Homeಕರ್ನಾಟಕಪ್ರತಿ ಲೀ. ನಂದಿನಿ ಹಾಲಿಗೆ 3 ರೂ ಹೆಚ್ಚಳ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರೋಧ

ಪ್ರತಿ ಲೀ. ನಂದಿನಿ ಹಾಲಿಗೆ 3 ರೂ ಹೆಚ್ಚಳ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರೋಧ

- Advertisement -
- Advertisement -

ರಾಜ್ಯ ಸರ್ಕಾರವು ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿದ್ದು, ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಅದೇ ರೀತಿ ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲಾಗಿದೆ. ನೂತನ ದರಗಳು ಆಗಸ್ಟ್ 1 ರಿಂದ ಜಾರಿಗೆ ಬರಲಿದೆ.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಹಾಲು ಒಕ್ಕೂಟಗಳ ಮತ್ತು ಕರ್ನಾಟಕ ಹಾಲು ಮಾರಾಟ ಮಹಾಮಂಡಳಿ ಪದಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹೆಚ್‌.ಡಿ ರೇವಣ್ಣ ತಿಳಿಸಿದ್ದಾರೆ.

ಹೆಚ್.ಡಿ ಕುಮಾರಸ್ವಾಮಿ ವಿರೋಧ

ನಂದಿನಿ ಹಾಲಿನ ದರ ಏರಿಕೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. “ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್ ಸಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ” ಎಂದು ಟೀಕಿಸಿದ್ದಾರೆ.

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: PSI ಹಗರಣ ನ್ಯಾಯಾಂಗ ತನಿಖೆಗೆ: ಮೂರು ತಿಂಗಳಲ್ಲಿ ವರದಿ ಸಲ್ಲಿಸಲು ಸರ್ಕಾರ ಸೂಚನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಮಾರಾಟವಾಗಲು ನಿರಾಕರಿಸಿದ್ದಕ್ಕೆ ಜೈಲಿನಲ್ಲಿ ಹೊಡೆದು, ಚಿತ್ರಹಿಂಸೆ ನೀಡಿದ್ದರು: ಟಿಎಂಸಿ ನಾಯಕ ಸಾಕೇತ್ ಗೋಖಲೆ

0
ಬಿಜೆಪಿಗೆ ಸೇರಲು ಅಥವಾ ಮಾರಾಟವಾಗಲು ನಿರಾಕರಿಸಿದ್ದಕ್ಕಾಗಿ ಜೈಲಿನಲ್ಲಿ ನನಗೆ ಹೊಡೆದು ಚಿತ್ರಹಿಂಸೆ ನೀಡಲಾಗಿತ್ತು ಎಂದು ರಾಜ್ಯಸಭಾ ಸದಸ್ಯ, ಟಿಎಂಸಿ ನಾಯಕ ಸಾಕೇತ್ ಗೋಖಲೆ ಹೇಳಿದ್ದಾರೆ. ದಿ ವೈರ್‌ ಪ್ರಕಟಿಸಿದ ಹಿರಿಯ ವಕೀಲ ಕಪಿಲ್ ಸಿಬಲ್...