Homeಕರ್ನಾಟಕದೇವೇಗೌಡ ಕುಟುಂಬದವರು ಅಧಿಕಾರ ಸ್ಥಾನದಿಂದ ಹಿಂದೆ ಸರಿದರೆ ಮಾತ್ರ ಜೆಡಿಎಸ್‌ ಉಳಿವು ಸಾಧ್ಯ: ವೈ.ಎಸ್‌.ವಿ ದತ್ತ

ದೇವೇಗೌಡ ಕುಟುಂಬದವರು ಅಧಿಕಾರ ಸ್ಥಾನದಿಂದ ಹಿಂದೆ ಸರಿದರೆ ಮಾತ್ರ ಜೆಡಿಎಸ್‌ ಉಳಿವು ಸಾಧ್ಯ: ವೈ.ಎಸ್‌.ವಿ ದತ್ತ

- Advertisement -
- Advertisement -

ರಾಜ್ಯದಲ್ಲಿ ಜೆಡಿಎಸ್‌ ಗಟ್ಟಿಯಾಗಿದೆ ಎಂದರೆ ನಮಗೆ ನಾವೇ ಸುಳ್ಳು ಹೇಳಿಕೊಂಡಂತೆ. ಜೆಡಿಎಸ್‌ ಪಕ್ಷ ಕುಸಿಯುತ್ತಿದೆ. ಜನರಿಗೆ ಪ್ರಾದೇಶಿಕ ಪಕ್ಷದ ಮಹತ್ವದ ಮನವರಿಕೆಯಾಗಿಲ್ಲ ಜೆಡಿಎಸ್‌ನ ವೈ.ಎಸ್‌.ವಿ ದತ್ತ ಅಭಿಪ್ರಾಯಪಟ್ಟಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದೇವೇಗೌಡರು ತಮ್ಮ 86ನೇ ವಯಸ್ಸಿನಲ್ಲಿಯೂ ಕಷ್ಟಪಟ್ಟು ಪಕ್ಷ ಕಟ್ಟಿದ್ದಾರೆ. ಆದರೆ ಇತ್ತೀಚೆಗೆ ಜೆಡಿಎಸ್‌ ಕುಸಿಯುತ್ತಿದೆ, ಸಡಿಲವಗುತ್ತಿದೆ. ಇದಕ್ಕೆ ಕಾರಣ ಇದು ಕುಟುಂಬದ ಪಕ್ಷ ಎಂದು ಎದುರಾಳಿಗೆ ಆಡಿಕೊಳ್ಳಲು ನಾವೇ ಒಂದಷ್ಟು ಅಸ್ತ್ರ-ಶಸ್ತ್ರಗಳನ್ನು ಕೊಟ್ಟಿದ್ದೇವೆ. ಇದನ್ನು ಕುಮಾರಸ್ವಾಮಿ ಮತ್ತು ದೇವೆಗೌಡರಿಗೂ ಹೇಳಿದ್ದೇನೆ. ಇದರಲ್ಲಿ ನನಗ್ಯಾವ ಮುಜುಗರವೂ ಇಲ್ಲ. ನಾವು ಅಧಿಕಾರಕ್ಕೆ ರಾಜಕೀಯ ಮಾಡಿದವರಲ್ಲ. ತತ್ವ ಸಿದ್ದಾಂತಕ್ಕಾಗಿ ರಾಜಕಾರಣ ಮಾಡಿದ್ದೇವೆ.

ನಮ್ಮ ಪಕ್ಷವನ್ನು ಕಟ್ಟಬೇಕಾದರೆ ಮುಂದೆ ಒಂದು ತೀರ್ಮಾನ ಮಾಡಬೇಕಾಗಿದೆ. ಪ್ರದಾಶಿಕ ಪಕ್ಷ ಅಧಿಕಾರಕ್ಕೆ ಬರುವುದಾದರೆ, ದೇವೇಗೌಡರು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ನಮ್ಮ ಕುಟುಬಂದ ಯಾವೊಬ್ಬ ಸದಸ್ಯನು ಅಧಿಕಾರದ ಸ್ಥಾನಕ್ಕೆ ಬದರುವುದಿಲ್ಲ, ನಾವು  ದೂರ ಇದ್ದು ನಮ್ಮ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ, ತತ್ವಬದ್ಧವಾಗಿರುವವರನ್ನು ಅಧಿಕಾರದ ಸ್ಥಾನದಲ್ಲಿ ಕೂರಿಸುತ್ತೇವೆ ಎಂದು ಘೋಷಿಸಬೇಕು. ಆಗ ಮಾತ್ರ ಜೆಡಿಎಸ್‌ನ ಚೈತನ್ಯ ಸಾಧ್ಯ ಎಂದು ದತ್ತ ಹೇಳಿದ್ದಾರೆ.

ಪ್ರಾದೇಶಿಕ ಪಕ್ಷ ತುಂಬಾ ಅನಿವಾರ್ಯ. ತಮಿಳುನಾಡಿನಲ್ಲಿ ಸ್ಟಾಲಿನ್‌ ಇಲ್ಲದೇ, ಆಂದ್ರದಲ್ಲಿ ಜಗನ್‌-ಚಂದ್ರಬಾಬು ನಾಯ್ಡು ಇಲ್ಲದೆ ನಡೆಯೋಲ್ಲ. ತೆಲಂಗಾಣದಲ್ಲಿ ಕೆ.ಸಿ.ಆರ್‌ ಇಲ್ಲದೇ ಏನೂ ಕೆಲಸ ನಡೆಯುವುದಿಲ್ಲ.. ಆದರೆ ನಮ್ಮ ಕರ್ನಾಟಕದಲ್ಲಿ ಮಾತ್ರ ರಾಷ್ಟ್ರೀಯ ಪಕ್ಷಗಳದ್ದೇ ಕಾರುಬಾರು ಎಂದು ಅರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರದ್ಯಂತ ಬಿಜೆಪಿ ಕುಸಿಯುತ್ತಿದೆ. ಪ್ರಾದೇಶಿಕ ಪಕ್ಷಗಳನ್ನು ಊರುಗೋಲಾಗಿ ಇಟ್ಟುಕೊಂಡು ಕಾಂಗ್ರೆಸ್‌ ನಡೆಯುತ್ತಿದೆ. ಆದರೆ ರಾಜ್ಯದಲ್ಲಿ ಮಾತ್ರ ಅದಕ್ಕೆ ತದ್ವಿರುದ್ದವಾಗಿದೆ ಎಂದರು. ಪಕ್ಷಕ್ಕೆ ಚೈತನ್ಯ ತುಂಬಬೇಕಾಗಿದೆ.

ರಾಷ್ಟ್ರೀಯ ಪಕ್ಷಗಳಿಂದ ಸತತ ಅನ್ಯಾಯವಾಗುತ್ತಿದೆ:

ಕಾವೇರಿ ಸಮಸ್ಯೆ, ಮಹಾದಾಯಿ ಯೋಜನೆ, ಬೆಳಗಾವಿ ವಿವಾದ ಈ ರೀತಿಯ ಹಲವಾರು ಸಮಸ್ಯೆಗಳು ಕರ್ನಾಟಕ ರಾಜ್ಯವನ್ನು ಕಾಡುತ್ತಿದ್ದರೂ ಪ್ರಾದೇಶಿಕ ಪಕ್ಷಗಳ ಬಗ್ಗೆ ಕರ್ನಾಟಕದ ಜನರಿಗೆ ಅರಿವಾಗಿಲ್ಲ, ರಾಷ್ಟ್ರೀಯ ಪಕ್ಷಗಳಿಂದ ಸತತವಾಗಿ ಅನ್ಯಾಯವಾಗುತ್ತಿದೆ ಎಂದು ಜೆಡಿಎಸ್‌ನ ವೈ.ಎಸ್‌.ವಿ ದತ್ತ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಬ್ಬರಿಗೆ ಒಂದು ಹುದ್ದೆ ಎಂಬಂತೆ ,ಕುಟುಂಬಕ್ಕೆ ಒಂದೇ ಹುದ್ದೆ ಎಂದರೆ ತುಸು ಸರಿಹೋಗಬಹುದು.

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...