Homeಮುಖಪುಟನೂಪುರ್ ಶರ್ಮಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರ ಮೇಲೆ ವಯಕ್ತಿಕ ದಾಳಿ

ನೂಪುರ್ ಶರ್ಮಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರ ಮೇಲೆ ವಯಕ್ತಿಕ ದಾಳಿ

- Advertisement -
- Advertisement -

ಪ್ರವಾದಿ ಮೊಹಮ್ಮದ್‌ರವರನ್ನು ನಿಂದಿಸಿದ್ದ ಬಿಜೆಪಿಯ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಅವರ ವಿರುದ್ಧ ಮೌಖಿಕ ಹೇಳಿಕೆ ನೀಡಿದ್ದ ನ್ಯಾಯಾಧೀಶರಿಗೆ ವಯಕ್ತಿಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ.

ಜಸ್ಟಿಸ್ ಸೂರ್ಯಕಾಂತ್ ಮತ್ತು ಜಸ್ಟಿಸ್ ಜೆ.ಪಿ ಪರ್ದಿವಾಲ ಅವರಿದ್ದ ಪೀಠವು ಎಲ್ಲಾ ಎಫ್‌ಐಆರ್‌ಗಳನ್ನು ಒಂದೇ ಎಂದು ಪರಿಗಣಿಸಿ ವಿಚಾರಣೆ ನಡೆಸುವಂತೆ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. “ದೇಶದಲ್ಲಿ ಉಂಟಾದ ಉದ್ವಿಗ್ನ ವಾತಾವರಣಕ್ಕೆ ನೂಪುರ್ ಶರ್ಮಾ ಒಬ್ಬರೆ ಕಾರಣವಾಗಿದ್ದಾರೆ, ಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ” ಎಂದು ಕಿಡಿಕಾರಿತ್ತು.

ಅದಾದ ನಂತರ ಅವರಿಬ್ಬರಿಗೂ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಬಂದಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ನ್ಯಾಯಾಧೀಶ ಪರ್ದಿವಾಲರವರು “ನ್ಯಾಯಾಧೀಶರು ತಮ್ಮ ತೀರ್ಪುಗಳಿಗಾಗಿ ವೈಯಕ್ತಿಕ ದಾಳಿಗೆ ಒಳಗಾಗುವುದು ಅಪಾಯಕಾರಿ ಸನ್ನಿವೇಶಕ್ಕೆ ಕಾರಣವಾಗುತ್ತವೆ. ಆಗ ನ್ಯಾಯಾಧೀಶರು ಕಾನೂನು ಏನು ಯೋಚಿಸುತ್ತದೆ ಎಂಬುದರ ಬದಲಿಗೆ ಮಾಧ್ಯಮಗಳು ಏನು ಯೋಚಿಸುತ್ತವೆ ಎಂಬುದರ ಕುರಿತು ಯೋಚಿಸಬೇಕಾಗುತ್ತದೆ. ಇದು ಕಾನೂನಿನ ನಿಯಮಕ್ಕೆ ಹಾನಿ ಮಾಡುತ್ತದೆ” ಎಂದಿದ್ದಾರೆ.

ನ್ಯಾಯಾಧೀಶರ ವಿರುದ್ಧ ರಚನಾತ್ಮಕ ವಿಮರ್ಶಾತ್ಮಕ ಮೌಲ್ಯಮಾಪನಕ್ಕಿಂತ ಹೆಚ್ಚಾಗಿ ವೈಯಕ್ತೀಕರಿಸಿದ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ನ್ಯಾಯಾಂಗ ಸಂಸ್ಥೆಗೆ ಹಾನಿ ಮತ್ತು ಅದರ ಘನತೆಯನ್ನು ಕಡಿಮೆ ಮಾಡುತ್ತದೆ. ತೀರ್ಪುಗಳ ಪರಿಹಾರವು ಸಾಮಾಜಿಕ ಮಾಧ್ಯಮದಲ್ಲಿ ಅಲ್ಲ ಆದರೆ ಶ್ರೇಣಿಯ ಉನ್ನತ ನ್ಯಾಯಾಲಯಗಳಲ್ಲಿದೆ ಎಂದಿದ್ದಾರೆ.

ಸಂವಿಧಾನದ ಅಡಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ದೇಶದಾದ್ಯಂತ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮವನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ ಸುಪ್ರೀಂ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದಕ್ಕಾಗಿ OPIndia ಮತ್ತು ಅದರ ಸಂಪಾದಕಿ ನೂಪುರ್ ಜೆ ಶರ್ಮಾ ವಿರುದ್ಧ ಟಿಎಂಸಿ ಮುಖಂಡ ಸಾಕೇತ್ ಗೋಖಲೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಬಿಜೆಪಿ ಮುಖವಾಣಿ OPIndia ಮತ್ತು ಅದರ ಸಂಪಾದಕಿ ನೂಪುರ್ ಜೆ ಶರ್ಮಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಕೋರಿ ಭಾರತದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರಿಗೆ ಪತ್ರ ಬರೆಯಲಾಗಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ಗೆ ಅವಮಾನ – OPIndia, ನೂಪುರ್ ಜೆ ಶರ್ಮಾ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

ಜುಲೈ 1 ರಂದು OPIndia ದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ “ಸುಪ್ರೀಂ ಕೋರ್ಟ್ ಇಸ್ಲಾಂ ಧರ್ಮೀಯರಂತೆ ಮಾತನಾಡುತ್ತದೆ, ಇಸ್ಲಾಮಿಕ್ ಮತಾಂಧರಿಂದ ಹಿಂದೂ ವ್ಯಕ್ತಿಯ ಶಿರಚ್ಛೇದಕ್ಕೆ ನೂಪುರ್ ಶರ್ಮಾ ಅವರ ‘ಸಡಿಲ ನಾಲಿಗೆ’ಯನ್ನು ದೂರುವ ಮೂಲಕ ಕೆಟ್ಟ ವಿಚಾರಣೆ ನಡೆಸುತ್ತದೆ. ಸುಪ್ರೀಂ ಕೋರ್ಟ್ ಷರಿಯಾವನ್ನು ಅನುಸರಿಸುತ್ತದೆಯೇ?” ಎಂದು ಟ್ವೀಟ್ ಮಾಡುವ ಮೂಲಕ ಅವಮಾನ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಸತ್ಯ ಹೇಳಿದಾಗ ವೈಯುಕ್ತಿಕವಾಗಿ ದಾಳಿ ಮಾಡೋದು ಈ ಪ್ರಕರಣದಲ್ಲಿ ಹಲವು ಮತಾಂಧರ ಕುಕೃತ್ಯವಾಗಿದೆ,ಮಾನ್ಯ ನ್ಯಾಯಮೂರ್ತಿಗಳೇ,ಇದರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ತಾವು ಸಂವಿಧಾನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದ್ದೀರಿ, ತಾವು ದೇಶದ ಸಂವಿಧಾನಕ್ಕೆ ಉತ್ತರದಾಯಿಗಳೇ ಹೊರತು ಇಂತಹ ಮತಾಂಧ ಕಿಡಗೇಡಿ ಗಳಿಗಲ್ಲ.

  2. ಮೊದಲು ದೇಶಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದು ಆಲ್ಟ ನ್ಯೂಸ್ ನ ಜುಬೇರ್ ನನ್ನ ಗೆಲ್ಲಿಗೇರಿಸುವ ಕೆಲಸ ಮಾಡಬೇಕು ,ಅದುಬಿಟ್ಟು ಇಸ್ಲಾಮ್ ನಲ್ಲಿನ ನೈಜ ಅಂಶಗಳ ಬಗ್ಗೆ ಮಾತನಾಡಿದ ನೂಪುರ್ ಶರ್ಮ ಬಗ್ಗೆ ಮೌಖಿಕ ಸೂಚನೆ ನೀಡುವ ಮೊದಲು ಯೋಚಿಸಬೇಕು

  3. ಮೊದಲು ದೇಶಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದು ಆಲ್ಟ ನ್ಯೂಸ್ ನ ಜುಬೇರ್ ನನ್ನ ಗೆಲ್ಲಿಗೇರಿಸುವ ಕೆಲಸ ಮಾಡಬೇಕು ,ಅದುಬಿಟ್ಟು ಭಶೀರರ ಧರ್ಮದ ನೈಜ ಅಂಶಗಳ ಬಗ್ಗೆ ಮಾತನಾಡಿದ ನೂಪುರ್ ಶರ್ಮ ಬಗ್ಗೆ ಮೌಖಿಕ ಸೂಚನೆ ನೀಡುವ ಮೊದಲು ಯೋಚಿಸಬೇಕು

  4. ನ್ಯಾಯಧೀಶರೆ ನೀವು ತಲೆ ಕೆಡಿಸಿಕೊಳ್ಳಬೇಡಿ ಅವುಗಳು ಹೇಸಿಗೆ ತಿನ್ನೋ ಜಾತಿಗೆ ಸೇರಿವೆ ಏನೇ ಬೊಗಳಿದರು ನೀವು ಸಂವಿದಾನಾತ್ಮಕ ತೀರ್ಪು ಕೊಡಿ. ಕೆಲವು ಹುಚ್ಚು ನಾಯಿಗಳು ಅಂತೂ ಒಂದು ಧರ್ಮದ ಬಗ್ಗೆ ಹಗುರವಾಗಿ ಮಾತಾಡಿದ್ರೆ ಅವ್ರಿಗೆ ಹೀರೋ ಅಂತ ಸ್ವೀಕಾರ ಮಾಡತವರೇ. ಹೇಸಿಗೆಯಲ್ಲಿನ ಹುಳುಗಳು ಅದರ ಆಚೆ ಬರಲು ಇಷ್ಟ ಪಡೋದಿಲ್ಲ. ಈ ಹಲ್ಕಟ್ ಸೂ.. ಮ ###ನೆಟ್ಟಗೆ ಅವರ ಅವರ ಧರ್ಮ ಗ್ರಂಥಗಳು ಓದಿದರೆ ಸಾಕು ಬೇರೆ ಧರ್ಮ ಗ್ರಂಥ ಓದೋದು ಬೇಡ.

  5. ನಮ್ಮ ದೇಶ ಸಂದಿಗ್ಧ ಪರಿಸ್ಥಿತಿಯಲ್ಲಿದೆ. ದೇಶ ಉಳಿಯಬೇಕೆಂದರೆ ದೇಶದ ಶ್ರೇಷ್ಠ ನ್ಯಾಯಾಲಯ ನಿಷ್ಪಕ್ಷಪಾತವಾಗಿ ನಿರ್ಭಯವಾಗಿ ದಿಟ್ಟತನದಿಂದ ಕಾರ್ಯ ನಿರ್ವಹಿಸಿದರೆ ಮಾತ್ರ ಸಾದ್ಯ. ಬಿ.ಜೆ.ಪಿ. ಆರ್.ಎಸ್ಸ್.ಎಸ್ಸ್. ರವರ ಕುತಂತ್ರಗಳಿಗೆ ನಾಯಾಧೀಶರಗಳು ಹೆದರ ಬೇಕಾಗಿಲ್ಲ. ದೇಶ ಪ್ರಜೆಗಳು ನಿಮ್ಮ ಜೊತೆ ಇರುತ್ತಾರೆ.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...