Homeಮುಖಪುಟಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ ನೋಟಿಸ್

ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ ನೋಟಿಸ್

- Advertisement -
- Advertisement -

ವಾಟ್ಸಾಪ್ ಮೆಸೆಜಿಂಗ್ ಅಪ್ಲಿಕೇಶನ್‌ನ ಹೊಸ ಅಪ್ಡೇಟ್‌ ನಲ್ಲಿ ಗೌಪ್ಯತೆಯ ಖಾತರಿಯಿಲ್ಲ ಎಂಬುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ವಾಟ್ಸಾಪ್‌ಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಜೊತೆಗೆ 4 ವಾರಗಳಲ್ಲಿ ಉತ್ತರಿಸುವಂತೆ ಆದೇಶಸಿದೆ.

ಯುರೋಪಿಯನ್ ಬಳಕೆದಾರರಿಗೆ ಹೋಲಿಸಿದರೆ ಭಾರತದ ವಾಟ್ಸಾಪ್‌ನ ಗೌಪ್ಯತೆಯ ಗುಣಮಟ್ಟ ತೀರಾ ಕಡಿಮೆಯಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಂ ಈ ನೋಟಿಸ್ ನೀಡಿದೆ.

“ತಮ್ಮ ಗೌಪ್ಯತೆಯನ್ನು ಕಳೆದುಕೊಳ್ಳುತ್ತೇವೆ ಎಂಬ ಆತಂಕ ಜನರಲ್ಲಿದೆ. ಅವರನ್ನು ರಕ್ಷಿಸುವುದು ನಮ್ಮ ಕರ್ತವ್ಯ” ಎಂದು ಎಸ್‌ ಎ ಬೋಬಡೆ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ‘ದಿಶಾಳ ತಂದೆ-ತಾಯಿ ನರೇಂದ್ರ ಮೋದಿಯವರ ಬೆಂಬಲಿಗರು…’ – ಪತ್ರಕರ್ತ ಮೊಹಮ್ಮದ್ ಜುಬೈರ್

ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರು ತಮ್ಮ ಗೌಪ್ಯತೆಯನ್ನು ಹೆಚ್ಚೆಂದು ಪರಿಗಣಿಸುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವಾಟ್ಸ್ಆ್ಯಪ್ ಹೊಸ ಅಪ್‌ಡೇಟ್‌ನಲ್ಲಿ ಫೇಸ್‌ಬುಕ್ ಜತೆಗೆ ಬಳಕೆದಾರರ ದತ್ತಾಂಶವನ್ನು ಹಂಚಿಕೊಳ್ಳುತ್ತದೆ ಎನ್ನಲಾಗಿತ್ತು. ಇದರಿಂದ ಕೆರಳಿದ ಕೋಟ್ಯಾಂತರ ಬಳಕೆದಾರರು ವಾಟ್ಸಾಪ್ ತ್ಯಜಿಸಿ ಸಿಗ್ನಲ್ ಎಂಬ ಸುರಕ್ಷತಾ ಆಪ್‌ಗೆ ಸೇರಿಕೊಂಡಿದ್ದರು.

ಫೇಸ್‌ಬುಕ್ ಮಾಲಿಕತ್ವದ ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕುತ್ತದೆ/ಮಾರುತ್ತದೆ, ಚಾಟ್‌ಗಳನ್ನು ನೋಡುತ್ತದೆ ಎಂಬ ಟೀಕೆಗಳ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರ ಅಪ್‌ಡೇಟ್ ದಿನಾಂಕವನ್ನು ಮುಂದೂಡಿದೆ. ಈ ಹಿಂದೆ ಇದಕ್ಕಾಗಿ 2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿತ್ತು.

ಇದನ್ನೂ ಓದಿ: ನೇಪಾಳ, ಶ್ರೀಲಂಕಾದಲ್ಲೂ ಬಿಜೆಪಿಯನ್ನು ಸಂಘಟಿಸುತ್ತೇವೆ: ಅಮಿತ್ ಶಾ ಹೇಳಿಕೆಯನ್ನು ಉಲ್ಲೇಖಿಸಿದ ತ್ರಿಪುರಾ ಮುಖ್ಯಮಂತ್ರಿ

ಫೆಬ್ರವರಿಯಿಂದ ಹೊಸ ಅಪ್‌ಡೇಟ್ ಮಾಡಿಕೊಳ್ಳಬೇಕು ಎಂದು‌ ಘೋಷಿಸಿದ್ದ ವಾಟ್ಸಾಪ್, ಈಗ ಮೇ ತಿಂಗಳವರೆಗೆ ಅಪ್‌ಡೇಟ್‌ ಪ್ರಕ್ರಿಯೆಯನ್ನು ಮುಂದೂಡುವುದಾಗಿ ಹೇಳಿದೆ. “ಬಳಕೆದಾರರ ವ್ಯವಹಾರಗಳಿಗೆ ಸಂಬಂಧಿಸಿದ ಸಂದೇಶ ಕಳುಹಿಸಲು ಹೊಸ ಅಪ್‌ಡೇಟ್‌ ಅವಕಾಶ ನೀಡಲಿದೆ. ಇದು ವೈಯಕ್ತಿಕ ಸಂವಹನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಎಂಡ್ ಟು ಎಂಡ್ encryption ಮುಂದುವರಿಯುತ್ತದೆ. ಹೊಸ ಅಪ್‌ಡೇಟ್‌ ಮೂಲಕ ದತ್ತಾಂಶಗಳನ್ನು ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುವುದಿಲ್ಲ” ಎಂದು ವಾಟ್ಸಾಪ್ ಮತ್ತೊಮ್ಮೆ ಹೇಳಿಕೆ ನೀಡಿದೆ.

ಆದರೆ ಇದಕ್ಕೂ ಮೊದಲು, ವಾಟ್ಸಾಪ್ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ನೋಟಿಸ್ ಮೂಲಕ ತನ್ನ ಗೌಪ್ಯತಾ ನೀತಿಗಳನ್ನು ಬದಲಿಸುತ್ತಿರುವುದಾಗಿ ಮಾಹಿತಿ ನೀಡಿತ್ತು. “ಪ್ರಸ್ತುತ ಕೆಲವು ವರ್ಗಗಳ ಮಾಹಿತಿಯನ್ನು ಫೇಸ್‌ಬುಕ್ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತೇವೆ. ಇತರ ಕಂಪನಿಗಳೊಂದಿಗೆ ನಾವು ಹಂಚಿಕೊಳ್ಳುವ ಮಾಹಿತಿಯು ನಿಮ್ಮ ಖಾತೆ ನೋಂದಣಿ ಮಾಹಿತಿಯನ್ನು ಒಳಗೊಂಡಿದೆ (ಉದಾಹರಣೆಗೆ ನಿಮ್ಮ ಫೋನ್ ಸಂಖ್ಯೆ), ವಹಿವಾಟು ಡೇಟಾ, ಸೇವೆ-ಸಂಬಂಧಿತ ಮಾಹಿತಿ, ನಮ್ಮ ಸೇವೆಗಳನ್ನು ಬಳಸುವಾಗ ನೀವು ಇತರರೊಂದಿಗೆ ಹೇಗೆ ವರ್ತಿಸುತ್ತೀರಿ (ವ್ಯವಹಾರಗಳು ಸೇರಿದಂತೆ), ಮೊಬೈಲ್ ಸಾಧನ ಮಾಹಿತಿ, ನಿಮ್ಮ ಐಪಿ ವಿಳಾಸ, ಮತ್ತು ಗೌಪ್ಯತೆ ನೀತಿ ವಿಭಾಗದಲ್ಲಿ ಗುರುತಿಸಲಾದ ಇತರ ಮಾಹಿತಿಯನ್ನು ‘ನಾವು ಸಂಗ್ರಹಿಸುವ ಮಾಹಿತಿ‘ ಅಥವಾ ನಿಮಗೆ ಸೂಚನೆಯ ಮೇರೆಗೆ ಅಥವಾ ನಿಮ್ಮ ಒಪ್ಪಿಗೆಯ ಆಧಾರದ ಮೇಲೆ ಪಡೆಯಲಾಗಿದೆ” ಎಂದು ವಾಟ್ಸಾಪ್ ತಿಳಿಸಿತ್ತು.


ಇದನ್ನೂ ಓದಿ: ದೇಶ ಭಕ್ತರು ಯಾರು? ದೇಶ ದ್ರೋಹಿಗಳು ಯಾರು? – ನಟ ಚೇತನ್ ಹೇಳುತ್ತಾರೆ ಕೇಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...