Homeಮುಖಪುಟಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

- Advertisement -
- Advertisement -

ಸ್ವಾತಂತ್ರ್ಯ ಭಾರತದ ಮೊದಲ ಭಯೋತ್ಪಾದಕ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಂತಕ ‘ನಾಥೂರಾಮ್ ಗೋಡ್ಸೆ’ಯನ್ನು ವೈಭವೀಕರಿಸಲು ಉದ್ದೇಶಿಸಿರುವ ‘ವೈ ಐ ಕಿಲ್ಲಲ್ಡ್‌ ಗಾಂಧಿ’ (ನಾನೇಕೆ ಗಾಂಧಿಯನು ಕೊಂದೆ) ಸಿನಿಮಾ ಬಿಡುಗಡೆ ಮಾಡದಂತೆ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ನಾಥೂರಾಮ್‌ ಗೋಡ್ಸೆ ಕುರಿತ ಸಿನಿಮಾವನ್ನು ಒಟಿಟಿಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದು, ಅದಕ್ಕೆ ತಡೆ ನೀಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಅಶೋಕ್ ತ್ಯಾಗಿ ನಿರ್ದೇಶನದ, ಕಲ್ಯಾಣಿ ಸಿಂಗ್ ಅವರು 2017ರಲ್ಲಿ ನಿರ್ಮಿಸಿದ ಈ ಚಿತ್ರವನ್ನು ಸೆನ್ಸಾರ್ ಮಂಡಳಿಯು ತೆರವುಗೊಳಿಸದ ಕಾರಣ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿಲ್ಲ. ಈಗ ಅದನ್ನು OTT ವೇದಿಕೆಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಜನವರಿ 30ರಂದು (ಗಾಂಧೀಜಿಯನ್ನು ಹತ್ಯೆ ಮಾಡಿದ ದಿನ) ಸಿನಿಮಾ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ.

ಎನ್‌ಸಿಪಿ ನಾಯಕ ಮತ್ತು ಶಿರೂರು ಲೋಕಸಭಾ ಕ್ಷೇತ್ರದ ಸಂಸದ ಅಮೋಲ್ ಕೋಲ್ಹೆ ಚಿತ್ರದಲ್ಲಿ ಗೋಡ್ಸೆ ಪಾತ್ರವನ್ನು ಮಾಡಿದ್ದಾರೆ. ತಾವು ಗಾಂಧಿ ಚಿಂತನೆಗಳಲ್ಲಿ ದೃಢ ನಂಬಿಕೆ ಹೊಂದಿದ್ದು, ನಟನಾಗಿ ಸವಾಲು ಹಾಕುವ ಸಲುವಾಗಿಯೇ ವಿವಾದಾತ್ಮಕ ಪಾತ್ರವನ್ನು ಕೈಗೆತ್ತಿಕೊಂಡಿರುವುದಾಗಿ ಅವರು ಇತ್ತೀಚೆಗೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ನಾನೇಕೆ ಗಾಂಧಿಯನ್ನು ಕೊಂದೆ’ ಸಿನಿಮಾ ಬಿಡುಗಡೆ ಬೇಡ: ಸೇವಾದಳ ಯಂಗ್ ಬ್ರಿಗೇಡ್ ಆಗ್ರಹ

ಚಿತ್ರವು ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಿದೆ, ಮಹಾತ್ಮ ಗಾಂಧಿಯನ್ನು ಕೊಂದ ಕೃತ್ಯವನ್ನು ಸಂಭ್ರಮಿಸಲಾಗಿದೆ ಎಂದು ಅರ್ಜಿದಾರ ಸಿಕಂದರ್ ಬೆಹ್ಲ್ ಆರೋಪಿಸಿದ್ದಾರೆ. ಈ ಚಿತ್ರವು ರಾಷ್ಟ್ರಪಿತ ಗಾಂಧೀಜಿಯವರ ವ್ಯಕ್ತಿತ್ವಕ್ಕೆ ಕಳಂಕ ತರುವ ಉದ್ದೇಶವನ್ನು ಹೊಂದಿದೆ. ಕೋಮು ಸೌಹಾರ್ದತೆ, ದ್ವೇಷವನ್ನು ಹರಡುವುದು ಮತ್ತು ಶಾಂತಿ ಕದಡುವುದು ಈ ಸಿನಿಮಾದ ಗುರಿಯಾಗಿದೆ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಸೆನ್ಸಾರ್ ಮಂಡಳಿಯ ಅಧಿಕಾರ ವ್ಯಾಪ್ತಿಯನ್ನು ಮೀರಿದ OTT ಪ್ಲಾಟ್‌ಫಾರ್ಮ್‌ಗಳ ನಿಯಂತ್ರಣಕ್ಕಾಗಿ ಉನ್ನತ ನ್ಯಾಯಾಲಯವು ನಿರ್ದೇಶನಗಳನ್ನು ನೀಡಬೇಕೆಂದು ಬೆಹ್ಲ್ ಆಶಿಸಿದ್ದಾರೆ. ಒಟಿಟಿಗಳಿಗೆ ಸರಿಯಾದ ನಿರ್ಬಂಧ ಇರದ ಕಾರಣ ಸೆನ್ಸಾರ್ ಮಾಡದ ವಿಷಯವನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ವಕೀಲ ಅನುಜ್ ಭಂಡಾರಿ ಅವರ ಮೂಲಕ ಸಿಕಂದರ್ ಬೆಹ್ಲ್ ಅವರು ಅರ್ಜಿ ಸಲ್ಲಿಸಿದ್ದು, ಎಲ್ಲಾ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ವಿವಾದಾತ್ಮಕ ಚಿತ್ರದ ಎಲ್ಲಾ ವಿಷಯಗಳನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಚಿತ್ರದ ಎರಡು ನಿಮಿಷಗಳ ಇಪ್ಪತ್ತು ಸೆಕೆಂಡುಗಳ ಟ್ರೇಲರ್‌ನಲ್ಲಿ, ಭಾರತದ ವಿಭಜನೆ ಮತ್ತು ಪಾಕಿಸ್ತಾನದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಮಹಾತ್ಮ ಗಾಂಧಿಯನ್ನು ದೂರುವ ಪ್ರಯತ್ನವನ್ನು ಮಾಡಲಾಗಿದೆ. ಆ ಮೂಲಕ ಮಹಾತ್ಮ ಗಾಂಧೀಜಿಯವರ ಹತ್ಯೆಯನ್ನು ಸಮರ್ಥಿಸಲಾಗಿದೆ ಎಂದು ಆಕ್ಷೇಪ ಎತ್ತಿದ್ದಾರೆ.

ಈ ಚಿತ್ರ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ಸಿನಿ ಕಾರ್ಮಿಕರ ಸಂಘವು (AICWA) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಗಾಂಧೀಜಿ ಹಂತಕ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಲು ಉದ್ದೇಶಿಸಿರುವ ಚಿತ್ರವನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿದೆ.

ಈ ಚಿತ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸದ ಅಮೋಲ್ ಕೋಲ್ಹೆ ಗೋಡ್ಸೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕಳೆದ ಕೆಲವು ದಿನಗಳಿಂದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನಡುವೆ ಘರ್ಷಣೆಯನ್ನು ಹುಟ್ಟುಹಾಕಿದೆ.

ಗಾಂಧೀಜಿ ಹತ್ಯೆ ಮಾಡಲು ಗೋಡ್ಸೆ ಹೇಗೆ ಪ್ರೇರೇಪಿತನಾದ, ಆರ್‌ಎಸ್‌ಎಸ್‌ ಸಿದ್ಧಾಂತಗಳಿಂದ, ಆರ್‌ಎಸ್‌ಎಸ್‌ ನಾಯಕರಿಂದ ಗೋಡ್ಸೆ ಹೇಗೆ ಪ್ರಭಾವಿತನಾದ ಎಂಬುದನ್ನು ಇತ್ತೀಚೆಗೆ ಬಿಡುಗಡೆಯಾಗಿರುವ ‘ಗಾಂಧೀಸ್‌ ಅಸಾಸಿನ್‌’ (ಲೇಖಕರು: ಧೀರೇಂದ್ರ ಝಾ) ಅವರ ಕೃತಿ ಅತ್ಯಂತ ಪರಿಣಾಮಕಾರಿಯಾಗಿ ಚರ್ಚೆಸಿದೆ.

ಇನ್ನೊಂದೆಡೆ ಗಾಂಧೀಜಿಯವರನ್ನು ಅವ್ಯಾಚ ಪದಗಳಿಂದ ನಿಂದಿಸಿ ಗೋಡ್ಸೆಯನ್ನು ವೈಭವೀಕರಿಸಿದ ಹಿನ್ನೆಲೆಯಲ್ಲಿ ಕಾಳಿ ಚರಣ್ ಎಂಬ ಹಿಂದುತ್ವ ಸ್ವಾಮೀಜಿ ಹಾಗೂ ಮುಸ್ಲಿಮರ ನರಹತ್ಯೆಗೆ ಕರೆ ನೀಡಿದ ಯತಿ ನರಸಿಂಗಾನಂದ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೋಮು ಕೇಂದ್ರಿತ ರಾಜಕಾರಣಕ್ಕೆ ಬಲಪಂಥೀಯ ರಾಜಕಾರಣಿಗಳು ಯತ್ನಿಸುತ್ತಿರುವ ಬೆಳವಣಿಗೆಗಳ ನಡುವೆ ಭಯೋತ್ಪಾದಕ ಗೋಡ್ಸೆ ಕುರಿತ ಸಿನಿಮಾ ಬಿಡುಗಡೆಯ ಚರ್ಚೆ ಮುನ್ನೆಲೆಗೆ ಬಂದಿದೆ.


ಇದನ್ನೂ ಓದಿರಿ: ಪ್ರಧಾನಿ, ಯೋಗಿ ಆದಿತ್ಯನಾಥ್ ಪರ ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚನೆ : ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಗೋಡ್ಸೆ ಬಗ್ಗೆ ಸಂಪೂರ್ಣ ತಿಳಿಯದ ಅಯೋಗ್ಯ ಕಮ್ಯೂನಿಸ್ಟ್ ,ನಗರ ನಕ್ಸಲ್ ರು ಈ ದೇಶಕ್ಕೆ ಮಾರಕ

  2. ಗೋಡ್ಸೆ ಓರ್ವ ವಿಕೃತ ಮನಸ್ಸಿನ ಮತಾಂಧ ಭಯೋತ್ಪಾದಕ. ಪ್ರಪಂಚದ ಅತಿ ದೊಡ್ಡ ಭಯೋತ್ಪಾದಕ ಸಂಘಟನೆ ಆರೆಸ್ಸೆಸಿನ ಸದಸ್ಯ. ಆರೆಸ್ಸೆಸ್ ಈ ದೇಶಕ್ಕೆ ಅಪಾಯಕಾರಿ ಕ್ಯಾನ್ಸರ್. ಹಿಂಸೆ ಹೊರತುಪಡಿಸಿದರೆ ನಕ್ಸಲ್
    ಚಳವಳಿ ಜನಪರವಾದದ್ದೇ. ಹಿಟ್ಲರ್, ಮುಸೋಲಿನಿ ಆರಾಧಕರಾದ ಸಂಘಿಗಳು ಸ್ವಾತಂತ್ರ್ಯಕ್ಕಾಗಿ ನಯಾಪೈಸೆ ಹೋರಾಟ ಮಾಡಿಲ್ಲದ ಕಾರಣ ಈಗ ಧರ್ಮ ದ್ವೇಷ ಹಚ್ಚಿ ದೇಶ ವಿಭಜನೆಗೆ ಹೊರಟಿದ್ದಾರೆ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...