Homeಕರೋನಾ ತಲ್ಲಣ18 ವರ್ಷಕ್ಕಿಂತ ಮೇಲಿನ ಎಲ್ಲರಿಗೂ ಲಸಿಕೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ

18 ವರ್ಷಕ್ಕಿಂತ ಮೇಲಿನ ಎಲ್ಲರಿಗೂ ಲಸಿಕೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ

- Advertisement -
- Advertisement -

ದೇಶಾದ್ಯಂತದ ಕೊರೊನಾ ವೈರಸ್ ಪ್ರಕರಣವು ಹಠಾತ್ ಏರಿಕೆಯಾಗುತ್ತಿರುವುದರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಅರ್ಜಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ದಾಖಲಿಸಲಾಗಿದೆ.

ಎರಡನೇ ಅಲೆಯಲ್ಲಿ ಕೊರೊನಾ ವೈರಸನ್ನು ತಡೆಯಲು ಎಲ್ಲಾ ಯುವ ಮತ್ತು ದುಡಿಯುವ ಜನರಿಗೆ ವ್ಯಾಪಕವಾಗಿ ಲಸಿಕೆ ಅಗತ್ಯ ಎಂದು ವಕೀಲೆ ರಶ್ಮಿ ಸಿಂಗ್ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

ಲಸಿಕೆಯ ಎರಡು ಡೋಸೇಜ್‌ಗಳನ್ನು ನೀಡಲು ಸರ್ಕಾರವು ಆರರಿಂದ ಎಂಟು ವಾರಗಳವರೆಗೆ ತೆಗೆದುಕೊಳ್ಳುತ್ತದೆ, ಆದ್ದರಿಂದ ಪ್ರಸ್ತುತ ದೇಶದಲ್ಲಿ ಪ್ರಾರಂಭವಾಗಿರುವ ಲಸಿಕೆ ನೀಡುವ ಪ್ರಕ್ರಿಯೆಯು 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರನ್ನು ತಲುಪುವ ಹೊತ್ತಿಗೆ ಕೊರೊನಾ ವೇಗವಾಗಿ ಹರಡುವ ಸಾಧ್ಯತೆಯಿದೆ ಎಂದು ಅವರು ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

18 ರಿಂದ 45 ವರ್ಷ ವಯಸ್ಸಿನವರಿಗೆ ಲಸಿಕೆಗಳನ್ನು ನಿರಾಕರಿಸುವುದು ಅಸಮಂಜಸವಾಗಿದ್ದು, ಇದು ತಾರತಮ್ಯ ಮತ್ತು ಅವಿವೇಕದ ನಿಯಮವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಇಂತಹ ನಿರಾಕರಣೆಯು ಆರೋಗ್ಯದ ಹಕ್ಕನ್ನು ಮತ್ತು ಜೀವಿಸುವ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸೇರಿದಂತೆ ಹಲವಾರು ತಜ್ಞರು ಕೊರೊನಾ ವ್ಯಾಕ್ಸಿನೇಷನ್ ಅನ್ನು ಹೆಚ್ಚಿಸಲು ಒತ್ತಾಯಿಸಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ಭಾರತವು ಪ್ರತಿದಿನ ಕನಿಷ್ಠ ಒಂದು ಕೋಟಿ ಡೋಸ್‌ಗಳನ್ನು ನೀಡುವ ಅಗತ್ಯವಿದೆ ಎಂದು ಕೆಲವು ತಜ್ಞರು ಸಲಹೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಸ್ತುತ ಕೇಂದ್ರ ಸರ್ಕಾರವು ಲಸಿಕೆಯನ್ನು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ನೀಡುವಂತೆ ನಿಯಮವನ್ನು ರೂಪಿಸಿದೆ.

ಇದನ್ನೂ ಓದಿ: ಬಂಗಾಳ: ಸೀತಾಲ್ಕುಚ್ಚಿ ಗೋಲಿಬಾರ್‌ ವಿಡಿಯೋ ವೈರಲ್, ಕೇಂದ್ರ ಪಡೆಗಳ ಮೇಲೆ ಸಂಶಯದ ಹುತ್ತ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...