Homeಕರ್ನಾಟಕಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಮೇ 20ಕ್ಕೆ ಜನಚಳವಳಿಗಳ ಜನಾಗ್ರಹ ಸಮಾವೇಶ

ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಮೇ 20ಕ್ಕೆ ಜನಚಳವಳಿಗಳ ಜನಾಗ್ರಹ ಸಮಾವೇಶ

- Advertisement -
- Advertisement -

ಬೆಂಗಳೂರು: ಕೇಂದ್ರ, ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮತ್ತು ಸರಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ನಾಳೆ (ಮೇ 20) ಸಂಯುಕ್ತ ಹೋರಾಟ ಕರ್ನಾಟಕವತಿಯಿಂದ  ಬೆಂಗಳೂರಿನ ಗಾಂಧಿ ಭವನದಲ್ಲಿ ಜನ ಚಳವಳಿಗಳ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಹೋರಾಟ –ಕರ್ನಾಟಕದ ಸಂಯೋಜಕರಾದ ಬಡಗಲಪುರ ನಾಗೇಂದ್ರ ಅವರು ಮಾಹಿತಿ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕರಾಳ ಕೃಷಿ ಕಾಯ್ದೆಗಳ ರದ್ದತಿ, ಬಲವಂತದ ಭೂ ಸ್ವಾಧೀನಕ್ಕೆ ತಡೆ, ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ರಕ್ಷಣೆ, ಸಂವಿಧಾನ ಹಕ್ಕುಗಳ ಖಾತರಿ, ಕೋಮುವಾದಿ ಕೃತ್ಯಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ, ರೈತರಿಗೆ ಬೆಂಬಲ ಬೆಲೆ ರಕ್ಷಣೆ ಮುಂತಾದ ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಹಿಂದಿನ ಬಿಜೆಪಿ ಸರ್ಕಾರದ ನೀತಿಗಳನ್ನೇ ಮುಂದುವರೆಸುತ್ತಿರುವ ರಾಜ್ಯ ಸರ್ಕಾರ, ವಿದ್ಯುತ್‌ ಖಾಸಗೀಕರಣ ಸೇರಿದಂತೆ ಮೋದಿ ಸರ್ಕಾರದ ಜನ ವಿರೋಧಿ ಕಾರ್ಪೊರೇಟ್ ಪರವಾದ ಎಲ್ಲಾ ಕ್ರಮಗಳನ್ನು ವೇಗವಾಗಿ ಜಾರಿಗೊಳಿಸುತ್ತಿದೆ. ಇದನ್ನು ವಿರೋಧಿಸಿ ಈ ಜನಾಗ್ರಹ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸಮಾವೇಶದಲ್ಲಿ ರಾಜ್ಯದ ಎಲ್ಲಾ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ ಯುವಜನ ಸಂಘಟನೆಗಳ ಪ್ರಮುಖರು ಭಾಗವಹಿಸುತ್ತಿದ್ದು ಹಿಂದಿನ ಬಿಜೆಪಿ ಸರ್ಕಾರದ ಕ್ರಮಗಳನ್ನೇ ಮುಂದುವರೆಸುತ್ತಿರುವ ಔಚಿತ್ಯವನ್ನು ಪ್ರಶ್ನಿಸಿ, ಜನಾಗ್ರಹ ನಿರ್ಣಯಗಳನ್ನು ಈಡೇರಿಸುವಂತೆ ಆಗ್ರಹಿಸಲಾಗುತ್ತದೆ.  ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅನುಸರಿಸುತ್ತಿದ್ದ ನೀತಿಗಳನ್ನೇ ಈ ಸರ್ಕಾರ ಕೂಡ ಮುಂದುವರೆಸುತ್ತಿದೆ. ಕಾರ್ಮಿಕರ ದುಡಿಮೆ ಅವಧಿಯನ್ನು 8 ಗಂಟೆಯಿಂದ 12 ಗಂಟೆಯವರೆಗೆ ಹಿಂದಿನ ಸರ್ಕಾರ ಏರಿಕೆ ಮಾಡಿತ್ತು. ಈಗಿನ ಸರ್ಕಾರ ಈ ಕಾರ್ಮಿಕ ವಿರೋಧಿ ಕ್ರಮವನ್ನು ರದ್ದುಪಡಿಸುವ ಬದಲು ಏರಿಕೆಯನ್ನು ನೊಟೀಪಿಕೇಷನ್ ಮಾಡಿದೆ. ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ಲಕ್ಷಾಂತರ ಬಡ ದಲಿತ ಹಿಂದುಳಿದ ವರ್ಗಗಳ ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರ ಭೂಮಿ ಹಕ್ಕು ಕೋರಿರುವ ಅರ್ಜಿಗಳನ್ನು ಸಕ್ರಮಾತಿ ಸಮಿತಿ ಮುಂದೆ ತರದೇ ತಹಶಿಲ್ದಾರ್ ಹಾಗೂ ಜಿಲ್ಲಾಧಿಕಾರಿ ಗಳ ಹಂತಗಳಲ್ಲೇ ಕಾನೂನುಬಾಹಿರವಾಗಿ ವಜಾಗೊಳಿಸಿ ರಾಜ್ಯದ ಎಲ್ಲಕಡೆ ನಿರ್ದಯವಾಗಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಮೂಲಕ ದೌರ್ಜನ್ಯ ಬಳಸಿ ಒಕ್ಕಲೆಬ್ಬಿಸಲಾಗುತ್ತಿದೆ. ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನವನ್ನು ಮನಸೋ ಇಚ್ಚೆ ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳದೇ ಆಹಾರ ಭದ್ರತೆಗೆ ಗಂಭೀರ ಆಪಾಯ ತಂದೊಡ್ಡಿದೆ. ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಅನಿರ್ದಿಷ್ಟವಾಗಿ ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನ ವಿರೋಧಿಸಿ ಹೋರಾಡುತ್ತಿರುವ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ರೈತರಿಗೆ ಅಂತಿಮ ಅಧಿಸೂಚನೆ ಹೊರಡಿಸಿ ದೌರ್ಜನ್ಯದ ಮೂಲಕ ಭೂಮಿ ಕಿತ್ತುಕೊಳ್ಳುತ್ತಿದೆ. ಈ ಎಲ್ಲಾ ವಿವರಗಳನ್ನು ಜನಾಗ್ರಹ ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮೇಲಿಂದ ಮೇಲೆ ಬಂಡವಾಳ ಹೂಡಿಕೆ ಸಮಾವೇಶಗಳನ್ನು ಏರ್ಪಡಿಸುತ್ತಿರುವುದು ಕೇವಲ ಕೃಷಿ ಭೂಮಿ ಕಬಳಿಕೆಯ ದುರುದ್ದೇಶಕ್ಕಾಗಿ ಮಾತ್ರ. ಈಗಾಗಲೇ ಕೆಐಎಡಿಬಿ ವಶದಲ್ಲಿರುವ ಲಕ್ಷಾಂತರ ಎಕರೆ ಭೂಮಿಯನ್ನು ಸಮರ್ಥವಾಗಿ ಬಳಸದೇ ಮತ್ತೇ ಮತ್ತೇ ಹೊಸ ಹೊಸ ಭೂ ಸ್ವಾಧೀನವನ್ನು ರಿಯಲ್ ಎಸ್ಟೇಟ್  ಹಿತಾಸಕ್ತಿರಕ್ಷಣೆಗಾಗಿ ಮಾಡಲಾಗುತ್ತಿದೆ. ಕೃಷಿ ಮಾರುಕಟ್ಟೆಗಳನ್ನು ಬಹುರಾಷ್ಟ್ರೀಯ ಕಂಪನಿಗಳ ಪರವಾಗಿ ದುರ್ಬಲಗೊಳಿಸಿ ಖಾಸಗಿ ಮಾರುಕಟ್ಟೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ಮೂಲಕ ವಿದ್ಯುತ್ ಖಾಸಗೀಕರಣಕ್ಕೆ ಬೆಂಬಲ ನೀಡಲಾಗುತ್ತಿದ್ದು ಕೃಷಿ ಪಂಪಸೆಟ್ ಗಳಿಗೂ ಪ್ರೀ ಪೇಯ್ಡ್ ಮೀಟರ್ ಅಳವಡಿಕೆಯನ್ನು ಒತ್ತಾಯಿಸಲಾಗುತ್ತಿದೆ. ಕಾರ್ಮಿಕ ವಿರೋಧಿ ಲೇಬರ್‌ಕೋಡ್ ಗಳ ಜಾರಿಗೆ ಕ್ರಮ ವಹಿಸುತ್ತಿದ್ದು, ಯಾವುದೇ ಓಟಿ ಸೌಲಭ್ಯ ಇಲ್ಲದೇ ದಿನಕ್ಕೆ 12 ಗಂಟೆ ದುಡಿಸಿಕೊಳ್ಳಲು ಕಾರ್ಖಾನೆಗಳಿಗೆ ಅನುಮತಿ ನೀಡುತ್ತಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರತಿಯೊಂದು ನಾಗರಿಕ ಸೌಲಭ್ಯಗಳನ್ನು ಖಾಸಗೀಕರಿಸಲಾಗುತ್ತಿದ್ದು, ಹತ್ತು ತಿಂಗಳ ಆತಿಥಿ ಶಿಕ್ಷಕರ ನೇಮಕಾತಿಗೂ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವಂತೆ ಆದೇಶ ಹೊರಡಿಸಿದೆ. ದಲಿತರು, ಮಹಿಳೆಯರು, ಮಕ್ಕಳು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ವಿಫಲರಾಗಿರುವುದು ಮಾತ್ರವಲ್ಲ ಕೋಮುವಾದಿ ಹಾಗೂ ಮೂಲಭೂತವಾದಿ ಶಕ್ತಿಗಳ ಉಪಟಳಗಳನ್ನು ಹಿಮ್ಮೆಟ್ಟಿಸಲು ವಿಫಲವಾಗಿದೆ. ಅದೇ ಸಂದರ್ಭದಲ್ಲಿ ಪ್ರಜಾಸತ್ತಾತ್ಮಕ ಚಟುವಟಿಕೆಗಳ ಮೇಲೆ ಹೆಚ್ಚು ಹೆಚ್ಚು ನಿರ್ಬಂಧ ಏರಿಕೆ ಮಾಡಿ ಶಾಂತಿಯುತ ಪ್ರತಿಭಟನೆಗಳ ಮೇಲೂ ಕೂಡ ಕಠಿಣ ಕಾನೂನುಗಳನ್ನು ಅನ್ವಯಿಸಿ ಮೊಕದ್ದಮೆ ದಾಖಲಿಸಲಾಗುತ್ತಿದೆ. ಹೀಗೆ ಪ್ರತಿಯೊಂದು ವಲಯದಲ್ಲೂ ರಾಜ್ಯ ಸರ್ಕಾರದ ಜನ ವಿರೋಧಿ ಕ್ರಮಗಳನ್ನು ಜನಾಗ್ರಹ ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದು ಸಂಯುಕ್ತ ಹೋರಾಟ ಕರ್ನಾಟಕವು ಹೇಳಿಕೆಯಲ್ಲಿ ತಿಳಿಸಿದೆ.

ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...