Homeಮುಖಪುಟಪೆಟ್ರೋಲ್ ಬೆಲೆ ಏರಿಕೆ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ - ಬಿಜೆಪಿ ಮುಖಂಡ

ಪೆಟ್ರೋಲ್ ಬೆಲೆ ಏರಿಕೆ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ – ಬಿಜೆಪಿ ಮುಖಂಡ

"ನಾನು ಪ್ರತಿಪಕ್ಷದಲ್ಲಿದ್ದಾಗ ಬೆಲೆ ಏರಿಕೆಯ ಬಗ್ಗೆ ಪ್ರತಿಭಟನೆ ನಡೆಸಿದೆ. ಇದು ದೊಡ್ಡ ವಿಷಯವಲ್ಲ. ನಾವು ಪ್ರತಿಪಕ್ಷದಲ್ಲಿದ್ದಾಗ ಪ್ರತಿಭಟಿಸುತ್ತೇವೆ. ಇಂಧನ ಬೆಲೆಗಳ ಬಗ್ಗೆ ಸಾರ್ವಜನಿಕರು ತಲೆಕೆಡಿಸಿಕೊಳ್ಳುವುದಿಲ್ಲ..."

- Advertisement -
- Advertisement -

“ಪೆಟ್ರೋಲ್ ಬೆಲೆ ಏರಿಕೆಯ ಬಗ್ಗೆ ಸಾರ್ವಜನಿಕರಿಗೆ ಕಾಳಜಿಯಿಲ್ಲ, ಇದು ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ” ಎಂದು ಬಿಜೆಪಿಯ ಕೇರಳ ಘಟಕದ ಅಧ್ಯಕ್ಷ ಕೆ ಸುರೇಂದ್ರನ್ ಮಂಗಳವಾರ ಹೇಳಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸೋಮವಾರ ಸತತ ಆರನೇ ದಿನವೂ ಏರಿಕೆಯಾಗಿದ್ದು, ಪ್ರತಿ ಲೀಟರ್‌ಗೆ 26-30 ಪೈಸೆ ಏರಿಕೆಯಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 83.41 ರೂ.ಗಳಿಂದ, 83.71 ರೂ.ಗೆ ಏರಿಕೆಯಾಗಿದೆ. ಡೀಸೆಲ್ ಪ್ರತಿ ಲೀಟರ್‌ಗೆ 73.61 ರಿಂದ ರೂ. 73.87 ರೂಪಾಯಿಗೆ ಏರಿಕೆಯಾಗಿದೆ.

ಇದನ್ನೂ ಓದಿ: ಪಿಸ್ತೂಲ್-ಪೆಟ್ರೋಲ್-ಫಾರ್ಮಾ-ಡ್ರಗ್-ಡಾಲರ್ ಪ್ರಪಂಚವನ್ನು ನಿಯಂತ್ರಿಸುತ್ತಿರುವ ಪಂಚ ಅಸ್ತ್ರಗಳು!

ಕಾಂಗ್ರೆಸ್ ಪಕ್ಷವೇ ಬೆಲೆ ನಿಯಂತ್ರಣ ಪ್ರಾಧಿಕಾರವನ್ನು ತೈಲ ಕಂಪನಿಗಳಿಗೆ ಹಸ್ತಾಂತರಿಸಿದೆ ಎಂದು ಸುರೇಂದ್ರನ್ ಆರೋಪಿಸಿದ್ದಾರೆ.

“ದೇಶದಲ್ಲಿ ಇಂಧನ ದರ ಏರಿಕೆಯು ಸಾರ್ವಜನಿಕರ ಮೇಲೆ ಪರಿಣಾಮ ಬೀರುವುದಿಲ್ಲ ಮತ್ತು ಇದು ಚುನಾವಣೆಯಲ್ಲಿ ಪರಿಗಣಿಸಬಹುದಾದ ಒಂದು ಅಂಶವಲ್ಲ. ತೈಲ ಕಂಪನಿಗಳಿಗೆ ದರ ನಿರ್ಧರಿಸುವ ಅಧಿಕಾರವನ್ನು ಕಾಂಗ್ರೆಸ್ ಪಕ್ಷವೇ ನೀಡಿದ್ದು” ಎಂದು ಸುರೇಂದ್ರನ್ ಸುದ್ದಿಗಾರರಿಗೆ ತಿಳಿಸಿದರು.

ಮೂರು ಹಂತದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೊದಲ ಹಂತದ ಚುನಾವಣೆ ಇಂದು ನಡೆಯುತ್ತಿದೆ. ಈ ಸಂದರ್ಭದಲ್ಲಿ ಅವರ ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ: ಮುಳುಗುತ್ತಿರುವ ಭಾರತ ಮತ್ತು ಅದರೊಳಗಿರುವ ನಾವು: ದೇವನೂರು ಮಹಾದೇವ

ಯುಪಿಎ ಆಳ್ವಿಕೆಯಲ್ಲಿ ಇಂಧನ ಬೆಲೆ ಏರಿಕೆಯ ವಿರುದ್ಧ ಸುರೇಂದ್ರನ್ ತನ್ನ ಸ್ಕೂಟರ್ ಅನ್ನು ತಳ್ಳಿಕೊಂಡು ಹೋಗಿ ಪ್ರತಿಭಟನೆ ಮಾಡಿದ್ದರ ಬಗ್ಗೆ ಕೇಳಿದಾಗ, “ಇಂದು ಇದನ್ನು ಮಾಡಲು ಪ್ರತಿಪಕ್ಷಗಳಲ್ಲಿ ಜನರಿದ್ದಾರೆ” ಎಂದು ಹೇಳಿದರು.

“ನಾನು ಪ್ರತಿಪಕ್ಷದಲ್ಲಿದ್ದಾಗ ಇಂಧನ ಬೆಲೆ ಏರಿಕೆಯ ಬಗ್ಗೆ ಪ್ರತಿಭಟನೆ ನಡೆಸಿದೆ. ಇದು ದೊಡ್ಡ ವಿಷಯವಲ್ಲ. ನಾವು ಪ್ರತಿಪಕ್ಷದಲ್ಲಿದ್ದಾಗ ಪ್ರತಿಭಟಿಸುತ್ತೇವೆ. ಇಂಧನ ಬೆಲೆಗಳ ಬಗ್ಗೆ ಸಾರ್ವಜನಿಕರು ತಲೆಕೆಡಿಸಿಕೊಳ್ಳುವುದಿಲ್ಲ. ನಾವು ಉಚಿತ ಅಕ್ಕಿ, ಅಡುಗೆ ಅನಿಲವನ್ನು ನೀಡುತ್ತಿದ್ದೇವೆ. ಅಗ್ಗದ ದರದಲ್ಲಿ ಔಷಧಿ, ಕಿಸಾನ್ ಸಮ್ಮಾನ್ ನಿಧಿ ಮತ್ತು ಸಾರ್ವಜನಿಕರಿಗೆ ಇತರ ಪ್ರಯೋಜನಗಳನ್ನು ಒದಗಿಸುತ್ತಿದ್ದೇವೆ. ಅದಕ್ಕಾಗಿಯೇ ನಾವು ದೇಶಾದ್ಯಂತ ಎಲ್ಲಾ ಚುನಾವಣೆಗಳನ್ನು ಗೆಲ್ಲುತ್ತಿದ್ದೇವೆ “ಎಂದು ಸುರೇಂದ್ರನ್ ಹೇಳಿದರು.

ಇದನ್ನೂ ಓದಿ: ಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

ಯುಪಿಎ ಆಳ್ವಿಕೆಯಲ್ಲಿ ದೇಶದಲ್ಲಿ ಪೆಟ್ರೋಲ್ ಬೆಲೆ 87 ರೂ. ಮತ್ತು ಈಗ ಅದು ಸುಮಾರು 83 ರೂ. ಇದೆ ಎಂದು ಸುರೇಂದ್ರನ್ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪತ್ರಕರ್ತರು, ಸರಿಯಾದ ಬೆಲೆ ಸುಮಾರು 67 ರೂ ಎಂದು ಹೇಳಿದಾಗ, ಸುರೇಂದ್ರನ್ ಅದನ್ನು ತಳ್ಳಿಹಾಕಿದರು. ಇದು ಕಾಂಗ್ರೆಸ್ ಮತ್ತು ಸಿಪಿಐ (ಎಂ) ನೀಡಿದ ಸಮರ್ಥನೆಯ ಭಾಗವಾಗಿದೆ ಎಂದು ಹೇಳಿದರು.


ಇದನ್ನೂ ಓದಿ: ಮದುವೆಯಲ್ಲಿ ಗಿಫ್ಟ್ ಬದಲು ಹೋರಾಟ ನಿರತ ರೈತರಿಗಾಗಿ ದೇಣಿಗೆ ಸಂಗ್ರಹಿಸಿದ ಕುಟುಂಬ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...