Homeಮುಖಪುಟಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

ಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

- Advertisement -
- Advertisement -

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ತೈಲ ಮಾರಾಟ ಕಂಪನಿಗಳು (ಒಎಂಸಿಗಳು) ಪ್ರಮುಖ ನಗರಗಳಲ್ಲಿ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 14-16 ಪೈಸೆ ಕಡಿತಗೊಳಿಸಿದವು. ಕಳೆದ 15 ದಿನಗಳಲ್ಲಿ ದರಗಳಲ್ಲಿ ಯಾವ ಬದಲಾವಣೆಯನ್ನೂ ಮಾಡಿರಲಿಲ್ಲ. ಆದರೆ ಚುನಾವಣೆಯ ನಂತರ ಮತ್ತೆ ಪೆಟ್ರೋಲ್-ಡಿಸೇಲ್ ದರಗಳು ಏರುಗತಿಯಲ್ಲೇ ಇರಲಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಚುನಾವಣೆಗೂ ಪೆಟ್ರೋಲ್-ಡಿಸೇಲ್ ದರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಂಪನಿಗಳು ಹೇಳುತ್ತವಾದರೂ ಪ್ರತಿ ಪ್ರಮುಖ ಚುನಾವಣೆಯಲ್ಲಿ ದರ ಸ್ಥಿರವಾಗಿರುವುದನ್ನು ಅಥವಾ ಅಲ್ಪ ಇಳಿಕೆಯಾಗುವುದನ್ನು ಇತ್ತೀಚಿನ ವರ್ಷಗಳಲ್ಲಿ ನೋಡುತ್ತ ಬಂದಿದ್ದೇವೆ. ಚುನಾವಣೆಯ ಸಮಯದಲ್ಲಿ ಬೆಲೆ ಸ್ಥಗಿತದ ಪರಿಣಾಮವಾಗಿ ಚುನಾವಣೆ ಮುಗಿದ ನಂತರ ಗ್ರಾಹಕರು ಪೆಟ್ರೋಲ್ ಮತ್ತು ಡೀಸೆಲ್‌ಗೆ ಹೆಚ್ಚಿನ ಬೆಲೆ ನೀಡಬೇಕಾಗಿರುವುದನ್ನು ಇತಿಹಾಸ ತೋರಿಸಿದೆ ಎಂದು ವರದಿ ತಿಳಿಸಿದೆ.

ಚುನಾವಣೆಯ ಸಮಯದಲ್ಲಿ ಇಂಧನ ಬೆಲೆಗಳು ಏಕೆ ಕಡಿಮೆ?

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿಗದಿಪಡಿಸಲು ತೈಲ ಮಾರಾಟ ಕಂಪನಿಗಳು ಮುಕ್ತವಾಗಿದ್ದರೂ ಕೂಡ ಅವು ಆಗಾಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸುತ್ತವೆ ಅಥವಾ ಇಂಧನ ಬೆಲೆಗಳು ರಾಜಕೀಯ ವಿಷಯವಾಗಿ ಪರಿಣಮಿಸುವುದರಿಂದ ಚುನಾವಣೆಗಳ ಸಮಯದಲ್ಲಿ ಅವುಗಳನ್ನು ಸ್ಥಿರವಾಗಿ ಇಡುತ್ತವೆ. ಇದು ಸಹಜವಾಗಿ ಕೇಂದ್ರದಲ್ಲಿ ಆಳುವ ಪಕ್ಷದ ಹಿತಾಸಕ್ತಿ ಕಾಪಾಡುವುದೇ ಆಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿನ ಕಚ್ಚಾ ತೈಲದ ಬೆಲೆಯ ಆಧಾರದಲ್ಲಿ ಇಲ್ಲಿ ಇಂಧನ ದರ ಇರುತ್ತವೆ ಎಂಬುದು ಇತ್ತೀಚಿನ ತಿಂಗಳುಗಳಲ್ಲಿ ಹುಸಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೆರಿಗೆ ಹೊರೆ ಮಾತ್ರ ಸ್ಥಿರವಾಗಿ ಇದ್ದೇ ಇದೆ.

ಕಚ್ಚಾ ತೈಲದ ಬೆಲೆಯಲ್ಲಿ ಗಮನಾರ್ಹ ಏರಿಳಿತವಾದರೂ ಕೂಡ ಇತ್ತೀಚಿನ 47 ದಿನಗಳ ಅವಧಿಯಲ್ಲಿ ಕೇವಲ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಲಾಗಿದೆ. ಚುನಾವಣೆ ಘೋಷಣೆಯಾದ ಪರಿಣಾಮ ಈ ಪ್ರಕ್ರಿಯೆ ನಡೆದಿದೆ ಎಂದು ತಜ್ಞರು ಹೇಳುತ್ತಾರೆ.

ಚುನಾವಣೆಯ ನಂತರ ಹೇಗೆ ಬದಲಾಗುತ್ತವೆ?

ಚುನಾವಣೆ ನಂತರ ತೈಲ ಮಾರಾಟ ಕಂಪನಿಗಳು ತಮ್ಮ ಮಾರುಕಟ್ಟೆ ಮಾರ್ಜಿನ್‌ಗಳನ್ನು ಸಾಮಾನ್ಯ ಮಟ್ಟಕ್ಕೆ ಪುನಃಸ್ಥಾಪಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ತೈಲ ಬೆಲೆಯ ಯಾವುದೇ ಕುಸಿತದ ಪ್ರಯೋಜನವನ್ನು ಗ್ರಾಹಕರಿಗೆ ತಲುಪಿಸಲು ತೈಲ ಮಾರಾಟ ಕಂಪನಿಗಳು ನಿಧಾನವಾಗಿರುವುದರಿಂದ ಚುನಾವಣೆ ನಂತರ ಗ್ರಾಹಕರು ಹೆಚ್ಚು ಪಾವತಿಸಬೇಕಾಗಬಹುದು ಎಂದು ತಜ್ಞರು ಹೇಳುತ್ತಾರೆ.

ತೈಲ ಮಾರಾಟ ಕಂಪನಿಗಳು ಮತ್ತು ಚುನಾವಣೆ

ಚುನಾವಣೆಯ ಸಮಯದಲ್ಲಿ ಹೂಡಿಕೆದಾರರು ಇಂತಹ ಕ್ರಮಗಳನ್ನು ನಿರೀಕ್ಷಿಸುತ್ತಾರೆ ಮತ್ತು ನಂತರದ ಅವಧಿಯಲ್ಲಿ ಮರಳಿ ಪ್ರಮಾಣಿತ ಮಾರ್ಜಿನ್‌ಗಳಿಗೆ ಹಿಂತಿರುಗುತ್ತಾರೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಫೆಬ್ರವರಿ 27 ರ ಆರಂಭದಿಂದ ಒಎಂಸಿಗಳು ಬೆಲೆಗಳ ಪರಿಷ್ಕರಣೆಯನ್ನು ನಿಲ್ಲಿಸಿದಾಗ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ನ ಷೇರಿನ ಬೆಲೆ ಶೇಕಡಾ 8 ರಷ್ಟು ಕುಸಿದಿದ್ದರೆ, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ ಷೇರಿನ ಬೆಲೆ ಶೇ. 10 ಕುಸಿದಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಶೇ 1.4 ರಷ್ಟು ಕುಸಿದಿದೆ.
ಅಂತಹ ಪ್ರಕ್ರಿಯೆಗಳು ಒಎಂಸಿಗಳ ದೀರ್ಘಕಾಲೀನ ಮೌಲ್ಯಮಾಪನಗಳ ಮೇಲೆ ಪರಿಣಾಮ ಬೀರಬಹುದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ, ಮುಖ್ಯವಾಗಿ ಖಾಸಗೀಕರಣಗೊಳ್ಳಲಿರುವ ಬಿಪಿಸಿಎಲ್ ಕಂಪನಿಯ ಮೇಲೆ ಇದರ ಪರಿಣಾಮ ಹೆಚ್ಚು ಎನ್ನಲಾಗಿದೆ.

“ರಾಜಕೀಯವಾಗಿ ಲಾಭದಾಯಕವಾದಾಗಲೆಲ್ಲಾ ಸರ್ಕಾರವು ನಿಮ್ಮ ಮಾರ್ಕೆಟಿಂಗ್ ಮಾರ್ಜಿನ್‌ಗಳನ್ನು ಕಡಿತಗೊಳಿಸಿದಾಗ ಯಾರಾದರೂ ಹೆಚ್ಚಿನ ಮೌಲ್ಯಮಾಪನವನ್ನು (ಖಾಸಗೀಕರಣಗೊಳ್ಳಲಿರುವ ಬಿಪಿಸಿಎಲ್ ಕಂಪನಿಗೆ) ಏಕೆ ನೀಡುತ್ತಾರೆ ಎಂದು ವಿಶ್ಲೇಷಕರೊಬ್ಬರು ಹೇಳಿದ್ದಾರೆ. ಖಾಸಗೀಕರಣದ ನಂತರವೂ, ಉಳಿದ ಸರ್ಕಾರಿ ಸ್ವಾಮ್ಯದ ರಿಫೈನರ್‌ಗಳು – ಐಒಸಿಎಲ್ ಮತ್ತು ಎಚ್‌ಪಿಸಿಎಲ್- ಚುನಾವಣೆಯ ಸಮಯದಲ್ಲಿ ಬೆಲೆಗಳನ್ನು ಕಡಿತಗೊಳಿಸಿದರೆ, ಬಿಪಿಸಿಎಲ್ ಕೂಡ ಆ ಬೆಲೆಗಳೊಂದಿಗೆ ಹೊಂದಿಕೆಯಾಗಬೇಕಾಗುತ್ತದೆ.


ಇದನ್ನೂ ಓದಿ: ಇವಿಎಂ ಸುರಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...