Homeಮುಖಪುಟಅಂಬಾನಿಯ Z+ ಭದ್ರತೆ ವಿರುದ್ಧ ಅರ್ಜಿ | ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್

ಅಂಬಾನಿಯ Z+ ಭದ್ರತೆ ವಿರುದ್ಧ ಅರ್ಜಿ | ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ನೀಡಲಾದ Z+ ಭದ್ರತೆಯನ್ನು ಪದೇ ಪದೇ ಪ್ರಶ್ನಿಸಿದ್ದ ಅರ್ಜಿದಾರರನ್ನು ಸುಪ್ರೀಂಕೋರ್ಟ್ ಶುಕ್ರವಾರ ಟೀಕಿಸಿದೆ. ಬಿಕಾಶ್ ಸಹಾ ಎಂಬವರು ಸಲ್ಲಿಸಿದ ಅರ್ಜಿಯಲ್ಲಿ, ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ನೀಡಲಾದ Z+ ಭದ್ರತಾ ರಕ್ಷಣೆಯನ್ನು ರದ್ದುಗೊಳಿಸಲು ನಿರ್ದೇಶನ ನೀಡುವಂತೆ ಕೋರಲಾಗಿತ್ತು. ಅಂಬಾನಿಯ Z+ ಭದ್ರತೆ

ಬಿಕಾಶ್‌ ಅವರ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದ್ದಲ್ಲದೆ, ಈ ವಿಷಯವನ್ನು ಮುಂದುವರಿಸಿದರೆ ಅಥವಾ ಭವಿಷ್ಯದಲ್ಲಿ ಇದೇ ರೀತಿಯ ಅರ್ಜಿಗಳನ್ನು ಸಲ್ಲಿಸಿದರೆ ಭಾರಿ ದಂಡಗಳನ್ನು ವಿಧಿಸುವುದಾಗಿ ಎಚ್ಚರಿಸಿದೆ.

“ಬೆದರಿಕೆ ಮಾಹಿತಿಗಳನ್ನು ಸರಿಯಾಗಿ ಮೌಲ್ಯಮಾಪನ ಮಾಡಿದ ನಂತರ ಸರ್ಕಾರವು ಒದಗಿಸಿದ ಭದ್ರತೆಯನ್ನು ಪ್ರಶ್ನಿಸಲು ಅರ್ಜಿದಾರರಿಗೆ (ಬಿಕಾಶ್ ಶಾ) ಯಾವುದೇ ಅರ್ಹತೆ ಇಲ್ಲ. ಈ ಬಗ್ಗೆ ಯಾವುದೇ ಮುಂದಿನ ಪ್ರಕ್ರಿಯೆಗಳು ನಡೆದರೆ ನ್ಯಾಯಾಲಯವು ಅವರ ಮೇಲೆ ಭಾರಿ ದಂಡವನ್ನು ವಿಧಿಸುತ್ತೇವೆ ಎಂದು ನಾವು ಎಚ್ಚರಿಸಿದ್ದೇವೆ” ಎಂದು ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ದ್ವಿ ಸದಸ್ಯ ನ್ಯಾಯಾಧೀಶರ ರಜಾ ಪೀಠ ಹೇಳಿದೆ.

ಶುಕ್ರವಾರ ಆದೇಶವನ್ನು ಅಂಗೀಕರಿಸುವಾಗ, ಮುಖೇಶ್ ಅಂಬಾನಿ, ಅವರ ಪತ್ನಿ ನೀತಾ ಅಂಬಾನಿ ಮತ್ತು ಮಕ್ಕಳಾದ ಅನಂತ್, ಆಕಾಶ್ ಮತ್ತು ಇಶಾ ಅವರಿಗೆ ಒದಗಿಸಲಾದ Z+ ಭದ್ರತಾ ರಕ್ಷಣೆಯನ್ನು ಮುಂದುವರಿಸಬೇಕು ಎಂದು ಸುಪ್ರೀಂಕೋರ್ಟ್ ಪೀಠ ಪುನರುಚ್ಚರಿಸಿದೆ.

ಬಿಕಾಶ್‌ ಅವರ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್, “ಯಾರಿಗೆ ಯಾವ ಭದ್ರತೆ ನೀಡಬೇಕೆಂದು ನಿರ್ಧರಿಸುವುದು ಸುಪ್ರೀಂಕೋರ್ಟ್ ಆಗಿದೆಯೇ? ಇದು ಹೊಸದಾಗಿ ಕಾಣಿಸಿಕೊಂಡಿರುವ ವಿಷಯ. ನ್ಯಾಯಶಾಸ್ತ್ರದ ಹೊಸ ಪ್ರಕಾರವಾಗಿದೆ. ಇದು ನಮ್ಮ ಕ್ಷೇತ್ರವೇ?” ಎಂದು ಹೇಳಿದೆ.

ಬಿಕಾಶ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಾಲಯ, “ಬೆದರಿಕೆಯ ಗ್ರಹಿಕೆಯನ್ನು ನಿರ್ಧರಿಸಲು ನೀವು ಯಾರು? ಭಾರತ ಸರ್ಕಾರ ಅದನ್ನು ನಿರ್ಧರಿಸುತ್ತದೆ, ಅಲ್ಲವೇ? ನಾಳೆ, ಏನಾದರೂ ಅಪಘಾತ ಸಂಭವಿಸಿದಲ್ಲಿ, ನೀವು ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೀರಾ? ಅಥವಾ ನ್ಯಾಯಾಲಯವು ಅದರ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೆಯೇ?” ಎಂದು ಪ್ರಶ್ನಿಸಿದೆ.

“ಈ ರೀತಿ ಮಾಡಬೇಡಿ, ಇದು ತುಂಬಾ ಗಂಭೀರ ವಿಚಾರವಾಗಿದ್ದು, ಈ ಬಗ್ಗೆ ನಾವು ನಿಮಗೆ ಎಚ್ಚರಿಕೆ ನೀಡುತ್ತಿದ್ದೇವೆ. ಇಲ್ಲಿ ಕಸಿದುಕೊಳ್ಳಲು ಚಿನ್ನದ ಗಣಿ ಇದೆ ಎಂದು ಭಾವಿಸಬೇಡಿ ಮತ್ತು ನಿಮ್ಮ ಪ್ರಕ್ರಿಯೆಯನ್ನು ಸುಗಮಗೊಳಿಸಲು ನಾವು ಇಲ್ಲಿ ಕೂತಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ವಿಚಾರಣೆಯ ಸಮಯದಲ್ಲಿ, ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬದ ಹಿರಿಯ ವಕೀಲ ಮತ್ತು ಭಾರತದ ಮಾಜಿ ಅಟಾರ್ನಿ ಜನರಲ್ (ಎಜಿ) ಮುಕುಲ್ ರೋಹಟ್ಗಿ ಅವರು ಅರ್ಜಿಯನ್ನು ಆಕ್ಷೇಪಿಸಿದರು. “ಬೆದರಿಕೆಯ ಗ್ರಹಿಕೆಯನ್ನು ಪರಿಗಣಿಸಿ ಸರ್ಕಾರವು ಅವರಿಗೆ ಭದ್ರತೆ ನೀಡಿದೆ. ಈ ಸಂಭಾವಿತ ವ್ಯಕ್ತಿ (ಬಿಕಾಶ್)ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಅವರು ಹೇಳಿದ್ದಾರೆ. ಅಂಬಾನಿಯ Z+ ಭದ್ರತೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕುಸಿದ ಮಾವು ದರ; ರೈತರ ನೆರವಿಗೆ ನಿಲ್ಲುವಂತೆ ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಸಿಎಂ

ಕುಸಿದ ಮಾವು ದರ; ರೈತರ ನೆರವಿಗೆ ನಿಲ್ಲುವಂತೆ ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...