Homeಕರ್ನಾಟಕಸತತ 7ನೇ ದಿನವೂ ಪೆಟ್ರೋಲ್‌ ದರ ಹೆಚ್ಚಳ: ಗುಲ್ಬರ್ಗಾದಲ್ಲಿ 1.57 ರೂ., ಬಳ್ಳಾರಿಯಲ್ಲಿ 1.11 ರೂ....

ಸತತ 7ನೇ ದಿನವೂ ಪೆಟ್ರೋಲ್‌ ದರ ಹೆಚ್ಚಳ: ಗುಲ್ಬರ್ಗಾದಲ್ಲಿ 1.57 ರೂ., ಬಳ್ಳಾರಿಯಲ್ಲಿ 1.11 ರೂ. ಏರಿಕೆ!

- Advertisement -
- Advertisement -

ಕಳೆದ ಎಂಟು ದಿನಗಳಲ್ಲಿ ಏಳನೇ ಬಾರಿಗೆ ಮಂಗಳವಾರ ಮತ್ತೆ ಇಂಧನ ಬೆಲೆ ಏರಿಕೆಯಾಗಿದೆ. ರಾಜ್ಯ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ದರವನ್ನು ಲೀಟರ್‌ಗೆ 80 ಪೈಸೆ ಮತ್ತು ಡೀಸೆಲ್ ಲೀಟರ್‌ಗೆ 70 ಪೈಸೆಗಳಷ್ಟು ಹೆಚ್ಚಿಸಲಾಗಿದೆ. ಈ ಏರಿಕೆಯೊಂದಿಗೆ ರಾಜ್ಯದಲ್ಲೂ ಇಂಧನ ದರ ಹೆಚ್ಚಳವಾಗಿದ್ದು, ಪೆಟ್ರೋಲ್‌‌ 84 ಪೈಸೆ ಹೆಚ್ಚಿಸಲಾಗದ್ದು, ಪ್ರತಿ ಲೀಟರ್‌ಗೆ 106.13 ರೂ.ಗೆ ತಲುಪಿದೆ. ಡೀಸೆಲ್ ದರ 69 ಪೈಸೆ ಹೆಚ್ಚಿಸಲಾಗಿದ್ದು, ಪ್ರತಿ ಲೀಟರ್‌ಗೆ 90.19 ರೂ.ಗೆ ತಲುಪಿದೆ.

ದೇಶಾದ್ಯಂತ ದರಗಳನ್ನು ಹೆಚ್ಚಿಸಲಾಗಿದ್ದು, ಸ್ಥಳೀಯ ತೆರಿಗೆಯನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ದರಗಳು ಬದಲಾಗುತ್ತವೆ. ರಾಜ್ಯದಲ್ಲಿ ಕಳೆದ ಹತ್ತು ದಿನಗಳಲ್ಲಿ ಇಂಧನ ದರ ಏರಿಕೆ ಚಿತ್ರ ಕೆಳಗಿದೆ. ಗಮನಿಸಿ.

ಈ ದರ ಹೆಚ್ಚಳದೊಂದಿಗೆ ಬೆಂಗಳೂರಿನಲ್ಲಿ ಪ್ರತಿ ಲೀಟರ್‌‌ ಪೆಟ್ರೋಲ್‌ಗೆ 84 ಪೈಸೆ ಬೆಲೆ ಹೆಚ್ಚಾಗಿದ್ದು, 105.62 ರೂ.ಗೆ ತಲುಪಿದೆ. ಡೀಸೆಲ್‌ ಪ್ರತಿ ಲೀಟರ್‌ಗೆ 68 ಪೈಸೆ ಹೆಚ್ಚಾಗಿದ್ದು, 89.70 ರೂ. ತಲುಪಿದೆ. ರಾಜ್ಯದಲ್ಲೇ ಅತೀ ಹೆಚ್ಚು ಪೆಟ್ರೋಲ್‌ ದರ ಹೆಚ್ಚಿರುವ ಜಿಲ್ಲೆಯಾಗಿ ಚಿಕ್ಕಮಗಳೂರು ಹೊರಹೊಮ್ಮಿದ್ದು, ಪ್ರತಿ ಲೀಟರ್‌‌ ಪೆಟ್ರೋಲ್‌ ಬೆಲೆ 107.95 ರೂ. ಗೆ ತಲುಪಿದ್ದು, ಡೀಸೆಲ್ ದರ 69 ಪೈಸೆ ಹೆಚ್ಚಳದೊಂದಿಗೆ 91.71 ರೂ. ಗೆ ಏರಿಕೆಯಾಗಿದೆ.

ಇದನ್ನೂ ಓದಿ: ಚುನಾವಣೆ ಮುಗಿದ ಕೂಡಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿದ್ದತೆ: ಕಾಂಗ್ರೆಸ್ ವಿರೋಧ

ಗುಲ್ಬರ್ಗಾ ಜಿಲ್ಲೆಯಲ್ಲಿ ಇಂದು ಪೆಟ್ರೋಲ್ ಬೆಲೆ 1.57 ಏರಿಕೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ 106.07 ರೂ. ಆಗಿದೆ. ಡೀಸೆಲ್ ಬೆಲೆ 1.34 ಹೆಚ್ಚಳವಾಗಿದ್ದು ಇದರೊಂದಿಗೆ ಪ್ರತಿ ಲೀಟರ್‌ ಬೆಲೆ 90.13 ರೂ. ಗೆ ತಲುಪಿದೆ. ಬಳ್ಳಾರಿಯಲ್ಲೂ ಇಂದು ಪೆಟ್ರೋಲ್‌ ಬೆಲೆ 1.11 ರೂ. ಹೆಚ್ಚಿಸಲಾಗಿದೆ. ಉಳಿದಂತೆ ಬಾಕಿ ಜಿಲ್ಲೆಗಳ ಬೆಲೆಗಳು ಕೆಳಗಿನಂತಿವೆ.

ಐದು ರಾಜ್ಯಗಳಲ್ಲಿ ಚುನಾವಣೆ ಇದ್ದುದರಿಂದ ಕಚ್ಚಾ ತೈಲ ಬೆಲೆ ಏರಿಕೆಯ ಹೊರತಾಗಿಯೂ ನಾಲ್ಕು ತಿಂಗಳ ಕಾಲ ಇಂಧನ ದರಗಳನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಏರಿಸಿರಲಿಲ್ಲ. ಇದರ ಬಂತರ ದರ ಪರಿಷ್ಕರಣೆ ಮಾರ್ಚ್ 22 ರ ನಂತರ ಮತ್ತೆ ಪ್ರಾರಂಭವಾಗಿತ್ತು.

ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರ್ಕಾರಿ ತೈಲ ಸಂಸ್ಕರಣಾಗಾರಗಳು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಕಚ್ಚಾ ತೈಲ ಬೆಲೆಗಳು ಮತ್ತು ರೂಪಾಯಿ-ಡಾಲರ್ ವಿನಿಮಯ ದರಗಳನ್ನು ಗಣನೆಗೆ ತೆಗೆದುಕೊಂಡು ಪ್ರತಿದಿನ ಇಂಧನ ದರಗಳನ್ನು ಪರಿಷ್ಕರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಪ್ರತಿದಿನ ಬೆಳಿಗ್ಗೆ 6 ರಿಂದ ಜಾರಿಗೆ ತರಲಾಗುತ್ತದೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಮೇಲಿನ ಸಂಪೂರ್ಣ ಸೆಸ್ ತೆಗೆದುಹಾಕಿ: ತೆಲಂಗಾಣ ಸಿಎಂ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬನ್ನಿ ದೇಶದ ಜನಗಳೆಲ್ಲಾ ಕಾಶ್ಮೀರ್ ಫ಼ೈಲ್ಸ್ ನೋಡಿ. ಪೆಟ್ರೋಲ್ ಮತ್ತು ಡಿಸೇಲ್ ದರಗಳ ಬಗ್ಗೆ ಯೋಚನೆ ಬಿಡಿ…. ನಾಚಿಕೆಯಾಗಬೇಕು ಕೇಂದ್ರ ಸರಕಾರಕ್ಕೆ……..

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...