Homeಕರೋನಾ ತಲ್ಲಣಕೊರೊನಾ ಲಸಿಕೆಯ 2 ಮತ್ತು 3ನೇ ಹಂತದ ಮಾನವ ಪ್ರಯೋಗಕ್ಕೆ ಅನುಮತಿ: SII

ಕೊರೊನಾ ಲಸಿಕೆಯ 2 ಮತ್ತು 3ನೇ ಹಂತದ ಮಾನವ ಪ್ರಯೋಗಕ್ಕೆ ಅನುಮತಿ: SII

ಕೊರೊನಾ ಕುರಿತು ವಿಷಯ ತಜ್ಞರ ಸಮಿತಿ (ಎಸ್‌ಇಸಿ) ಯ ಶಿಫಾರಸುಗಳ ಆಧಾರದ ಮೇಲೆ ಸಮಗ್ರ ಮೌಲ್ಯಮಾಪನದ ನಂತರ ಎಸ್‌ಐಐಗೆ ಡಾ.ವಿ.ಜಿ.ಸೋಮಾನಿ ಭಾನುವಾರ ತಡರಾತ್ರಿ ಅನುಮೋದನೆ ನೀಡಿದ್ದಾರೆ.

- Advertisement -
- Advertisement -

ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ವತಿಯಿಂದ ಪುಣೆ ಮೂಲದ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಗೆ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಅಭ್ಯರ್ಥಿಗಳು ಅಭಿವೃದ್ಧಿಪಡಿಸಿದ ಕೊರೊನಾ ಲಸಿಕೆಯ 2 ಮತ್ತು 3ನೇ ಹಂತದ ಮಾನವ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಲು ಹಸಿರು ನಿಶಾನೆ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ.

ಕೊರೊನಾ ಕುರಿತು ವಿಷಯ ತಜ್ಞರ ಸಮಿತಿ (ಎಸ್‌ಇಸಿ) ಯ ಶಿಫಾರಸುಗಳ ಆಧಾರದ ಮೇಲೆ ಸಮಗ್ರ ಮೌಲ್ಯಮಾಪನದ ನಂತರ ಎಸ್‌ಐಐಗೆ ಡಾ.ವಿ.ಜಿ.ಸೋಮಾನಿ ಭಾನುವಾರ ತಡರಾತ್ರಿ ಅನುಮೋದನೆ ನೀಡಿದ್ದಾರೆ.

3 ನೇ ಹಂತದ ಕ್ಲಿನಿಕಲ್ ಪ್ರಯೋಗಗಳಿಗೆ ಮುಂದುವರಿಯುವ ಮೊದಲು ದತ್ತಾಂಶ ಸುರಕ್ಷತಾ ಮೇಲ್ವಿಚಾರಣಾ ಮಂಡಳಿಯು (ಡಿಎಸ್‌ಎಂಬಿ) ಮೌಲ್ಯಮಾಪನ ಮಾಡಿದ ಸುರಕ್ಷತಾ ದತ್ತಾಂಶವನ್ನು ಸಿಡಿಎಸ್‌ಕೊಗೆ ಸಲ್ಲಿಸಬೇಕು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಧ್ಯಯನದ ವಿನ್ಯಾಸದ ಪ್ರಕಾರ, ಪ್ರತಿಯೊಂದು ಘಟಕಕ್ಕೂ ನಾಲ್ಕು ವಾರಗಳ ಅಂತರದಲ್ಲಿ ಎರಡು ಡೋಸ್‌ಗಳನ್ನು ನೀಡಲಾಗುವುದು. (ಮೊದಲ ದಿನದಂದು ಡೋಸ್ ನೀಡಿದ ನಂತರ 29 ನೇ ದಿನದಂದು ಎರಡನೇ ಡೋಸ್) ನಂತರ ಸುರಕ್ಷತೆ ಮತ್ತು ಇಮ್ಯುನೊಜೆನೆಸಿಟಿಯನ್ನು ಪೂರ್ವನಿರ್ಧರಿತ ಮಧ್ಯಂತರದಲ್ಲಿ ನಿರ್ಣಯಿಸಲಾಗುತ್ತದೆ ಎಂದು ಅಧಿಕಾರಿ ಹೇಳಿದರು.

ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಎಸ್‌ಐಐ, ಬ್ರಿಟಿಷ್-ಸ್ವೀಡಿಷ್ ಕಂಪನಿ ಅಸ್ಟ್ರಾಜೆನೆಕಾ ಸಹಯೋಗದೊಂದಿಗೆ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಜೆನ್ನರ್ ಸಂಸ್ಥೆ ಅಭಿವೃದ್ಧಿಪಡಿಸಿದ ಸಂಭಾವ್ಯ ಲಸಿಕೆಯನ್ನು ತಯಾರಿಸುವ ಒಪ್ಪಂದಕ್ಕೆ ಸಹಿ ಹಾಕಿದೆ.

ಆಕ್ಸ್‌ಫರ್ಡ್ ಲಸಿಕೆ ಲಂಡನ್ ನಲ್ಲಿ 2 ಮತ್ತು 3 ನೇ ಹಂತದ ಕ್ಲಿನಿಕಲ್ ಪ್ರಯೋಗಗಳು, ಬ್ರೆಜಿಲ್‌ನಲ್ಲಿ 3 ನೇ ಹಂತ ಮತ್ತು ದಕ್ಷಿಣ ಆಫ್ರಿಕಾದಲ್ಲಿ 1 ಮತ್ತು 2 ನೇ ಹಂತದಲ್ಲಿ ಪ್ರಯೋಗಗಳು ನಡೆಯುತ್ತಿದೆ.

ಕೆಲವು ಹೆಚ್ಚುವರಿ ಮಾಹಿತಿಗಳನ್ನು ಪಡೆಯುವುದರ ಜೊತೆಗೆ ಕ್ಲಿನಿಕಲ್ ಪ್ರಯೋಗಗಳಿಗೆ ತನ್ನ ಪ್ರೋಟೋಕಾಲ್ ಅನ್ನು ಪರಿಷ್ಕರಿಸಲು ಜುಲೈ 28 ರಂದು ಎಸ್‌ಇಸಿ ಕೇಳಿದ ನಂತರ ಸೆರಮ್ ಸಂಸ್ಥೆ ಬುಧವಾರ ಪರಿಷ್ಕೃತ ಪ್ರಸ್ತಾವನೆಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧ್ಯಯನಕ್ಕಾಗಿ ಪ್ರಸ್ತಾಪಿಸಲಾದ ಕ್ಲಿನಿಕಲ್ ಟ್ರಯಲ್ ಸೈಟ್‌ಗಳನ್ನು ಭಾರತದಾದ್ಯಂತ ವಿತರಿಸಬೇಕೆಂದು ಸಮಿತಿ ಶಿಫಾರಸು ಮಾಡಿತ್ತು.

ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್ಕೊ)ನ ತಜ್ಞರ ಸಮಿತಿ, ತ್ವರಿತ ನಿಯಂತ್ರಕ ಪ್ರತಿಕ್ರಿಯೆಯಾಗಿ, ಭಾರತದ ಆರೋಗ್ಯವಂತ ವಯಸ್ಕರಲ್ಲಿ ‘ಕೋವಿಶೀಲ್ಡ್’ ಎಂಬ ಸಂಭಾವ್ಯ ಲಸಿಕೆಯ 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗಗಳಿಗೆ ಅನುಮತಿ ನೀಡುವಂತೆ ಶಿಫಾರಸು ಮಾಡಿತ್ತು.

ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್), ಪುಣೆಯ ಬಿಜೆ ವೈದ್ಯಕೀಯ ಕಾಲೇಜು, ರಾಜೇಂದ್ರ ಸ್ಮಾರಕ ಸಂಶೋಧನಾ ಸಂಸ್ಥೆ ಸೇರಿದಂತೆ ಆಯ್ದ 17 ತಾಣಗಳಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ 1,600 ಜನರು ಪ್ರಯೋಗಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸೆರಮ್ ಸಂಸ್ಥೆ ತನ್ನ ಪರಿಷ್ಕೃತ ಪ್ರಸ್ತಾವನೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಚಂದ್ರಯಾನ-2ರ ರೋವರ್ ಚಂದ್ರನ ಮೇಲಿದೆ: ಚೆನ್ನೈ ಮೂಲದ ಟೆಕ್ಕಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...