HomeಮುಖಪುಟNPRಗೂ ಆರೋಗ್ಯ ಸಮೀಕ್ಷೆಗೂ ಸಂಬಂಧವಿಲ್ಲ- ಸಮೀಕ್ಷೆ ನಡೆಸುವ ಆಶಾ ಕಾರ್ಯಕರ್ತರಿಗೆ ಸಹಕಾರ ನೀಡಿ: ಪಿಎಫ್‌ಐ

NPRಗೂ ಆರೋಗ್ಯ ಸಮೀಕ್ಷೆಗೂ ಸಂಬಂಧವಿಲ್ಲ- ಸಮೀಕ್ಷೆ ನಡೆಸುವ ಆಶಾ ಕಾರ್ಯಕರ್ತರಿಗೆ ಸಹಕಾರ ನೀಡಿ: ಪಿಎಫ್‌ಐ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಬ್ಬುತ್ತಿರುವ ಸಾಂಕ್ರಾಮಿಕವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಆರೋಗ್ಯ ಸಮೀಕ್ಷೆ ನಡೆಸಲು ಮುಂದಾಗಿರುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತರಿಗೆ ಮುಸ್ಲಿಂ ಸಮುದಾಯವು ಸಂಪೂರ್ಣ ಸಹಕಾರ ನೀಡುವಂತೆ ಪಾಪ್ಯುಲರ್‌ ಪ್ರಂಟ್‌ ಆಫ್‌ ಇಂಡಿಯಾ ಮನವಿ ಮಾಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ದಕ್ಷಿಣ ಕನ್ನಡದ ಪಿಎಫ್‌ಐ ಜಿಲ್ಲಾಧ್ಯಕ್ಷ ಇಜಾಝಝ್ ಅಹ್ಮದ್ “ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ರವರು ಆರೋಗ್ಯ ಸಮೀಕ್ಷೆಯನ್ನು ಯಶಸ್ವಿಗೊಳಿಸುವಂತೆ ಕೋರಿಕೊಂಡಿದ್ದಾರೆ. ಎನ್‌ಪಿಆರ್ ಸಮೀಕ್ಷೆಯನ್ನು ಎಪ್ರಿಲ್ 15ರಂದು ಪ್ರಾರಂಭಿಸುವ ಬಗ್ಗೆ ಈ ಹಿಂದೆ ಸರಕಾರವು ಅಧಿಕೃತ ಆದೇಶ ಹೊರಡಿಸಿತ್ತು. ಆದರೆ ಕೊರೋನದ ಸನ್ನಿವೇಶದಲ್ಲಿ ಅದನ್ನು ಮುಂದೂಡಲಾಗಿದ್ದು, ಇದರ ದಿನಾಂಕವನ್ನು ಇನ್ನೂ ನಿಗದಿಪಡಿಸಲಾಗಿಲ್ಲ. ಎನ್‌ಪಿಆರ್‌ ಪ್ರಕ್ರಿಯೆಗೂ, ಈ  ಸಮೀಕ್ಷೆಗೂ ಯಾವುದೇ ರೀತಿಯ ಸಂಬಂಧವಿಲ್ಲ. ಹಾಗಾಗಿ ಸಮೀಕ್ಷೆ ನಡೆಸವು ನಾವೆಲ್ಲರೂ ಆಶಾಕಾರ್ಯಕರ್ತರಿಗೆ ಸಹಕಾರ ನೀಡೋಣ” ಎಂದಿದ್ದಾರೆ.


ಇದನ್ನೂ ಓದಿ: ಕರೋನಾಕ್ಕೆ ಕೊನೆಯಿದ್ದೀತು, ಆದರೆ ಈ ಮುಸ್ಲಿಮ್ ದ್ವೇಷಕ್ಕೆ ಮದ್ದೇನು?


ಈ ಆರೋಗ್ಯ ಸಮೀಕ್ಷೆ ಯ ವೇಳೆ ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಯಾವುದೇ ಗೊಂದಲ ಹಾಗೂ ತಪ್ಪುಗ್ರಹಿಕೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳಬಾರದು. ಈ ಸಮೀಕ್ಷೆಯಲ್ಲಿ ಕೇಳಲಾಗುವ ಮಾಹಿತಿಗಳ ಕುರಿತು ಬಹಳ ಸ್ಪಷ್ಟವಾಗಿ ವಿವರಿಸಲಾಗಿದೆ. ಮನೆಯ ಯಜಮಾನರ ಹೆಸರು, ಮೊಬೈಲ್ ನಂಬರ್, ಮನೆಯಲ್ಲಿ ಪ್ರಸ್ತುತವಿರುವ ಒಟ್ಟು ಸದಸ್ಯರ ಸಂಖ್ಯೆ ಮತ್ತು ಮನೆಮಂದಿಗೆ ಯಾವುದಾದರೂ ರೋಗ ಲಕ್ಷಣಗಳಿರುವ ಕುರಿತ ಆರೋಗ್ಯ ಸಂಬಂಧಿ ಮಾಹಿತಿಗಳನ್ನಷ್ಟೇ ಕೇಳಲಾಗುತ್ತದೆ. ಈ ಆರೋಗ್ಯ ಸಮೀಕ್ಷೆಗೆ ಎಲ್ಲರೂ ಸಹಕಾರ ನೀಡಿ ಜಿಲ್ಲಾಡಳಿತದೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕು” ಎಂದು ಅವರು ತಿಳಿಸಿದ್ದಾರೆ.

“ಅದೇ ರೀತಿ ನಮ್ಮ ದೇಶದ, ಸಮಾಜದ ಒಳಿತಿಗಾಗಿ ಮತ್ತು ನಮ್ಮ ಆರೋಗ್ಯದ ಹಿತದಷ್ಟಿಯಿಂದ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸ್ವಯಂ ಸೇವಕರ ಸೇವೆಯನ್ನು ನಾವು ಈ ಸಂದರ್ಭದಲ್ಲಿ ಶ್ಲಾಘಿಸಬೇಕು ಮತ್ತು ಅವರನ್ನು ಗೌರವಿಸಬೇಕು. ಈ ನಿಟ್ಟಿನಲ್ಲಿ ಮನೆ ಮನೆ ಭೇಟಿ ಕೊಡುವ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಮೀಕ್ಷೆಯ ಸ್ವಯಂ ಸೇವಕರಿಗೆ ಸಮರ್ಪಕ ಮಾಹಿತಿ ನೀಡಿ ಸಹಕರಿಸಬೇಕು” ಎಂದು ಕೂಡ ಕರಪತ್ರವೊಂದನ್ನು ಮುದ್ರಿಸಿ ಹಂಚುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಯಾವುದೇ ಹೊಸ ಪ್ರಕರಣಗಳು ದಾಖಲಾಗಿರಲಿಲ್ಲ. ಆದರೆ ಇತ್ತೀಚೆಗೆ ಪ್ರಕರಣವೊಂದು ಕಾಣಿಸಿಕೊಂಡಿದ್ದು, ಜಿಲ್ಲಾಡಳಿತ ಆರೋಗ್ಯ ಸಮೀಕ್ಷೆ ಗೆ ಮುಂದಾಗಿದೆ.

ಏಪ್ರಿಲ್ ಮೊದಲ ವಾರದಲ್ಲಿ ಬೆಂಗಳೂರಿನ ಸಾರಾಯಿಪಾಳ್ಯದ ಸಾದಿಕ್ ಲೇಔಟ್ ನಲ್ಲಿ ಕೊವಿಡ್-19 ತಪಾಸಣೆ ಮಾಡಲು ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಪ್ರಯತ್ನಿಸಲಾಗಿದೆ ಎಂಬ ಆರೋಪ ಕೋಮು ಬಣ್ಣ ಪಡೆದಿತ್ತು. ಅಲ್ಲಿನ ನಿವಾಸಿಗಳು ಹಂಚಿಕೊಂಡ ಮಾಹಿತಿಯ ಪ್ರಕಾರ, ಅಲ್ಲಿನ ಕೆಲವು ನಿವಾಸಿಗಳು ಕೊರೊನಾ ಆರೋಗ್ಯ ತಪಾಸಣೆಯನ್ನು, ಎನ್‌ಪಿಆರ್ ಪ್ರಕ್ರಿಯೆ ಎಂದು ಗೊಂದಲ ಮಾಡಿಕೊಂಡು ಆಗಿದ್ದ ಮಾತಿನ ಚಕಮಕಿಯಾಗಿತ್ತು. ನಂತರ ಸಮುದಾಯದ ಮುಖಂಡರು ಇದರ ಬಗ್ಗೆ ಸಾಮಾನ್ಯರಿಗೆ ತಿಳಿ ಹೇಳಿ ಅಗತ್ಯ ಮಾಹಿತಿ ನೀಡಲು ಕೇಳಿಕೊಂಡಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...