಧಾನ ರಚನೆಯಾದ ಬಳಿಕ ಈ ದೇಶವನ್ನು ಕಟ್ಟಲಾಗಿದೆ. ಪ್ರಜಾಪ್ರಭುತ್ವದ ಸಂಸ್ಥೆಗಳಲ್ಲಿ ನಾವೆಲ್ಲರೂ ನೇರವಾಗಿ, ಪರೋಕ್ಷವಾಗಿ ಪಾಲ್ಗೊಳ್ಳುತ್ತಿರುವುದಕ್ಕೆ ಅಂಬೇಡ್ಕರ್ ಅವರು ಬರೆದ ಸಂವಿಧಾನ ಕಾರಣ, ಸಂವಿಧಾನದಿಂದಾಗಿ ದಲಿತ ರಾಷ್ಟ್ರಪತಿ, ಉಪಪ್ರಧಾನಿಯಾದರು. ಹತ್ತು ಹಲವು ಕ್ಷೇತ್ರಗಳಲ್ಲಿ ಸಾಧನೆಗೈಯಲು ಸಂವಿಧಾನ ಕಾರಣ ಎಂದರು.

“ಇಂದು ಬೆಲೆ ಏರಿಕೆಯಾಗುತ್ತಿದೆ. ಸರ್ಕಾರಕ್ಕೆ ಪ್ರಜ್ಞೆ ಇಲ್ಲ. ಪ್ರಶ್ನೆ ಮಾಡಿದರೆ ಯುಎಪಿಎ ಹಾಕುತ್ತಿದ್ದಾರೆ. ಎನ್ಕೌಂಟರ್ ಮಾಡುತ್ತಿದ್ದಾರೆ. ಪಿಟಿಸಿಎಲ್ ಕಾಯ್ದೆ ಅಪ್ರಸ್ತುತ ಮಾಡಲಾಗುತ್ತಿದೆ. ಖಾಸಗೀಕರಣ ಹೆಚ್ಚಾಗುತ್ತಿದ್ದೆ. ಮೀಸಲಾತಿ ಅಪ್ರಸ್ತುತ ಮಾಡುತ್ತಿದ್ದಾರೆ. ಮೀಸಲಾತಿ ಹೆಚ್ಚಳ ಕುರಿತು ಶಿಪಾರಸ್ಸು ಮಾಡಲು ಒಪ್ಪಿಕೊಂಡಿದ್ದೆ. ಆದರೆ ದೇಶದಲ್ಲಿ-ರಾಜ್ಯದಲ್ಲಿ ಖಾಲಿ ಹುದ್ದೆಗಳು ಭರ್ತಿಯಾಗಿಲ್ಲ. ಹಾಗಾಗಿ ಎಷ್ಟು ಮೀಸಲಾತಿ ಹೆಚ್ಚಿಸಿದರೂ ಏನು ಪ್ರಯೋಜನ? ಖಾಲಿ ಹುದ್ದೆಗಳನ್ನು ತುಂಬಬೇಕು. ಮೀಸಲಾತಿ ಹೆಚ್ಚಿಸಿದರೂ ಖಾಸಗೀಕರಣ ಹೆಚ್ಚುತ್ತಿದೆ. ಇದರ ವಿರುದ್ಧ ಹೋರಾಟ ಮಾಡಬೇಕಾಗಿದೆ” ಎಂದರು.

ಜನರ ಸಮಸ್ಯೆಗಳಿಗೆ ಜನಪರ ಹೋರಾಟಗಳೇ ಮದ್ದು. ಒಬ್ಬೊಬ್ಬರಾಗಿಯೇ ಮಾತನಾಡಿದರೆ ಸರ್ಕಾರಕ್ಕೆ ಕೇಳಿಸಲ್ಲ. ನಾವೆಲ್ಲ ದಲಿತ ಸಂಘಟನೆಗಳು ಸೈದ್ಧಾಂತಿಕ ನೆಲಗಟ್ಟಿನಲ್ಲಿ ಒಂದಾಗಬೇಕು. ಅಂಬೇಡ್ಕರ್ ದಾರಿಯೇ ನಮ್ಮ ತಾತ್ವಿಕ ನೆಲಗಟ್ಟು. ಸಂವಿಧಾನವನ್ನು ಉಳಿಸಿಕೊಳ್ಳಬೇಕು. ನಾವು ಗಳಿಸಿದ್ದನ್ನು ಕಳೆದುಕೊಳ್ಳುವ ಕಾಲಘಟ್ಟದಲ್ಲಿದ್ದೇವೆ. ನಾವೆಲ್ಲ ಒಟ್ಟಿಗೆ ಸೇರಿ ಹೋರಾಡಿದರೆ ಮಾತ್ರ ಗಳಿಸಿದ್ದನ್ನು ಉಳಿಸಿಕೊಳ್ಳಲು ಸಾಧ್ಯ ಎಂದರು.

ಕೋಮುವಾದ ರಾರಾಜಿಸಿದ್ದಲ್ಲಿ ನಾವು ಬಾಯಿಗೆ ಬೀಗ ಹಾಕಿಕೊಂಡು ಇರಬೇಕಾಗುತ್ತದೆ. ಇಂದು ಮುಸ್ಲಿಮರು ಮಾರಾಟ ಮಾಡುವಂತಿಲ್ಲ ಎನ್ನುತ್ತಿದ್ದಾರೆ. ನಾಳೆ ದಲಿತರು ದೇವಾಲಯದ ಬಳಿ ತೆಂಗಿನಕಾಯಿ ಮಾರುವಂತಿಲ್ಲ, ಹೂ ಮಾರುವಂತಿಲ್ಲ ಎನ್ನುತ್ತಾರೆ. ಎಚ್ಚರ ವಹಿಸಬೇಕು ಎಂದರು.

ಇದನ್ನೂ ಓದಿ; ಸಂಘರ್ಷ ನಡೆಸುವುದು ನಮ್ಮ ಹಕ್ಕು: ರಮಾಬಾಯಿ ಅಂಬೇಡ್ಕರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...