Homeಮುಖಪುಟವಾಟ್ಸಪ್‌‌ನ ಹೊಸ ಗೌಪ್ಯತೆ ನೀತಿ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ವಾಟ್ಸಪ್‌‌ನ ಹೊಸ ಗೌಪ್ಯತೆ ನೀತಿ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ವಾಟ್ಸಾಪ್ ಕಳೆದ ವಾರ ತನ್ನ ಗೌಪ್ಯತೆ ನೀತಿಯನ್ನು ನವೀಕರಿಸಿದ್ದು, ಫೆಬ್ರವರಿ 8 ರ ನಂತರ ಅದರ ನಿಯಮಗಳು ಮತ್ತು ಷರತ್ತುಗಳನ್ನು ಬಳಕೆದಾರರು ಒಪ್ಪಿಕೊಳ್ಳುವುದು ಕಡ್ಡಾಯವಾಗಿದೆ.

- Advertisement -
- Advertisement -

ದೆಹಲಿ ಹೈಕೋರ್ಟ್‌ನಲ್ಲಿ ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯು ಬಳಕೆದಾರರ ಚಟುವಟಿಕೆಗಳನ್ನು ಪರಿಶೀಲಿಸಲು ಕಂಪನಿಗೆ ಅಧಿಕಾರ ನೀಡುತ್ತದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ವಕೀಲ ಚೈತನ್ಯ ರೋಹಿಲ್ಲಾ ಅವರು ಈ ಅರ್ಜಿಯನ್ನು ಸಲ್ಲಿಸಿದ್ದು, ಅವರು ತಮ್ಮ ಅರ್ಜಿಯಲ್ಲಿ ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯು ವ್ಯಕ್ತಿಯ ಖಾಸಗೀತನದ ಹಕ್ಕಿನ ಉಲ್ಲಂಘನೆಯಾಗಿದೆ ಹೇಳಿದ್ದಾರೆ.

ಖಾಸಗೀತನದ ಹಕ್ಕನ್ನು ಸುಪ್ರೀಂ ಕೋರ್ಟ್ ಮೂಲಭೂತ ಹಕ್ಕು ಎಂದು ಘೋಷಿಸಿದೆ.

ಇದನ್ನೂ ಓದಿ: ನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

ಸುರಕ್ಷತೆಯ ವಿಷಯದಲ್ಲಿ ವಾಟ್ಸಾಪ್ ಮತ್ತು ಸಿಗ್ನಲ್‌ – ಯಾವುದು ಉತ್ತಮ? Comparison Between WhatsApp and Signal

ಅರ್ಜಿಯಲ್ಲಿ “ವಾಟ್ಸಾಪ್ ಮತ್ತು ಫೇಸ್‌ಬುಕ್‌ನಂತಹ ಪ್ಲಾಟ್‌ಫಾರ್ಮ್‌ಗಳು ಈಗಾಗಲೇ ಬಳಕೆದಾರರ ಡೇಟಾವನ್ನು ಮೂರನೇ ವ್ಯಕ್ತಿಯೊಂದಿಗೆ ಅನಧಿಕೃತ ರೀತಿಯಲ್ಲಿ ಹಂಚಿಕೊಳ್ಳುತ್ತಿವೆ. ಸರ್ಕಾರದಿಂದ ಅನುಮತಿ ಪಡೆಯದೆ ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯನ್ನು ರೂಪಿಸಲಾಗಿದೆ” ಎಂದು ಆರೋಪಿಸಲಾಗಿದೆ.

ಅರ್ಜಿದಾರರು ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿ ಮತ್ತು ವ್ಯಕ್ತಿಗಳ ಖಾಸಗಿ ಹಕ್ಕನ್ನು ಗಮನದಲ್ಲಿಟ್ಟುಕೊಂಡು ವಾಟ್ಸಾಪ್ ಬಳಕೆಗೆ ಮಾರ್ಗಸೂಚಿಗಳನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ವಾಟ್ಸಾಪ್ ಕಳೆದ ವಾರ ತನ್ನ ಗೌಪ್ಯತೆ ನೀತಿಯನ್ನು ನವೀಕರಿಸಿದ್ದು, ಫೆಬ್ರವರಿ 8 ರ ನಂತರ ಅದರ ನಿಯಮಗಳು ಮತ್ತು ಷರತ್ತುಗಳನ್ನು ಬಳಕೆದಾರರು ಒಪ್ಪಿಕೊಳ್ಳುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...