Homeಮುಖಪುಟ'ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು' : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

- Advertisement -
- Advertisement -

ಗುಜರಾತ್‌ನ ರಾಜ್‌ಕೋಟ್‌ನ ಸ್ಥಳೀಯ ಪತ್ರಕರ್ತ ಸುದೇಶ್ ವಡೇಚಾ ಎಂಬವರು, ಪೊಲೀಸ್ ಕಸ್ಟಡಿಯಲ್ಲಿ ತನಗೆ ತೀವ್ರ ಚಿತ್ರ ಹಿಂಸೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ಖಬರ್ ರಾಜ್‌ಕೋಟ್ ಕಿ ನ್ಯೂಸ್’ ಎಂಬ ಆನ್‌ಲೈನ್ ಮಾಧ್ಯಮವನ್ನು ನಡೆಸುತ್ತಿರುವ ವಡೇಚಾ, ರಾಜ್‌ಕೋಟ್ ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಜಗದೀಶ್ ಬಂಗದ್ವಾ ಮತ್ತು ಅವರ ತಂಡ ತನ್ನನ್ನು ಕ್ರೂರವಾಗಿ ಥಳಿಸಿ ಅಮಾನವೀಯವಾಗಿ ನಡೆಸಿಕೊಂಡಿದೆ ಎಂದು ಹೇಳಿದ್ದಾರೆ.

ಪೊಲೀಸರು ಈ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದು, ಇದು ‘ನಾಟಕ’ ಎಂದು ಕರೆದಿದ್ದಾರೆ.

ಸುದ್ದಿ ಸಂಸ್ಥೆ ‘ದಿ ವೈರ್’ ಜೊತೆ ದೂರವಾಣಿಯಲ್ಲಿ ಮಾತನಾಡಿರುವ ವಡೇಚಾ, “ಮನೆಯಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವ ಸ್ಥಳದಿಂದ ಮಾರ್ಚ್ 22ರಂದು ಪೊಲೀಸರು ನನ್ನನ್ನು ಬಂಧಿಸಿದ್ದರು” ಎಂದು ತಿಳಿಸಿದ್ದಾರೆ.

“ಅಪರಾಧ ವಿಭಾಗದ ಸಿಬ್ಬಂದಿ ಯಾವುದೇ ವಿವರಣೆಯನ್ನು ನೀಡದೆ ನನ್ನನ್ನು ಕರೆದೊಯ್ದರು. ನಂತರ ಸುಲಿಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಹಲ್ಲೆ ನಡೆಸಿದರು. ನನ್ನ ಬಟ್ಟೆಗಳನ್ನು ಬಿಚ್ಚಿ ಜನನಾಂಗಕ್ಕೆ ಪೆಟ್ರೋಲ್ ಸುರಿದಿದ್ದಾರೆ. ತಲೆಕೆಳಗಾಗಿ ನೇತುಹಾಕಿ ಪ್ರಾಣಿಯಂತೆ ಥಳಿಸಿದ್ದಾರೆ, ಇದರಿಂದಾಗಿ ಕಿವಿಯ ತಮಟೆ ಹರಿದಿದೆ, ಕಾಲು ಮುರಿದಿದೆ ಮತ್ತು ಬೆನ್ನು ಹಾಗೂ ತಲೆಗೆ ತೀವ್ರ ಗಾಯಗಳಾಗಿವೆ” ಎಂದು ಹೇಳಿಕೊಂಡಿದ್ದಾರೆ.

ವಡೇಚಾ ಅವರ ಪ್ರಕಾರ, ಮಾರ್ಚ್ 23ರಂದು ಅವರನ್ನು ರಾಜ್‌ಕೋಟ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

“ಬಂಧನದಿಂದ 24 ಗಂಟೆಗಳ ನಂತರ ನಾನು ಬಿಡುಗಡೆಯಾದಾಗ, ನನ್ನ ಸ್ಥಿತಿ ಮತ್ತಷ್ಟು ಹದಗೆಟ್ಟಿತು. ನಾನು 108 ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ತೆರಳಿದ್ದೆ, ಆದರೆ ಅಲ್ಲೂ ಸಹ ನನ್ನನ್ನು ದಾಖಲಿಸಿಕೊಳ್ಳದಂತೆ ಪೊಲೀಸ್ ಅಧಿಕಾರಿಗಳು ವೈದ್ಯರ ಮೇಲೆ ಒತ್ತಡ ಹೇರುತ್ತಿದ್ದರು. ನನ್ನ ಮೇಲೆ ಸುಳ್ಳು ಮೊಕದ್ದಮೆಗಳನ್ನು ಹೂಡುವುದಾಗಿ ಮತ್ತು ನನ್ನ ಮನೆಯನ್ನು ಕೆಡವುವುದಾಗಿ ನನಗೆ ಬೆದರಿಕೆ ಹಾಕಿದ್ದಾರೆ” ಎಂದು ವಡೇಚಾ ತಿಳಿಸಿದ್ದಾರೆ.

ಈ ಸಂಪೂರ್ಣ ಪ್ರಕರಣವು ಅಸಿಮ್ ಆಗಮ್ ಎಂಬ ಬಿಲ್ಡರ್‌ಗೆ ಸಂಬಂಧಿಸಿದೆ ಎಂದು ವಡೇಚಾ ಹೇಳಿದ್ದಾರೆ. ಅಸಿಮ್ ಅವರ ಅಕ್ರಮ ನಿರ್ಮಾಣ ಚಟುವಟಿಕೆಗಳ ಬಗ್ಗೆ ವಡೇಚಾ ಈ ಹಿಂದೆ ವರದಿ ಮಾಡಿದ್ದರು ಎನ್ನಲಾಗಿದೆ.

“ನನ್ನ ವಿರುದ್ಧ ಯಾವುದೇ ಗಂಭೀರವಾದ ದೂರು ಇರಲಿಲ್ಲ, ಆದರೂ ಅವರ (ಬಿಲ್ಡರ್ ಅಸಿಮ್) ಸೂಚನೆಯ ಮೇರೆಗೆ ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಿ, ಈ ರೀತಿ ಹಲ್ಲೆ ನಡೆಸಲಾಗಿದೆ” ಎಂದು ವಡೇಚಾ ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ರಾಜ್‌ಕೋಟ್ ಕ್ರೈಂ ಬ್ರಾಂಚ್ ಡಿಸಿಪಿ ಬಂಗದ್ವಾ, ವಡೇಚಾ ಅವರ ಆರೋಪಗಳನ್ನು ತಳ್ಳಿಹಾಕಿದ್ದಾರೆ ಎಂದು ದಿ ವೈರ್ ವರದಿ ತಿಳಿಸಿದೆ.

“ನಾವು ಅವರ ಮೇಲೆ ಯಾವುದೇ ದೈಹಿಕ ಹಲ್ಲೆ ನಡೆಸಿಲ್ಲ. ಅವರು ಒಬ್ಬ ಅಪರಾಧಿಯಾಗಿದ್ದು, ಅವರ ವಿರುದ್ಧ ಈಗಾಗಲೇ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ” ಎಂದು ಬಂಗದ್ವಾ ಹೇಳಿದ್ದಾರೆ.

ಡಿಸಿಪಿ ಕೆಲವು ದಾಖಲೆಗಳನ್ನು ಹಂಚಿಕೊಂಡಿದ್ದು, ಅವುಗಳ ಪ್ರಕಾರ 2020ಮತ್ತು 2025ರ ನಡುವೆ ವಡೇಚಾ ವಿರುದ್ಧ ಎಂಟು ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಹೆಚ್ಚಿನವು ಶಾಂತಿ ಭಂಗ ಮತ್ತು ಸ್ಥಳೀಯ ವಿವಾದಗಳಿಗೆ ಸಂಬಂಧಿಸಿವೆ. ಕೆಲವು ಪ್ರಕರಣಗಳಲ್ಲಿ ದೂರುದಾರರೇ ತದನಂತರ ಅವುಗಳನ್ನು ವಜಾಗೊಳಿಸುವಂತೆ ಶಿಫಾರಸು ಮಾಡಿದ್ದಾರೆ ಎಂದು ದಿ ವೈರ್ ಉಲ್ಲೇಖಿಸಿದೆ.

ತೀರಾ ಇತ್ತೀಚಿನ ಪ್ರಕರಣವು 2026ರ ಮಾರ್ಚ್ 10ಕ್ಕೆ ಸಂಬಂಧಿಸಿದ್ದಾಗಿದ್ದು, ‘ಭಾಗ್ಯಲಕ್ಷ್ಮಿ ಸ್ಕ್ರ್ಯಾಪ್’ ಎಂಬ ಸಂಸ್ಥೆಯ ಮಾಲೀಕ ಭರತ್‌ಭಾಯಿ ವೀರ್‌ಜಿಭಾಯಿ ಸಾಗರ್ ಎಂಬವರು ವಡೇಚಾ ತಮ್ಮ ವ್ಯವಹಾರದ ಸ್ಥಳದ ವಿಡಿಯೋ ಚಿತ್ರೀಕರಿಸಿ ದೊಡ್ಡ ಮೊತ್ತದ ಹಣ ಸುಲಿಗೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ವರದಿ ವಿವರಿಸಿದೆ.

ಸಾಗರ್ ಅವರಿಗೆ ಆ ವಿಡಿಯೋದಲ್ಲಿದ್ದ ವಿಷಯದ ಬಗ್ಗೆ ನಿಖರವಾಗಿ ಏನನ್ನೂ ಹೇಳಲು ಸಾಧ್ಯವಾಗಿಲ್ಲ. ಪೊಲೀಸರಂತೆಯೇ ಅವರು ಕೂಡ ದೈಹಿಕ ಹಲ್ಲೆಯ ಆರೋಪಗಳನ್ನು ‘ನಾಟಕ’ ಎಂದು ಕರೆದಿದ್ದಾರೆ.

ಆದಾಗ್ಯೂ, ವಡೇಚಾ ಅವರ ವಿರುದ್ಧ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತ ಎಫ್‌ಐಆರ್ ದಾಖಲಾಗಿಲ್ಲ. ಬದಲಿಗೆ ಕೇವಲ ಸಾಗರ್ ಅವರು ಡಿಸಿಪಿ ಕಚೇರಿಗೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಇದು ಗಮನಾರ್ಹ ಸಂಗತಿ ಎಂದು ದಿ ವೈರ್ ವರದಿ ಹೇಳಿದೆ.

ದಿ ವೈರ್ ಹಿಂದಿ ಜೊತೆ ಮಾತನಾಡಿದ ವಡೇಚಾ, ಸುಲಿಗೆ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಈ ನಡುವೆ, ಮಾರ್ಚ್ 27ರಂದು ವಡ್ಗಾಮ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಅವರು ರಾಜ್‌ಕೋಟ್ ಸಿವಿಲ್ ಆಸ್ಪತ್ರೆಯಲ್ಲಿ ವಡೇಚಾ ಅವರನ್ನು ಭೇಟಿ ಮಾಡಿದ್ದು, ಈ ಕುರಿತ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ವರದಿ ಪ್ರಕಾರ, ಮೇವಾನಿ ಅವರು ಗುಜರಾತ್‌ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಡಿಸಿಪಿ ವಿರುದ್ಧ ಎಫ್‌ಐಆರ್ ದಾಖಲಿಸಲು ಹಾಗೂ ಅವರ ಬಂಧನ ಮತ್ತು ವಜಾಕ್ಕೆ ಒತ್ತಾಯಿಸಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ಡಿಸಿಪಿ ಬಂಗದ್ವಾ, “ಅವರ (ವಡೇಚಾ) ವಿರುದ್ಧ ಕ್ರಿಮಿನಲ್ ದೂರು ಬಾಕಿ ಇದೆ. ತನಿಖೆಯಿಂದ ತಪ್ಪಿಸಿಕೊಳ್ಳಲು ಅವರು ಇದೆಲ್ಲವನ್ನೂ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಶಾಸಕ ಮೇವಾನಿ ‘ವೈಯಕ್ತಿಕ ಹಿತಾಸಕ್ತಿಗಾಗಿ’ ಈ ವಿಷಯವನ್ನು ಮುನ್ನಲೆಗೆ ತರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಗುಜರಾತ್‌ನ ಮಾಜಿ ಐಪಿಎಸ್ ಅಧಿಕಾರಿ ರಮೇಶ್ ಸವಾನಿ ಕೂಡ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಫೇಸ್‌ಬುಕ್ ಪೋಸ್ಟ್‌ನಲ್ಲಿ ಅವರು, ವಡೇಚಾ ಪೊಲೀಸರ ವಿರುದ್ದ ಮಾಡಿರುವ ಆರೋಪಗಳನ್ನು ಅತ್ಯಂತ ಗಂಭೀರವೆಂದು ಬಣ್ಣಿಸಿದ್ದು, “ನ್ಯಾಯಾಲಯ ಕೂಡ ಇಂತಹ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ಒಂದು ವೇಳೆ ಆರೋಪಗಳು ನಿಜವಾಗಿದ್ದರೆ, ಇಂತಹ ಕ್ರೌರ್ಯವನ್ನು ಎಸಗಲು ಪೊಲೀಸರು ಕಾನೂನಿನ ಮಿತಿಗಳನ್ನು ಯಾಕೆ ಮೀರಿದರು?” ಎಂದು ಅವರು ಪ್ರಶ್ನಿಸಿದ್ದಾರೆ.

“ವಡೇಚಾ ವಿರುದ್ಧ ಯಾವುದೇ ಗಂಭೀರ ಕ್ರಿಮಿನಲ್ ಪ್ರಕರಣಗಳು ಬಾಕಿ ಇಲ್ಲ; ಆದರೂ, ಅವರ ಮೇಲೆ ಇಂತಹ ದೌರ್ಜನ್ಯ ನಡೆದಿದ್ದರೆ, ಅದು ಗಂಭೀರ ಕಳವಳದ ವಿಷಯ. ಇಂತಹ ಕ್ರೌರ್ಯವನ್ನು ಸಾಮಾನ್ಯವಾಗಿ ದುರ್ಬಲ ಮತ್ತು ಅಂಚಿನಲ್ಲಿರುವ ಸಮುದಾಯಗಳಿಗೆ ಸೇರಿದ ವ್ಯಕ್ತಿಗಳ ಮೇಲೆ ಎಸಗಲಾಗುತ್ತದೆ” ಎಂದು ಸವಾನಿ ಹೇಳಿದ್ದಾರೆ.

ಪ್ರಸ್ತುತ, ಈ ಪ್ರಕರಣದಲ್ಲಿ ಎರಡೂ ಕಡೆಯವರು ಮಾಡಿರುವ ಆರೋಪಗಳು ಮತ್ತು ಸಮರ್ಥನೆಗಳು ಸಂಪೂರ್ಣವಾಗಿ ತದ್ವಿರುದ್ದವಾಗಿವೆ. ಒಂದು ಕಡೆ ಪತ್ರಕರ್ತ ಗಂಭೀರ ಆರೋಪಗಳನ್ನು ಮಾಡುತ್ತಿದ್ದರೆ, ಮತ್ತೊಂದು ಕಡೆ ಪೊಲೀಸರು ಅವುಗಳನ್ನು ನಿರಾಕರಿಸುತ್ತಿದ್ದಾರೆ.





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...