Homeಚಳವಳಿನಟಿ ಸ್ವರ ಭಾಸ್ಕರ್ ವಿರುದ್ದ ನ್ಯಾಯಾಂಗ ನಿಂದನೆ ವಿಚಾರಣೆ ಆರಂಭಿಸಲು ಕೋರಿ ಅರ್ಜಿ

ನಟಿ ಸ್ವರ ಭಾಸ್ಕರ್ ವಿರುದ್ದ ನ್ಯಾಯಾಂಗ ನಿಂದನೆ ವಿಚಾರಣೆ ಆರಂಭಿಸಲು ಕೋರಿ ಅರ್ಜಿ

ಸ್ವರ ಭಾಸ್ಕರ್ ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು ಮುಂಬೈನಲ್ಲಿ ನಡೆದ ಹಲವು ಪ್ರತಿಭಟನೆಗಳಲ್ಲಿ ಸಕ್ರಿವಾಗಲಿ ಭಾಗವಹಿಸಿದ್ದರು. ಬಾಲಿವುಡ್ ನಟಿಯಾಗಿ ತಮ್ಮ ಸಹ ಕಲಾವಿದರು ಸಹ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಪ್ರೇರಿಪಿಸಿದ್ದರು.

- Advertisement -
- Advertisement -

ನಟಿ ಸ್ವರ ಭಾಸ್ಕರ್ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಲು ಕೋರಿ ಭಾರತದ ಅಟಾರ್ನಿ ಜನರಲ್ ಮುಂದೆ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಾಂಗ ನಿಂದನೆ ಕಾಯ್ದೆ 1975ರ ಸೆಕ್ಷನ್ 15ರ ರೂಲ್ 3ರ ಅಡಿಯಲ್ಲಿ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

2020 ರ ಫೆಬ್ರವರಿಯಲ್ಲಿ ಮುಂಬೈನಲ್ಲಿ ನಡೆದ “ಕೋಮುವಾದದ ವಿರುದ್ಧ ಕಲಾವಿದರು” ಎಂಬ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು “ನ್ಯಾಯಾಲಯಗಳು ಸಂವಿಧಾನವನ್ನು ನಂಬುತ್ತವೆಯೇ ಎಂದು ಖಚಿತವಾಗಿಲ್ಲ” ಎಂದು ಹೇಳುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅರ್ಜಿಯ ಪ್ರಕಾರ, ಸ್ವರ ಭಾಸ್ಕರ್, “ಬಾಬರಿ ಮಸೀದಿ ನೆಲಸಮ ಮಾಡುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟಿನ ತೀರ್ಪಿನಲ್ಲಿ ಹೇಳುವ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ ಮತ್ತು ಅದೇ ತೀರ್ಪಿನಲ್ಲಿ ಮಸೀದಿಯನ್ನು ಉರುಳಿಸಿದ ಜನರಿಗೆ ಬಹುಮಾನ ನೀಡಲಾಗುತ್ತದೆ” ಎಂದು ಹೇಳಿದ್ದಾಗಿ ಉಲ್ಲೇಖಿಸಲಾಗಿದೆ.

ಅವರ ಹೇಳಿಕೆಗಳು “ಅಗ್ಗದ ಪ್ರಚಾರಕ್ಕಾಗಿ ಮಾಡುವ ಸಾಹಸವಾಗಿದ್ದು” ಮಾತ್ರವಲ್ಲ, ಸುಪ್ರೀಂ ಕೋರ್ಟ್ ವಿರುದ್ಧ ದಂಗೆ ಎಬ್ಬಿಸುವ ಉದ್ದೇಶಪೂರ್ವಕ ಪ್ರಯತ್ನವೂ ಆಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

“ಆಪಾದಿತ ಸಮಕಾಲೀನ ಹೇಳಿಕೆಗಳು ಗೌರವಾನ್ವಿತ ನ್ಯಾಯಾಲಯದ ವಿಚಾರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅಪನಂಬಿಕೆಯ ಭಾವನೆ ಮತ್ತು ಭಾರತದ ಸುಪ್ರೀಂ ಕೋರ್ಟಿನ ಗೌರವಾನ್ವಿತ ನ್ಯಾಯಾಧೀಶರ ಸಮಗ್ರತೆಗೆ ಪ್ರಚೋದನೆ ನೀಡಲು ಉದ್ದೇಶಿಸಿದೆ” ಎಂದು ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ.

ಉಷಾ ಶೆಟ್ಟಿ ಪರವಾಗಿ ವಕೀಲರಾದ ಅನುಜ್ ಸಕ್ಸೇನಾ, ಪ್ರಕಾಶ್ ಶರ್ಮಾ ಮತ್ತು ಮಹೇಕ್ ಮಹೇಶ್ವರಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ.

ಸ್ವರ ಭಾಸ್ಕರ್ ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು ಮುಂಬೈನಲ್ಲಿ ನಡೆದ ಹಲವು ಪ್ರತಿಭಟನೆಗಳಲ್ಲಿ ಸಕ್ರಿವಾಗಲಿ ಭಾಗವಹಿಸಿದ್ದರು. ಬಾಲಿವುಡ್ ನಟಿಯಾಗಿ ತಮ್ಮ ಸಹ ಕಲಾವಿದರು ಸಹ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಪ್ರೇರಿಪಿಸಿದ್ದರು.


ಓದಿ: ಶಿಕ್ಷಣವು ಸಾಂವಿಧಾನಿಕ ಹಕ್ಕು: JNU ಹೋರಾಟಕ್ಕೆ ಬೆಂಬಲ ಸೂಚಿಸಿದ ಬಾಲಿವುಡ್‌ ನಟಿ ಸ್ವರ ಭಾಸ್ಕರ್ 


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...