Homeಕರ್ನಾಟಕಬೆಂಗಳೂರು: ರಂಗ ಶಂಕರದಲ್ಲಿ ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ

ಬೆಂಗಳೂರು: ರಂಗ ಶಂಕರದಲ್ಲಿ ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ

- Advertisement -
- Advertisement -

ಇಸ್ರೇಲ್ ದಾಳಿಯಿಂದ ಪ್ಯಾಲೇಸ್ತೀನ್‌ನಲ್ಲಿ ಉಂಟಾಗಿರುವ ಮಾನವೀಯ ಬಿಕ್ಕಟ್ಟಿನ ಕುರಿತು ಬೆಂಗಳೂರಿನ ರಂಗಶಂಕರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಇಂದು (ನ.29) ಸಂಜೆ 5:30ಕ್ಕೆ ಕಾವ್ಯಗೋಷ್ಠಿ, ಕಿರು ನಾಟಕ ಸೇರಿದಂತೆ ಪ್ಯಾಲೇಸ್ತೀನ್‌ನಲ್ಲಿ ನಡೆಯುತ್ತಿರುವ ಮಾರಣಹೋಮ ಖಂಡಿಸಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಲಾವಿದರಾದ ಎಂ.ಡಿ ಪಲ್ಲವಿ, ಶ್ವೇತಾಂಶು ಬೋರ, ರಮಣೀಕ್ ಸಿಂಗ್ ಇದರ ನೇತೃತ್ವ ವಹಿಸಿದ್ದರು.

ಕಾರ್ಯಕ್ರಮ ರದ್ದಾಗಿರುವ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟರ್‌ ಹಂಚಿಕೊಂಡಿರುವ ಗಾಯಕಿ ಎಂ.ಡಿ ಪಲ್ಲವಿ, “ಕಾರ್ಯಕ್ರಮ ರದ್ದಾಗಿದೆ. ಪೊಲೀಸರು ಅನುಮತಿ ನಿರಾಕರಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಖ್ಯಾತ ರಂಗಭೂಮಿ ಕಲಾವಿದರಾದ ಪಲ್ಲವಿ ಎಂ.ಡಿ ಮತ್ತು ಶ್ವೇತಾಂಶು ಬೋರಾ ಜೊತೆ ನಾವು ಕವಿತೆಗಳನ್ನು ಓದಲು ನಿರ್ಧರಿಸಿದ್ದೆವು. ಈ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ರಂಗಶಂಕರದಂತಹ ಸಂಸ್ಥೆಯನ್ನು ಬೆದರಿಸುವ ಮೂಲಕ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವದ ಮೇಲಿನ ತನ್ನ ಬದ್ಧತೆ ಕೊರತೆಯನ್ನು ಮತ್ತೊಮ್ಮೆ ತೋರಿಸಿದೆ” ಎಂದು ಕಲಾವಿದ ರಮಣೀಕ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ಯಾಲೇಸ್ತೀನ್ ಜೊತೆ ಒಗ್ಗಟ್ಟು ಪ್ರದರ್ಶಿಸಿ ಒಂದು ಸಣ್ಣ ನಾಟಕ ಮಾಡಲು ಮತ್ತು ಕವನ ವಾಚಿಸಲು ನಾವು ನಿರ್ಧಿಸಿದ್ದೆವು. ನಮ್ಮದು ಒಳಾಂಗಣ ಕಾರ್ಯಕ್ರಮವಾಗಿದೆ. ಇದಕ್ಕೆ ಪೊಲೀಸರ ಅನುಮತಿ ಪಡೆಯುವ ಅಗತ್ಯ ಇಲ್ಲ. ಆದರೂ, ಪೊಲೀಸರು ನಮ್ಮ ಕಾರ್ಯಕ್ರಮದ ಸಂಪೂರ್ಣ ಮಾಹಿತಿ, ಕಲಾವಿದರ ವಿವರಗಳು ಮತ್ತು ಆಧಾರ್ ಕಾರ್ಡ್ ಪ್ರತಿಗಳನ್ನು ಕೇಳಿದ್ದರು. ನಾವು ಆಧಾರ್ ಕಾರ್ಡ್ ಪ್ರತಿಗಳನ್ನು ಹೊರತುಪಡಿಸಿ ಉಳಿದೆಲ್ಲವನ್ನೂ ಒದಗಿಸಿದ್ದೇವೆ. ಆದರೆ, ಅವರು ರಂಗಶಂಕರದ ಮೇಲೆ ಒತ್ತಡ ಹೇರಿದ್ದಾರೆ. ಪರಿಣಾಮ ಕೊನೆ ಗಳಿಗೆಯಲ್ಲಿ ಕಾರ್ಯಕ್ರಮ ರದ್ದುಗೊಳಿಸಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಪೊಲೀಸರು ಒತ್ತಡ ಹೇರಿದ ಕಾರಣ ಕಾರ್ಯಕ್ರಮ ರದ್ದಾಗಿದೆ. ಆದರೆ, ಒಂದಂತು ತಿಳಿದುಕೊಳ್ಳಿ, ಇದು ಒಳಾಂಗಣ ಕಾರ್ಯಕ್ರಮ ಪೊಲೀಸರ ಅನುಮತಿ ಅಗತ್ಯವಿಲ್ಲ. ಬೆಂಗಳೂರು ಪೊಲೀಸರು ಮತ್ತು ಕರ್ನಾಟಕ ಸರ್ಕಾರಕ್ಕೆ ನಾಚಿಕೆಯಾಗಬೇಕು. ದಯವಿಟ್ಟು ಇದನ್ನು ವ್ಯಾಪಕವಾಗಿ ಪ್ರಚಾರ ಮಾಡಿ. ಪ್ರೇಕ್ಷಕರನ್ನು ಸೇರಿಸಲು ನಮಗೆ ಸಹಾಯ ಮಾಡಿ. ನಾವು ಪ್ಯಾಲೇಸ್ತೀನ್ ಬಗ್ಗೆ ಕವನ ಓದುತ್ತೇವೆ. ಕಿರು ನಾಟಕ ಪ್ರದರ್ಶನ ಮಾಡುತ್ತೇವೆ” ಎಂದು ರಮಣೀಕ್ ಸಿಂಗ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

 

ನಾನು ಗೌರಿ ಜೊತೆ ದೂರವಾಣಿ ಮೂಲಕ ಮಾತನಾಡಿರುವ ಎಂ.ಡಿ ಪಲ್ಲವಿ, “ರಂಗಶಂಕರದವರು ಕಾರ್ಯಕ್ರಮ ರದ್ದುಗೊಳಿಸುವಂತೆ ಹೇಳಿದ್ದಾರೆ. ಪೊಲೀಸರು ಇಂತಹ ಕಾರ್ಯಕ್ರಮಗಳಿಗೆ ಅನುಮತಿ ಇಲ್ಲ ಎಂದು ಅವರಿಗೆ ತಿಳಿಸಿದ್ದಾರಂತೆ. ನಮನ್ನು ನೇರವಾಗಿ ಪೊಲೀಸರು ಸಂಪರ್ಕಿಸಿಲ್ಲ ಎಂದಿದ್ದಾರೆ. ಮುಂದಿನ ನಿರ್ಧಾರದ ಕುರಿತು ಅವರು ಮಾಹಿತಿ ನೀಡಿಲ್ಲ.

ರಂಗಶಂಕರದ ಕಡೆಯಿಂದ ಮಾಹಿತಿ ಪಡೆಯಲು ನಾನು ಗೌರಿ ಪ್ರಯತ್ನಿಸಿದರೂ, ಸಂಬಂಧಪಟ್ಟವರು ಕರೆ ಸ್ವೀಕರಿಸಿಲ್ಲ.

ಇದನ್ನೂ ಓದಿ : ಗೋವಾ ಚಲನಚಿತ್ರೋತ್ಸವದಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಪ್ರತಿಭಟಿಸಿದ ಇಬ್ಬರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...