Homeಕರ್ನಾಟಕತೆರಿಗೆ ಹೆಚ್ಚಿಸಿದ ಸರ್ಕಾರ: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ತೆರಿಗೆ ಹೆಚ್ಚಿಸಿದ ಸರ್ಕಾರ: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

- Advertisement -
- Advertisement -

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಶನಿವಾರ (ಜೂನ್ 15) ಆದೇಶ ಹೊರಡಿಸಿದೆ.

ಇದರಿಂದ ರಾಜ್ಯದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್ ಬೆಲೆ 3.02 ರೂಪಾಯಿ ಹಾಗೂ ಪ್ರತಿ ಲೀಟರ್‌ ಡೀಸೆಲ್ ಬೆಲೆ 3 ರೂ. ಹೆಚ್ಚಳವಾಗಿದೆ.

ಪೆಟ್ರೋಲ್ ಚಿಲ್ಲರೆ ಮಾರಾಟ ದರ ಪ್ರತಿ ಲೀಟರ್‌ಗೆ ಇಂದಿನಿಂದ 102.85 ರೂ. ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 88.93 ರೂ. ಆಗಲಿದೆ. ಈ ದರವು ಸಾಗಣೆ ವೆಚ್ಚದ ಆಧಾರದಲ್ಲಿ ರಾಜ್ಯದ ಬೇರೆ ಬೇರೆ ಪ್ರದೇಶಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ವ್ಯತ್ಯಾಸವಾಗಲಿದೆ.

ದರ ಪರಿಷ್ಕರಣೆಯ ಬಳಿಕ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 99.84 ರೂ.ನಿಂದ 103ಗೆ ರೂ. ಏರಿಕೆಯಾಗಿದೆ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 85.93 ರೂ.ನಿಂದ 89.20 ರೂ.ಗೆ ಏರಿಕೆ ಕಂಡಿದೆ.

ಸರ್ಕಾರ ಹೊರಡಿಸಿದ ರಾಜ್ಯ ಪತ್ರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಬಗ್ಗೆ ತಿಳಿಸಲಾಗಿದೆ. ಪೆಟ್ರೋಲ್‌ ಮೇಲಿನ ವ್ಯಾಟ್‌ ಅನ್ನು ಶೇ.25.92ರಿಂದ ಶೇ.29.84ಕ್ಕೆ ಹೆಚ್ಚಿಸಲಾಗಿದೆ. ಇದೇ ರೀತಿ ಡೀಸೆಲ್‌ ಮೇಲಿನ ವ್ಯಾಟ್‌ ಅನ್ನು ಶೇ.14.34ರಿಂದ ಶೇ.18.44ಕ್ಕೆ ಏರಿಕೆ ಮಾಡಲಾಗಿದೆ.

ಇದನ್ನೂ ಓದಿ : ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ

0
ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘಿಸಿ ಉತ್ತರ ಅರಾವಳಿ ಚಿರತೆ ವನ್ಯಜೀವಿ ಕಾರಿಡಾರ್‌ ಆಗಿರುವ ದೆಹಲಿ ರಿಜ್‌ ಅರಣ್ಯ ಪ್ರದೇಶದಲ್ಲಿ ಸುಮಾರು 1,100 ಮರಗಳನ್ನು ಕಡಿಯಲು ನಿರ್ದೇಶನ ನೀಡುವಾಗ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ)...