Homeಕರ್ನಾಟಕಕೋಲಾರದ ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಪೆತ್ತಾಂಡ್ಲಹಳ್ಳಿ ಚಲೋಗೆ ನಿರ್ಧಾರ

ಕೋಲಾರದ ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಪೆತ್ತಾಂಡ್ಲಹಳ್ಳಿ ಚಲೋಗೆ ನಿರ್ಧಾರ

- Advertisement -
- Advertisement -

ಕೋಲಾರ ಜಿಲ್ಲೆಯ ಪೆತ್ತಾಂಡ್ಲಹಳ್ಳಿಯಲ್ಲಿ ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕ ಉದಯ್ ಕಿರಣ್ ಮೇಲಿನ ಸವರ್ಣೀಯರ ಹಲ್ಲೆ ಮತ್ತು ಆತ್ಮಹತ್ಯೆಗೆ ವ್ಯಾಪಕ ಪ್ರತಿರೋಧ ವ್ಯಕ್ತವಾಗಿದೆ. ಇಂದು ಗ್ರಾಮಕ್ಕೆ ಭೇಟಿ ನೀಡಿ ದಲಿತ ಮತ್ತು ಪ್ರಗತಿಪರ ಸಂಘಟನೆಯ ಮುಖಂಡರು ಸಭೆ ಸೇರಿ ಪೆತ್ತಾಂಡ್ಲಹಳ್ಳಿ ಬೈಕ್ ಜಾಥಾ ನಡೆಸಲು ತೀರ್ಮಾನಿಸಿದ್ದಾರೆ.

ಯಾವ ಮರಕ್ಕೆ ದಲಿತ ಉದಯ್ ಕಿರಣ್ ಕಟ್ಟಿ ಹಲ್ಲೆ ನಡೆಸಲಾಯಿತೊ ಅಲ್ಲಿಯೇ ಜಮಾಯಿಸಿದ ಮುಖಂಡರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. “ಇದು ಆತ್ಮಹತ್ಯೆ ಎನ್ನುವುದಕ್ಕಿಂತ ಕೊಲೆ ಎಂದು ಕರೆಯಬೇಕಾಗಿದೆ. ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ ಪೊಲೀಸ್ ವೈಫಲ್ಯ ಎದ್ದು ಕಾಣುತ್ತಿದೆ. ಘಟನೆ ನಡೆದು ಎರಡು ದಿನಗಳಾದರೂ ಆರೋಪಿಗಳ ಬಂಧನವಾಗಿಲ್ಲ. ಕೋಲಾರ ಜಿಲ್ಲೆಯಲ್ಲಿನ ಜನಪ್ರತಿನಿಧಿಗಳು ಪ್ರಕರಣವನ್ನು ಖಂಡಿಸಿಲ್ಲ. ಮೂರು ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕರು, ಜಿಲ್ಲೆಯ ದಲಿತ ಸಂಸದರು ಬಾಯಿ ಮುಚ್ಚಿ ಕುಳಿತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದಕ್ಕೂ ಮೊದಲು ಸಂತ್ರಸ್ತ ಯುವಕ ವಾಸವಿದ್ದ ಬೇವಹಳ್ಳಿಗೆ ಭೇಟಿ ನೀಡಿದ ಸಂಘಟನೆಗಳ ನಿಯೋಗವು ಅವರ ಕುಟುಂಬದವರಿಗೆ ಸಾಂತ್ವಾನ ಹೇಳಿ ನ್ಯಾಯ ಕೊಡಿಸುವ ಭರವಸೆ ನೀಡಿದರು.

ಪೊಲೀಸರು 24 ಗಂಟೆಗಳ ಒಳಗಾಗಿ ಆರೋಪಿಗಳನ್ನು ಬಂಧಿಸಬೇಕು. ಈ ರೀತಿಯ ಘಟನೆಗಳು ನಡೆಯದಂತೆ ತಡೆಯಬೇಕು. ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ಪರಿಹಾರ, ಮನೆ ಮತ್ತು ಸರ್ಕಾರಿ ಉದ್ಯೋಗ ನೀಡಬೇಕು. ಈ ಬೇಡಿಕೆಗಳ ಈಡೇರಿಕೆಗಾಗಿ ಮುಳಬಾಗಿಲಿನಿಂದ ಪೆತ್ತಾಂಡ್ಲಹಳ್ಳಿಗೆ ಬೈಕ್ ಜಾಥ ನಡೆಸಲಾಗುವುದು. ಆರೋಪಿಗಲ ಮನೆ ಎದುರೆ ಸ್ವಾಭಿಮಾನಿ ಸಮಾವೇಶ ನಡೆಸಲಾಗುವುದು. ಪೆತ್ತಾಂಡ್ಲಹಳ್ಳಿ ಜಾಥಾದ ದಿನಾಂಕವನ್ನು ಡಿಸೆಂಬರ್ 6 ರ ಅಂಬೇಡ್ಕರ್ ಪರಿನಿರ್ವಾಣ ದಿನದಂದು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

ಕಂಬಾಲಪಲ್ಲಿ ಘಟನೆಯಿಂದ ಹಿಡಿದು ಉಳ್ಳೇರಹಳ್ಳಿ ಜಾತಿದೌರ್ಜನ್ಯದವರೆಗೂ, ಇಂದಿನ ಪೆತ್ತಾಂಡ್ಲಹಳ್ಳಿ ಕೊಲೆವರೆಗೂ ದಲಿತರ ಮೇಲಿನ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿವೆ. ಉತ್ತರ ಪ್ರದೇಶದಲ್ಲಿ ವರದಿಯಾಗುವ ಭೀಕರ ಘಟನೆಗಳು ನಮ್ಮಲ್ಲಿಯೂ ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದುಬಿದ್ದಿದೆ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಸಭೆಯಲ್ಲಿ ಸಿಪಿಎಂ ಜಿಲ್ಲಾಧ್ಯಕ್ಷರಾದ ಗಾಂಧಿನಗರ ನಾರಾಯಣಸ್ವಾಮಿ, ಡಿಎಸ್‌ಎಸ್‌ ಸಂಯೋಜಕ ಬಣದ ಮೆಕಾನಿಕ್ ಶ್ರೀನಿವಾಸ್, ಬಹುಜನ ಚಳವಳಿಯ ಸಂಗಸಂದ್ರ ವಿಜಯ್ ಕುಮಾರ್, ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ, ಸುರೇಶ್ ಬಾಬು, ಶ್ರೀನಿವಾಸ್, ಮೃತ ಉದಯ್ ಕಿರಣ್ ಮಾವ ನಾಗರಾಜು ಭಾಗವಹಿಸಿದ್ದರು.

ಇನ್ನೊಂದೆಡೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬೇವಹಳ್ಳಿಯ ಸಂತ್ರಸ್ತ ಯುವಕನ ಕುಟುಂಬವನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ. 50 ಸಾವಿರ ರೂಗಳ ಪರಿಹಾರದ ಚೆಕ್ ವಿತರಿಸಲಾಗಿದೆ.

ಇದನ್ನೂ ಓದಿ: ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...