Homeಮುಖಪುಟಆರ್ಟಿಕಲ್ 370ರ ರದ್ದತಿ ಪ್ರಶ್ನಿಸಿ ಅರ್ಜಿ: ಸಿಜೆಐ ಚಂದ್ರಚೂಡ್ ನೇತೃತ್ವದಲ್ಲಿ ಐವರು ನ್ಯಾಯಾಧೀಶರ ಸಂವಿಧಾನ ಪೀಠ...

ಆರ್ಟಿಕಲ್ 370ರ ರದ್ದತಿ ಪ್ರಶ್ನಿಸಿ ಅರ್ಜಿ: ಸಿಜೆಐ ಚಂದ್ರಚೂಡ್ ನೇತೃತ್ವದಲ್ಲಿ ಐವರು ನ್ಯಾಯಾಧೀಶರ ಸಂವಿಧಾನ ಪೀಠ ರಚನೆ

- Advertisement -
- Advertisement -

ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ಕಿತ್ತುಹಾಕಲು ಆರ್ಟಿಕಲ್ 370 ರದ್ದು ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಲು ಸಿಜೆಐ ಚಂದ್ರಚೂಡ್ ನೇತೃತ್ವದಲ್ಲಿ ಐವರು ನ್ಯಾಯಾಧೀಶರ ಸಂವಿಧಾನ ಪೀಠ ರಚಿಸಲಾಗಿದೆ.

ಶಾ ಫೈಸಲ್ ಮತ್ತು ಇತರರು ಭಾರತ ಸರ್ಕಾರದ ವಿರುದ್ಧ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಂವಿಧಾನ ಪೀಠ ರಚಿಸಲಾಗಿದೆ.

ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಜುಲೈ 11 ರಂದು ವಿಚಾರಣೆ ಆರಂಭಿಸಲಿದ್ದಾರೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಆಗಸ್ಟ್ 5, 2019 ರಂದು ಸಂವಿಧಾನದ ಆರ್ಟಿಕಲ್ 370ರನ್ನು ರದ್ದುಗೊಳಿಸುವ ಮೂಲಕ ಹಿಂದಿನ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಯಿತು. ಅಲ್ಲದೇ ಜಮ್ಮು ಮತ್ತು ಕಾಶ್ಮೀರದ ರಾಜ್ಯದ ಸ್ಥಾನಮಾನ ತೆಗೆದು ಲಡಾಕ್ ಮತ್ತು ಜಮ್ಮು ಕಾಶ್ಮೀರ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಮಾಡಲಾಗಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಜನರ ಮನೆಗಳಿಗೆ ನುಗ್ಗುತ್ತಿವೆ: ಮೆಹಬೂಬಾ ಮುಫ್ತಿ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ದೆಹಲಿ ಜನರು ನಮಗೆ 56% ಮತ ನೀಡಿದ್ದಾರೆ, ಅವರು ಪಾಕಿಸ್ತಾನಿಗಳೇ..?’; ಅಮಿತ್‌ ಶಾ ವಿರುದ್ಧ...

0
'ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದ ಕಾರಣ ಅವರು ಅಹಂಕಾರಿಯಾಗಿದ್ದಾರೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್...