Homeಮುಖಪುಟಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ : ಆರೋಪಿಗಳ ವಿರುದ್ಧದ ಎಫ್‌ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ...

ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ : ಆರೋಪಿಗಳ ವಿರುದ್ಧದ ಎಫ್‌ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಸೀದಿ ಆವರಣಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ.

ಮಸೀದಿಯ ಆವರಣದೊಳಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿ 2024ರ ಸೆಪ್ಟೆಂಬರ್ 13ರಂದು ಹೈಕೋರ್ಟ್‌ ಆದೇಶಿಸಿತ್ತು.

ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಪ್ರಕರಣವನ್ನು ರದ್ದುಗೊಳಿಸುವಾಗ “ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗೆ ಹೇಗೆ ಧಕ್ಕೆಯಾಗುತ್ತದೆ ಎಂದು ಅರ್ಥವಾಗುತ್ತಿಲ್ಲ. ದೂರುದಾರರು ಖುದ್ದು ಹೇಳಿರುವಂತೆ ಆ ಭಾಗದಲ್ಲಿ ಹಿಂದೂಗಳು ಮತ್ತು ಮುಸಲ್ಮಾನರು ಒಟ್ಟಾಗಿ ಸೌರ್ಹಾದತೆಯಿಂದ ಜೀವಿಸುತ್ತಿದ್ದಾರೆ. ಹೀಗಿರುವಾಗ ಅರ್ಜಿದಾರರ ವಿರುದ್ಧ ಮುಂದಿನ ಪ್ರಕ್ರಿಯೆಗಳಿಗೆ ಅನುಮತಿ ನೀಡುವುದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗುತ್ತದೆ” ಎಂದಿದ್ದರು.

ಮಹೇಂದ್ರ ಸಿಂಗ್ ಧೋನಿ ವರ್ಸಸ್ ಯರ್ರಗುಂಟ್ಲ ಶ್ಯಾಮಸುಂದರ್ (2017) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿದ್ದ ನ್ಯಾಯಮೂರ್ತಿ, ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರದ ಹೋರತಾಗಿ ಯಾವುದೇ ಪ್ರಕರಣವು ಭಾರತೀಯ ದಂಡ ಸಂಹಿತೆ ಸೆಕ್ಷನ್ 295 ಎ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ಹೇಳಿದ್ದರು.

ಪ್ರಕರಣದ ಹಿನ್ನೆಲೆ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ಬದ್ರಿಯಾ ಜುಮ್ಮಾ ಮಸೀದಿಯ ಆವರಣಕ್ಕೆ 2023ರ ಸೆಪ್ಟೆಂಬರ್‌ 24 ರಂದು ರಾತ್ರಿ ಸುಮಾರು 10.50 ರ ಸಮಯಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದು, ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ ಎಂದು ಬೊಬ್ಬೆ ಹಾಕಿದ್ದಾರೆ ಎಂದು ಆರೋಪಿಸಿ ಮಸೀದಿ ಸಿಬ್ಬಂದಿ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ದೂರಿನ ಅನ್ವಯ ಇಬ್ಬರು ಆರೋಪಿಗಳಾದ ಪುತ್ತೂರಿನ ಬಿಳಿನೆಲೆ ಗ್ರಾಮದ ಕೀರ್ತನ್ ಮತ್ತು ಮಂಗಳೂರಿನ ಕೈಕಂಬದ ಸಚಿನ್ ವಿರುದ್ಧ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣಕ್ಕೆ ಶಿಕ್ಷೆ), 505 (ಸಾರ್ವಜನಿಕ ಕಿರುಕುಳಕ್ಕೆ ಕಾರಣವಾಗುವ ಹೇಳಿಕೆಗಳು), 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), 34 (ಸಾಮಾನ್ಯ ಉದ್ದೇಶ) ಮತ್ತು 295 ಎ ಅಡಿ ಎಫ್‌ಐಆರ್‌ ದಾಖಲಿಸಲಾಗಿತ್ತು.

ಇದರ ರದ್ದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಇಬ್ಬರ ವಿರುದ್ದ ದಾಖಲಾಗಿದ್ದ ಎಫ್‌ಐಆರ್ ಮತ್ತು ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿತ್ತು.

ಇದನ್ನೂ ಓದಿ : ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್​​  ಸೇರಿದಂತೆ ಒಟ್ಟು 7 ಮಂದಿಗೆ ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...