Homeಮುಖಪುಟಬಿಎನ್‌ಎಸ್‌ ಸೆಕ್ಷನ್ 152ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಅರ್ಜಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಬಿಎನ್‌ಎಸ್‌ ಸೆಕ್ಷನ್ 152ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಅರ್ಜಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

- Advertisement -
- Advertisement -

ಭಾರತೀಯ ನ್ಯಾಯ ಸಂಹಿತೆಯ(ಬಿಎನ್‌ಎಸ್‌) ಸೆಕ್ಷನ್ 152ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ (ಆ.8) ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಕ್ರಿಮಿನಲ್ ಕಾನೂನು ಬಿಎನ್ಎಸ್‌ನ ಸೆಕ್ಷನ್ 152 ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳ ವಿರುದ್ದ ಕ್ರಮ ಕೈಗೊಳ್ಳುವುದಕ್ಕೆ ಸಂಬಂಧಿಸಿದೆ. ‘ಉದ್ದೇಶಪೂರ್ವಕವಾಗಿ ಪ್ರತ್ಯೇಕತೆ, ದಂಗೆ ಅಥವಾ ವಿಧ್ವಂಸಕ ಚಟುವಟಿಕೆಗಳನ್ನು ಪ್ರಚೋದಿಸುವ ಅಥವಾ ಪ್ರಚೋದಿಸಲು ಪ್ರಯತ್ನಿಸುವುದರ ವಿರುದ್ದದ ಇದರಡಿ ಕ್ರಮ ಜರುಗಿಸಲಾಗುತ್ತದೆ.

‘ದೇಶದ್ರೋಹ ಕಾನೂನು’ ಎಂದು ಸುಲಭವಾಗಿ ಹೇಳುವ ಈ ವಸಾಹತುಶಾಹಿ ಕಾನೂನು, ಈ ಹಿಂದಿನ ಭಾರತೀಯ ದಂಡ ಸಂಹಿತೆಯ(ಐಪಿಸಿ) ಸೆಕ್ಷನ್ 124A ಯನ್ನು ಮತ್ತೊಮ್ಮೆ ಪರಿಚಯಿಸಿದಂತಿದೆ. ಕೇವಲ ಸಂಖ್ಯೆ ಬದಲಾಗಿದೆಯೇ ಹೊರತು, ನಿಬಂಧನೆಗಳು ಬದಲಾಗಿಲ್ಲ ಎಂದು ಅರ್ಜಿದಾರರು ಹೇಳಿದ್ದಾರೆ.

ಭಾರತೀಯ ಸೇನೆಯ ನಿವೃತ್ತ ಮೇಜರ್ ಜನರಲ್ ಎಸ್.ಜಿ. ವೊಂಬತ್ಕೆರೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ಪೀಠವು, ಅದೇ ನಿಬಂಧನೆಯನ್ನು ಪ್ರಶ್ನಿಸಿ ಬಾಕಿ ಇರುವ ಮತ್ತೊಂದು ಪ್ರಕರಣದೊಂದಿಗೆ ನೋಟಿಸ್ ಜಾರಿ ಮಾಡಿದೆ.

ವೊಂಬತ್ಕೆರೆ ತಮ್ಮ ಅರ್ಜಿಯಲ್ಲಿ, ಈ ಹಿಂದಿನ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A ಅಡಿಯಲ್ಲಿ ದೇಶದ್ರೋಹದ ವಿಚಾರಣೆಗಳು ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ಸ್ಥಗಿತಗೊಳಿಸಲು ನ್ಯಾಯಾಲಯವು ಮೇ 2022 ರಲ್ಲಿ ಆದೇಶಿಸಿದೆ ಎಂದು ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಆದಾಗ್ಯೂ, ಜುಲೈ 2024ರಲ್ಲಿ ಭಾರತೀಯ ನ್ಯಾಯ ಸಂಹಿತೆಯನ್ನು ಭಾರತೀಯ ದಂಡ ಸಂಹಿತೆ ಬದಲಾಯಿಸಿದಾಗ ಸೆಕ್ಷನ್ 124A ಅನ್ನು ಸೆಕ್ಷನ್ 152 ರ ರೂಪದಲ್ಲಿ ಮತ್ತೆ ಕಾನೂನಿನೊಳಗೆ ಸೇರಿಸಲಾಯಿತು ಎಂದು ಅರ್ಜಿದಾರರು ವಾದಿಸಿದ್ದಾರೆ.

ಹೊಸ ಸೆಕ್ಷನ್ 1860ರ ಐಪಿಸಿಯ ದೇಶದ್ರೋಹದ ಸೆಕ್ಷನ್ 124Aಯ ಹೊಸ ರೂಪವಲ್ಲದೆ ಮತ್ತೇನಲ್ಲ. ಹೊಸ ಸೆಕ್ಷನ್ ಪರಿಚಯಿಸಿದ ರೀತಿ ಬದಲಾಗಿರಬಹುದು. ಆದರೆ, ಅದರ ಅರ್ಥ ಹಳೆಯದ್ದೆ ಎಂದು ಅರ್ಜಿದಾರರು ಹೇಳಿದ್ದಾರೆ ಎಂದು ವರದಿಯಾಗಿದೆ.

ಬಿಎನ್‌ಎಸ್‌ ಸೆಕ್ಷನ್ 152 ಸಂವಿಧಾನದ ವಿಧಿ 14, 19(1)(ಎ) ಮತ್ತು 21ರ ಅಡಿಯಲ್ಲಿ ನೀಡಲಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಸಂವಿಧಾನದ ವಿಧಿ 14 ಸಮಾನತೆ, 19(1)(ಎ) ವಾಕ್ ಸ್ವಾತಂತ್ರ್ಯ ಮತ್ತು 21 ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸುತ್ತದೆ.

2020ರ ದೆಹಲಿ ಗಲಭೆ ಪ್ರಕರಣ: ಸಿಎಎ ವಿರೋಧಿ ಹೋರಾಟಗಾರ ಖಾಲಿದ್ ಸೈಫಿಗೆ 10 ದಿನಗಳ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...