Homeಮುಖಪುಟಜಮ್ಮು-ಕಾಶ್ಮೀರದಲ್ಲಿನ ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

ಜಮ್ಮು-ಕಾಶ್ಮೀರದಲ್ಲಿನ ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ, ಸಂಸದೀಯ ಕ್ಷೇತ್ರಗಳ ಮರು ವಿಂಗಡಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ‘ಬಾರ್‌ ಅಂಡ್ ಬೆಂಚ್‌’ ವರದಿ ಮಾಡಿದೆ.

ಕಾಶ್ಮೀರ ನಿವಾಸಿಗಳಾದ ಅಬ್ದುಲ್ ಗನಿ ಖಾನ್, ಮುಹಮ್ಮದ್ ಅಯೂಬ್ ಮಟ್ಟೋ ಅವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎ.ಎಸ್.ಓಕಾ ಅವರನ್ನೊಳಗೊಂಡ ಪೀಠವು ವಜಾ ಮಾಡಿದೆ.

“ಜಮ್ಮು ಮತ್ತು ಕಾಶ್ಮೀರ ಪುನರ್‌ ರಚನೆ (Re-  Re-organisation) ಕಾಯಿದೆ, 2019ರ ಸಿಂಧುತ್ವದ ಬಗ್ಗೆ ಇನ್ನೂ ತೀರ್ಪು ನೀಡಲಾಗಿಲ್ಲ” ಎಂದು ಪೀಠವು ಹೇಳಿದೆ. ಕಾಶ್ಮೀರದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ.

ಕಾಲಕಾಲಕ್ಕೆ ಆದ ಜನಸಂಖ್ಯೆಯಲ್ಲಿನ ಬದಲಾವಣೆಗಳನ್ನು ಒಳಗೊಂಡು ಅಸೆಂಬ್ಲಿ ಅಥವಾ ಲೋಕಸಭೆ ಕ್ಷೇತ್ರಗಳ ಗಡಿಗಳನ್ನು ಮರು ವಿಂಗಡಣೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ರಚಿಸಿದ ಕ್ಷೇತ್ರ ಮರುವಿಂಗಡಣೆ ಆಯೋಗವು ಜಮ್ಮು ಮತ್ತು ಕಾಶ್ಮೀರದಲ್ಲಿನ ಕ್ಷೇತ್ರಗಳ ಮರು ವಿಂಗಡಣೆಗೆ ಸಂಬಂಧಿಸಿದಂತೆ ತನ್ನ ಅಂತಿಮ ವರದಿಯನ್ನು ಕಳೆದ ವರ್ಷ ಮೇನಲ್ಲಿ ಸಲ್ಲಿಸಿತು. ಇದು ಏಳು ಹೆಚ್ಚುವರಿ ಕ್ಷೇತ್ರಗಳನ್ನು (ಆರು ಜಮ್ಮುವಿನಲ್ಲಿ ಒಂದು ಕಾಶ್ಮೀರದಲ್ಲಿ) ರಚಿಸಲು ವರದಿ ಶಿಫಾರಸು ಮಾಡಿದೆ. ಈ ಕೇಂದ್ರಾಡಳಿತ ಪ್ರದೇಶದಲ್ಲಿ ಈವರೆಗೆ ಇದ್ದ 83 ಕ್ಷೇತ್ರಗಳನ್ನು 90ಕ್ಕೆ ಏರಿಕೆ ಮಾಡಲಾಗಿದೆ.

ಆಯೋಗದ ರಚನೆಯನ್ನು ಪ್ರಶ್ನಿಸುವ ಅರ್ಜಿಯ ಮೇಲಿನ ತೀರ್ಪನ್ನು ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. 2019ರ ಕಾಯಿದೆಯಡಿ ಚುನಾವಣಾ ಆಯೋಗಕ್ಕೆ ಮಾತ್ರ ಮರು ವಿಂಗಡಣೆಯ ಕಾರ್ಯವನ್ನು ನಡೆಸಲು ಅಧಿಕಾರವಿದೆ ಎಂದು ಅರ್ಜಿದಾರರು ವಾದಿಸಿದ್ದರು. ಆದರೆ ಜಮ್ಮು ಮತ್ತು ಕಾಶ್ಮೀರದ ಮರು ರಚನಾ ಕಾಯಿದೆಯು ಕ್ಷೇತ್ರಗಳ ಮರುವಿಂಗಡಣೆಗೆ ಆಯೋಗವನ್ನು ಕಡ್ಡಾಯಗೊಳಿಸಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಸರ್ಕಾರ ನಡೆಸುತ್ತಿರುವ ಮರು ವಿಂಗಡಣೆ ಕಾರ್ಯವನ್ನು ಪ್ರತಿಪಕ್ಷಗಳು ಟೀಕಿಸಿವೆ. ಈ ಕ್ರಮವು ಜಮ್ಮು ಮತ್ತು ಕಾಶ್ಮೀರದ ಜನರನ್ನು ‘ಮತ್ತಷ್ಟು ದೂರವಿಡುತ್ತದೆ’ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಮುಸ್ಲಿಮರ ಪ್ರಾಬಲ್ಯ ಕುಗ್ಗಿಸುವ ತಂತ್ರ

ಉದಾಹರಣೆಗೆ ಕಾಶ್ಮೀರ ಕಣಿವೆಯಲ್ಲಿ ಮುಸ್ಲಿಂ ಜನಸಂಖ್ಯೆ 95 ಶೇಕಡಾ ಇದ್ದು, ಅಲ್ಲಿ ಕ್ಷೇತ್ರಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗುತ್ತಿದೆ. ತೀರಾ ಸರಳವಾಗಿ ಹೇಳುವುದಾದರೆ, ಹಿಂದೂಗಳು ಹೆಚ್ಚಿರುವಲ್ಲಿ ಕಡಿಮೆ ಮತದಾರರಿರುವ ಹೆಚ್ಚು ಕ್ಷೇತ್ರಗಳನ್ನು ರಚಿಸಿ, ಮುಸ್ಲಿಮರು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚು ಮತದಾರರಿರುವ ಕಡಿಮೆ ಕ್ಷೇತ್ರಗಳನ್ನು ರಚಿಸಲಾಗುತ್ತಿದೆ ಎಂಬ ಆರೋಪಗಳು ಬಂದಿವೆ.

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಮೂಲ ಆಶಯವೇ ಮತದಾರರು ಮತ್ತು ಅವರ ಪ್ರತಿನಿಧಿಗಳ ನಡುವೆ ಸಂಪರ್ಕವನ್ನು ಸುಲಭಗೊಳಿಸುವುದು. ಉದಾಹರಣೆಗೆ ಒಂದು ಕ್ಷೇತ್ರದ ಕೇಂದ್ರದಿಂದ ಬಹಳ ದೂರದಲ್ಲಿ ಅಥವಾ ಕ್ರಮಿಸಲು ಕಷ್ಟವಾಗುವ ಪ್ರದೇಶದ ಮತದಾರರನ್ನು ಸಂಪರ್ಕ ಸುಲಭವಾಗುವ ಹತ್ತಿರದ ಇನ್ನೊಂದು ಕ್ಷೇತ್ರಕ್ಕೆ ಸೇರಿಸುವುದು. ಪರ್ವತ, ನದಿ, ರಸ್ತೆ ಸಂಪರ್ಕ ಇತ್ಯಾದಿ ಭೌಗೋಳಿಕ ನೆಲೆಗಳು ಮತ್ತು ಆಡಳಿತ ಕೇಂದ್ರಕ್ಕೆ ಹೆಚ್ಚು ಹತ್ತಿರವಾಗಿರುವ ನೆಲೆಯಲ್ಲಿ ಇದನ್ನು ಮಾಡಲಾಗುತ್ತದೆ. ಇನ್ನೊಂದು ಮಹತ್ವದ ನೆಲೆಯೆಂದರೆ, ಜನಸಂಖ್ಯೆಗೆ ಅನುಗುಣವಾಗಿ ಸೂಕ್ತ ಪ್ರಾತಿನಿಧ್ಯ ಒದಗಿಸುವುದು. ಮತದಾರರ ಸಂಖ್ಯೆ ಹೆಚ್ಚಿರುವ ಕ್ಷೇತ್ರಗಳಿಂದ ಮತದಾರರನ್ನು ಮೇಲಿನ ನೆಲೆಗಳನ್ನು ಪರಿಗಣಿಸಿ, ಮತದಾರರು ಕಡಿಮೆ ಇರುವ ಕ್ಷೇತ್ರಗಳಿಗೆ ಸೇರಿಸುವುದು. ಅಥವಾ ಇದೇ ನೆಲೆಯಲ್ಲಿ ಬೇರೆಬೇರೆ ಕ್ಷೇತ್ರಗಳ ಹೆಚ್ಚುವರಿ ಮತದಾರರನ್ನು ಸೇರಿಸಿ ಹೊಸ ಕ್ಷೇತ್ರವನ್ನು ರಚಿಸುವುದು.

ಆದರೆ, ಇದನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂಬುದು ಪ್ರಸ್ತುತ ಮರುವಿಂಗಡನೆ ಪ್ರಸ್ತಾಪದಲ್ಲಿ ಮೇಲ್ನೋಟಕ್ಕೇ ಕಂಡುಬರುತ್ತದೆ ಎಂದು ದೂರಲಾಗಿದೆ. ಸದ್ಯಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆರು ಲೋಕಸಭಾ ಸ್ಥಾನಗಳಿದ್ದು, ಹಿಂದೂಗಳು ಹೆಚ್ಚಿರುವ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಮುಸ್ಲಿಮರು ಹೆಚ್ಚಾಗಿರುವ ಮೂರರಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಗೆದ್ದಿದೆ. ಲೋಕಸಭಾ ಸ್ಥಾನಗಳಲ್ಲಿ ಕೂಡಾ ಯದ್ವಾತದ್ವಾ ಕೈಯಾಡಿಸಿ, ಮುಸ್ಲಿಮರ ಪ್ರಾಬಲ್ಯವನ್ನು ಕಡಿಮೆ ಮಾಡುವ ಪ್ರಯತ್ನ ನಡೆದಿದೆ. ಒಟ್ಟು ವಿಧಾನಸಭಾ ಸ್ಥಾನಗಳ ಸಂಖ್ಯೆಯನ್ನು ಏಳರಷ್ಟು ಹೆಚ್ಚಿಸಿ, ಹಿಂದೂಗಳು ಹೆಚ್ಚಾಗಿರುವ ಜಮ್ಮು ಪ್ರಾಂತ್ಯಕ್ಕೆ ಆರು ಹೆಚ್ಚುವರಿ ಮತ್ತು ಮುಸ್ಲಿಮರು ಹೆಚ್ಚಾಗಿರುವ ಕಾಶ್ಮೀರಕ್ಕೆ ಕೇವಲ ಒಂದು ಹೆಚ್ಚುವರಿ ವಿಧಾನಸಭಾ ಸ್ಥಾನ ನೀಡುವ ಪ್ರಸ್ತಾಪ ಇದೆ. ಇಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯದ ನಿಯಮವನ್ನೇ ಕಸದ ಬುಟ್ಟಿಗೆ ಎಸೆದಂತಾಗುತ್ತದೆ. ಇದು ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಚಿತ್ರಣವನ್ನೇ ಸಂಪೂರ್ಣವಾಗಿ ಮತ್ತು  ಕೃತಕವಾಗಿ ಬದಲಿಸಲಿದೆ ಎಂಬುದು ಮರುವಿಂಗಡಣೆಯನ್ನು ಪ್ರಶ್ನಿಸುತ್ತಿರುವವರ ವಾದವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...