Homeಮುಖಪುಟಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

- Advertisement -
- Advertisement -

ಪೆಟ್ರೋಲ್‌, ಡಿಸೇಲ್‌ ದರ ನಿತ್ಯ ಗಗನ ಮುಖಿಯಾಗಿ ಏರುತ್ತಲೇ ಇದೇ. ಈಗಾಗಲೇ 100 ರೂಪಾಯಿ ಗಡಿ ದಾಟಿ  110 ರ ಕಡೆ ಹೋಗುತ್ತಿದೆ. ಕೇವಲ ವಾಹನ ಸವಾರರಲ್ಲದೇ ದಿನ ನಿತ್ಯದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಪೆಟ್ರೋಲ್‌ ಏರಿಕೆ ಕಾರಣವಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ಜನ ಅನೇಕ ಕಡೆ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ.

ಜನರ ಆಕ್ರೋಶ, ವಿರೋಧ ಪಕ್ಷಗಳ ಪ್ರತಿಭಟನೆ ಮತ್ತು ಆರೋಪಗಳಿಗೆ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್‌ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಧರ್ಮೇಂದ್ರ ಪ್ರಧಾನ್‌ ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳಲ್ಲಿ ಪೆಟ್ರೋಲ್‌ ಬೆಲೆ ಅಧಿಕವಾಗಿದೆ. ಕಾಂಗ್ರೆಸ್‌ ಅಲ್ಲಿನ ಮುಖ್ಯಮಂತ್ರಿಗಳಿಗೆ ಹೇಳಿ ತೆರಿಗೆ ಕಡಿಮೆ ಮಾಡಿಸಬೇಕು. ಪಂಜಾಬ್‌, ರಾಜಸ್ಥಾನ, ಮಹಾರಾಷ್ಟ್ರಗಳಲ್ಲಿ ಪೆಟ್ರೋಲ್ ಬೆಲೆ ಹೆಚ್ಚಿಗೆ ಇಲ್ಲವೇ?  ಎಂದು ಧರ್ಮೇಂದ್ರ ಪ್ರಧಾನ್‌ ಕಾಂಗ್ರೆಸ್‌ಗೆ ಸವಾಲು ಹಾಕಿದ್ದಾರೆ.

ಜನ ಸಾಮಾನ್ಯರಿಗೆ ಆಗುವ ಸಮಸ್ಯೆಗಳ ಕುರಿತು ಪ್ರತಿಕ್ರಿಯಿಸಿದ ಧರ್ಮೇಂದ್ರ ಪ್ರಧಾನ್‌ ಜನರಿಗೆ ಸಮಸ್ಯೆಯಾಗುತ್ತಿದೆ ಎಂದು ತಿಳಿದಿದೆ. ವ್ಯಾಕ್ಸೀನ್‌ ಗಾಗಿ 35,000 ಕೋಟಿ ಹಣ ಖರ್ಚಾಗುತ್ತಿದೆ. ಬೇರೆ ಅಭಿವೃದ್ಧಿ ಕಾರ್ಯಕ್ಕೂ ಹಿನ್ನಡೆಯಾಗಿದೆ. ಈಗ ಪೆಟ್ರೋಲ್, ಡಿಸೇಲ್‌ ಮೇಲಿನ ತೆರಿಗೆ ಕಡಿತ ಸಾಧ್ಯವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಪೆಟ್ರೋಲ್‌ ಬೆಲೆ ಅತ್ಯಂತ ಹೆಚ್ಚಿರುವ ರಾಜ್ಯಗಳು ತೆರಿಗೆ ವಿನಾಯತಿಗೆ ಮುಂದಾಗಬೇಕು ಎಂದು ಧರ್ಮೇಂದ್ರ ಪ್ರಧಾನ್‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...