Homeಮುಖಪುಟಮತ್ತೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ದೆಹಲಿಯಲ್ಲಿ ದಾಖಲೆ ಮುಟ್ಟಿದ ಬೆಲೆ

ಮತ್ತೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ದೆಹಲಿಯಲ್ಲಿ ದಾಖಲೆ ಮುಟ್ಟಿದ ಬೆಲೆ

- Advertisement -
- Advertisement -

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ನಿರಂತರವಾಗಿ ಮುಂದುವರೆದಿದೆ. ಲೀಟರ್ ಪೆಟ್ರೋಲ್ ಬೆಲೆ 26 ಪೈಸೆ ಹೆಚ್ಚಾಗಿದ್ದು ಒಟ್ಟು 105.44 ಆಗಿದೆ. ಲೀಟರ್ ಡೇಸೆಲ್ ಬೆಲೆ 32 ಪೈಸೆ ಹೆಚ್ಚಾಗಿದ್ದು, 95.70 ರೂಗೆ ತಲುಪಿದೆ.

ಇನ್ನೊಂದೆಡೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಲೆ ಏರಿಕೆಯಾಗಿದ್ದು ದಾಖಲೆಯ ಅತ್ಯಂತ ಗರಿಷ್ಟ ಬೆಲೆ ತಲುಪಿದೆ. ಪೆಟ್ರೋಲ್ ಮೇಲ್ ಲೀಟರ್‌ಗೆ 25 ಪೈಸೆ ಮತ್ತು ಡೀಸೆಲ್ ಮೇಲೆ ಲೀಟರ್‌ಗೆ 30 ಪೈಸೆ ಏರಿಕೆಯೊಂದಿಗೆ  ಈಗ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.89 ಆದರೆ ಡೀಸೆಲ್ ಬೆಲೆ 90.17 ರೂಗೆ ತಲುಪಿದೆ.

ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರ್ಕಾರಿ ತೈಲ ಸಂಸ್ಕರಣಾ ಸಂಸ್ಥೆಗಳು ದಿನನಿತ್ಯ ಇಂಧನ ದರಗಳನ್ನು ಪರಿಷ್ಕರಿಸುತ್ತವೆ. ಅಂತರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಮತ್ತು ರುಪಾಯಿ ಡಾಲರ್ ವಿನಿಮಯ ದರದ ಆಧಾರದಲ್ಲಿ ಬೆಲೆ ನಿಗಧಿಯಾಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದಲೇ ಜಾರಿಗೆ ತರಲಾಗುತ್ತದೆ.


ಇದನ್ನೂ ಓದಿ; ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?


ಒಂದು ಲೀಟರ್ ಪೆಟ್ರೋಲ್‌ನ ಮೂಲ ಬೆಲೆ 36 ರೂಪಾಯಿಗಳಿದ್ದರೆ ಅದರ ಮೇಲೆ ಕೇಂದ್ರ ಸರ್ಕಾರವೊಂದೇ 32.90 ರೂ ಅಬಕಾರಿ ಸುಂಕ ವಿಧಿಸುತ್ತದೆ. ರಾಜ್ಯಗಳು ಸುಮಾರು 27 ರೂಪಾಯಿಯಷ್ಟು ತೆರಿಗೆ ವಿಧಿಸುತ್ತವೆ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್ ಕಮಿಷನ್ 8ರೂ ಆಗುತ್ತದೆ. ಅಲ್ಲಿಗೆ ಪೆಟ್ರೋಲ್ ಬೆಲೆ 104ರೂ ದಾಟುತ್ತದೆ.


ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...