Homeಮುಖಪುಟಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಮಾಜಿ ಶಾಸಕ ಸೇರಿ ನಾಲ್ವರು ಅಪರಾಧಿಗಳ ಶಿಕ್ಷೆಗೆ...

ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಮಾಜಿ ಶಾಸಕ ಸೇರಿ ನಾಲ್ವರು ಅಪರಾಧಿಗಳ ಶಿಕ್ಷೆಗೆ ಹೈಕೋರ್ಟ್ ತಡೆ

- Advertisement -
- Advertisement -

ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ಹಾಗೂ ಸಿಪಿಐ (ಎಂ) ನಾಯಕ ಕೆ.ವಿ ಕುಂಞಿರಾಮನ್ ಮತ್ತು ಇತರರಿಗೆ ಎರ್ನಾಕುಲಂ ಸಿಬಿಐ ವಿಶೇಷ ನ್ಯಾಯಾಲಯ ವಿಧಿಸಿದ್ದ ಐದು ವರ್ಷಗಳ ಜೈಲು ಶಿಕ್ಷೆಗೆ ಕೇರಳ ಹೈಕೋರ್ಟ್‌ನ ವಿಭಾಗೀಯ ಪೀಠ ಇಂದು (ಜ.8) ತಡೆ ನೀಡಿದೆ.

ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಶರತ್ ಲಾಲ್ ಪಿ.ಕೆ ಮತ್ತು ಕೃಪೇಶ್ ಅವರನ್ನು ಕಾಸಗೋಡಿನ ಪೆರಿಯದಲ್ಲಿ 2019 ಫೆಬ್ರವರಿ 17ರ ರಾತ್ರಿ ಕೊಲೆ ಮಾಡಲಾಗಿತ್ತು. ಪೆರಿಯ ಅವಳಿ ಕೊಲೆ ಎಂದೇ ಈ ಪ್ರಕರಣ ಪ್ರಸಿದ್ದಿಯಾಗಿದೆ.

ಸಿಬಿಐ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಅಪರಾಧಿಗಳು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠದ ನ್ಯಾಯಾಧೀಶ ಪಿ.ಬಿ ಸುರೇಶ್ ಅವರು ಶಿಕ್ಷೆಗೆ ತಡೆ ನೀಡಿ ಆದೇಶಿಸಿದ್ದಾರೆ.

ಕಾಸರಗೋಡಿನ ಉದಮಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಸಿಪಿಐ(ಎಂ) ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಕುಂಞಿರಾಮನ್, ಕಾಞಂಗಾಡ್ ಬ್ಲಾಕ್ ಪಂಚಾಯತ್ ಅಧ್ಯಕ್ಷ ಮಣಿಕಂಠನ್, ಸಿಪಿಐ(ಎಂ) ಪಕ್ಕಂ ವಲಯದ ಮಾಜಿ ಕಾರ್ಯದರ್ಶಿ ರಾಘವನ್ ವೆಳುತ್ತೊಳಿ ಅಲಿಯಾಸ್ ರಾಘವನ್ ನಾಯರ್ ಮತ್ತು ಸಿಪಿಐ(ಎಂ) ನಿಯಂತ್ರಿತ ಪನಾಯಲ್ ಸರ್ವೀಸ್ ಕೋ ಆಪರೇಟಿವ್ ಬ್ಯಾಂಕ್‌ನ ಮಾಜಿ ಕಾರ್ಯದರ್ಶಿ ಕೆ.ವಿ. ಭಾಸ್ಕರನ್ ಅವರಿಗೆ ಐದು ವರ್ಷಗಳ ಸಾಮಾನ್ಯ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.

ಕೊಲೆ ನಡೆದ ಬಳಿಕ ಅಪರಾಧಿ ಸಾಜಿ ಜಾರ್ಜ್ ಅವರನ್ನು ಪೊಲೀಸ್ ವಾಹನದಿಂದ ಕರೆದೊಯ್ದ ಅಪರಾಧಕ್ಕಾಗಿ
ಐಪಿಸಿ ಸೆಕ್ಷನ್ 225ರ ಅಡಿ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

ಪ್ರಕರಣದ ಬಗ್ಗೆ ಸ್ಥಳೀಯ ಪೊಲೀಸರು, ರಾಜ್ಯ ಅಪರಾಧ ವಿಭಾಗ ಹಾಗೂ ಸಿಬಿಐ ತನಿಖೆ ನಡೆಸಿತ್ತು. ಒಟ್ಟು 24 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪೈಕಿ 10 ಮಂದಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು.

ಇದನ್ನೂ ಓದಿ : ಪೋಕ್ಸೋ ಪ್ರಕರಣದ ಆರೋಪಿಗೆ ರಕ್ಷಣೆ : ಮಹಿಳಾ ಇನ್‌ಸ್ಪೆಕ್ಟರ್, ಎಡಿಎಂಕೆ ಕಾರ್ಯಕರ್ತನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್...

‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಜಾರಿಗೆ ತಂದಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯ ಕಾನೂನಾತ್ಮಕತೆಯನ್ನು ಪ್ರಶ್ನಿಸಿ ವಿಪಕ್ಷ 'ಇಂಡಿಯಾ' ಒಕ್ಕೂಟ ಸಲ್ಲಿಸಿರುವ ಪ್ರಮುಖ...

ಸಿಇಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್: ಅಕ್ಟೋಬರ್ 28ರ ಗಡುವು

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ...

2018ರ ‘ಬಿಜೆಪಿ ಐಟಿ ಸೆಲ್’ ವೀಡಿಯೊ ವಿವಾದ: ಯೂಟ್ಯೂಬರ್ ಧ್ರುವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್!

ಡಿಜಿಟಲ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದ 2018ರ ಕ್ರಿಮಿನಲ್ ಮಾನಹಾನಿ ದೂರಿಗೆ (Criminal Defamation Case) ಸಂಬಂಧಿಸಿದಂತೆ, ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಹೊಸದಾಗಿ...