Homeಕರ್ನಾಟಕಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

"ಉಭಯ ಕೋಮುಗಳ ಪ್ರತಿಭಟನೆಯಲ್ಲಿ ಭಜನೆ ಹಾಗೂ ನಮಾಜಿಗೆ ಅವಕಾಶ ನೀಡುತ್ತಿರುವುದು ಪೊಲೀಸ್ ಇಲಾಖೆಯ ದೌರ್ಬಲ್ಯ"

- Advertisement -
- Advertisement -

ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಸಂಭವಿಸಿದ ಲಾಠಿಚಾರ್ಜ್, ಅಶಾಂತಿಯ ಪ್ರಕರಣಗಳು ಜಿಲ್ಲೆಯಲ್ಲಿ ಕಳೆದ 4 ತಿಂಗಳಿನಿಂದ ಸಂಘ ಪರಿವಾರ ಮತ್ತು ಪಿಎಫ್‌ಐ ಸಂಘಟನೆಗಳು ಸಂಯೋಜಿಸಿ ನಿರ್ದೇಶಿಸುತ್ತಿರುವ ಮತೀಯ ಹುನ್ನಾರ, ಕೋಮು ಗಲಭೆಗೆ ವೇದಿಕೆ ನಿರ್ಮಿಸುವ ಪೂರ್ವ ಯೋಜಿತ ಕೃತ್ಯಗಳ ಮುಂದುವರಿದ ಭಾಗವೇ ಆಗಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಿ.ಪಿ.ಐ(ಎಂ) ಸಮಿತಿ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಹೇಳಿದ್ದಾರೆ.

ಪತ್ರಿಕೆ ಹೇಳಿಕೆ ನೀಡಿರುವ ಅವರು, ವಿದ್ಯಾರ್ಥಿಗಳ ಮೇಲೆ ಹಲ್ಲೆ, ಭಿನ್ನ ಧರ್ಮಿಯ ಸಹಭೋಜನ ಮತ್ತು ಸಹಕೂಟಗಳ ಮೇಲೆ ಗುಂಪು ಹಲ್ಲೆ, ಪರಸ್ಪರ ವ್ಯಾಪಾರ-ವ್ಯವಹಾರಗಳ ಮೇಲೆ ದಾಂಧಲೆ, ಲವ್ ಜಿಹಾದ್ ಕಟ್ಟುಕತೆಗಳು, ದನ ಕಳ್ಳತನ ಮತ್ತು ನಾಗಬನ ಧ್ವಂಸದ ಪ್ರಕರಣ ಹಾಗೂ ಪೂಜಾ ಸ್ಥಳಗಳ ಅಪವಿತ್ರ ಇವೇ ಮೊದಲಾದ ಸಮಾಜ ಬಾಹಿರ ಕೃತ್ಯಗಳು ಒಂದಾದ ಮೇಲೆ ಒಂದರಂತೆ ಜಿಲ್ಲೆಯಲ್ಲಿ ಕಳೆದ 4 ತಿಂಗಳಿನಿಂದ ನಿರಂತರವಾಗಿ ನಡೆಯುತ್ತಿವೆ. ಇವುಗಳ ಹಿಂದೆ ಸಂಘ ಪರಿವಾರದ ಸಂಘಟನೆಗಳ ಸಿದ್ಧಾಂತ ಮತ್ತು ಕಾರ್ಯಕರ್ತರು ಭಾಗಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಅದೇ ರೀತಿ ಅದಕ್ಕೆ ಪ್ರತಿಯಾಗಿ ಪಿ.ಎಫ್.ಐ.ನ ಸಿದ್ಧಾಂತದಿಂದ ಪ್ರಭಾವಿತರಾದ ಕಾರ್ಯಕರ್ತರು ಕ್ರಿಯೆಗೆ ಪ್ರತಿಕ್ರಿಯೆ ಎಂಬ ನೆಲೆಯಲ್ಲಿ ಸಕ್ರಿಯವಾಗಿ ಸಮಾಜ ಬಾಹಯ, ಶಾಂತಿ ಭಂಗದ ಕೃತ್ಯಗಳಲ್ಲಿ ಭಾಗವಹಿಸಿ ಕಾನೂನನ್ನು ಕೈಗೆತ್ತಿಕೊಂಡಿರುತ್ತಾರೆ. ಇಂತಹ ಸಂದರ್ಭಗಳಲ್ಲಿ ನೆಲದ ಕಾನೂನನ್ನು ಎತ್ತಿ ಹಿಡಿದು ಕಾನೂನಿನನ್ವಯ ಕಾರ್ಯ ಪ್ರವೃತ್ತರಾಗಿ ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರು ಮತ್ತೆ ಇದೇ ಸಂಘಟನೆಗಳ ನಾಯಕರೊಂದಿಗೆ ಒಪ್ಪಂದ ನಡೆಸಿ ಲೋಪವೆಸಗಿದ್ದಾರೆ ಎಂದು ಯಾದವ್‌ ದೂರಿದ್ದಾರೆ.

ಅಪರಾಧಿಗಳನ್ನು ಹಸ್ತಾಂತರ ಮತ್ತು ಕೆಲವು ಘಟನೆಗಳಲ್ಲಿ ಅಪರಾಧಿಗಳ ಅದಲು ಬದಲಿನಂತಹ ಪರಸ್ಪರ ಸಂಯೋಜನೆಯನ್ನು ರೂಪಿಸುವ ಮೂಲಕ ಸಂಘ ಪರಿವಾರ ಹಾಗೂ ಪಿಎಫ್‌ಐನಂತಹ ಸಮಾಜಬಾಹಿರ ಸಂಘಟನೆಗಳಿಗೆ ಪೊಲೀಸರು ಕುಮ್ಮಕ್ಕು ನೀಡಿರುವುದನ್ನು ಕಾಣಬಹುದು. ಆದುದರಿಂದ ಉಪ್ಪಿನಂಗಡಿಯಲ್ಲಿ ನಡೆದ ಅಹಿತಕರ ಘಟನೆಗಳು ಈ ಎರಡು ಸಮಾಜ ಬಾಹಿರ ಕೃತ್ಯಗಳ ವಾರೀಸುದಾರ ಸಂಘಟನೆಗಳೊಂದಿಗೆ ಪೊಲೀಸ್ ಇಲಾಖೆಯೂ ಹೊಣೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ದಕ್ಷಿಣ ಕನ್ನಡ: ಯುವಕರ ಮೇಲೆ ತಲವಾರ್‌‌ ದಾಳಿ; ಐವರಿಗೆ ಗಾಯ

ಸಂಘ ಪರಿವಾರ ಹಾಗೂ ಪಿಎಫ್‌ಐ ಸಂಘಟನೆಗಳು ಇತ್ತೀಚಿನ ಪೊಲೀಸ್ ಠಾಣೆಗಳ ಮುಂಭಾಗದ ಪ್ರತಿಭಟನೆಯಲ್ಲಿ ಭಜನೆ, ನಮಾಜಿನಂತಹ ಪವಿತ್ರ ಧಾರ್ಮಿಕ ಆಚರಣೆಗಳನ್ನು ಬಳಕೆ ಮಾಡಿರುವುದು ಸಮಾಜದಲ್ಲಿ ಮತೀಯ ದ್ರುವೀಕರಣ ಮತ್ತಷ್ಟು ಆಳಗೊಳಿಸುವ ವ್ಯವಸ್ಥಿತ ಹುನ್ನಾರವಾಗಿದೆ. ಇಂತಹ ಅಪಾಯಕಾರಿ ಬೆಳವಣಿಗೆಗಳನ್ನು ಜನತೆ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

ದಕ್ಷಿಣ ಜಿಲ್ಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೂದಿಮುಚ್ಚಿದ ಕೆಂಡದಂತಿರುವ ಕೋಮು ಉದ್ವಿಘ್ನತೆಯ ಸಮಯದಲ್ಲಿ ಕಳೆದ ಎರಡು ತಿಂಗಳ ಹಿಂದೆ ನೀಡಿರುವ ಹೇಳಿಕೆ ಸಮಾಜ ಬಾಹಿರ ಕೃತ್ಯಗಳಲ್ಲಿರುವ ಸಂಘ ಪರಿವಾರದ ಕಾರ್ಯಕರ್ತರನ್ನು ಹುರಿದುಂಬಿಸಿದೆ. ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಮುಖ್ಯಮಂತ್ರಿ, ಉಸ್ತುವಾರಿ ಸಚಿವರು, ಬಿಜೆಪಿ ಪಕ್ಷದ ಸಂಸದರು, ಶಾಸಕರು, ನಾಯಕರು ಪೊಲೀಸ್ ಇಲಾಖೆಯ ಸ್ವತಂತ್ರ ಕಾರ್ಯನಿರ್ವಹಣೆಯ ಮೇಲೆ ಪ್ರಭಾವ ಬೀರಿದ್ದಾರೆ. ಇದರ ಪರಿಣಾಮವಾಗಿ ಜಿಲ್ಲೆಯ ಕೆಲವು ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆ ಆಚರಣೆಯು ಸಂಘ ಪರಿವಾರದ ಡ್ರೆಸ್ ಕೋಡಿನೊಂದಿಗೆ ನಡೆದಿದೆ. ಇದನ್ನು ಬಲವಾಗಿ ಉನ್ನತ ಪೊಲೀಸರು ಬೆಂಬಲಿಸಿ ಪ್ರತಿಪಾದಿಸಿರುವುದನ್ನು ಈ ಹಿನ್ನೆಲೆಯಲ್ಲಿ ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಅದೇ ರೀತಿ ಇತ್ತೀಚೆಗೆ ಕರಾವಳಿ ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಸಂಘ ಪರಿವಾರ ಪ್ರತಿಭಟನೆಯ ಭಾಗವಾಗಿ ಭಜನೆ ಹಾಡುವ ಕ್ರಮವನ್ನು ಪೊಲೀಸರು ತಡೆಯದಿರುವುದು. ಇದೇ ರೀತಿಯಲ್ಲಿ ಉಪ್ಪಿನಂಗಡಿ ಠಾಣೆ ಆವರಣದಲ್ಲಿ ಪ್ರತಿಭಟನಾಕಾರರು ಧಾರ್ಮಿಕ ನಮಾಜನ್ನು ಕೂಡಾ ಮಾಡಲು ಅವಕಾಶ ನೀಡಿರುವುದು ಪೊಲೀಸ್ ಇಲಾಖೆಯ ದೌರ್ಬಲ್ಯವಾಗಿದೆ. ಅಷ್ಟು ಮಾತ್ರವೇ ಅಲ್ಲದೆ ಕೆಲವು ಪೊಲೀಸ್ ಠಾಣೆಗಳಲ್ಲಿ ಗರ್ಭಿಣೆ ಮಹಿಳೆಯರಿಗೆ ಸಂಪ್ರದಾಯದ ಹಿನ್ನೆಲೆಯ ಸೀಮಂತ ಥರದ ಮೊದಲಾದ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಪೊಲೀಸ್ ಇಲಾಖೆ ಕರ್ತವ್ಯದ ಪರಿಧಿಯನ್ನು ದಾಟಿರುವ ಪ್ರಕರಣಗಳು ನಡೆದಿವೆ ಎಂದು ಅವರು ಎಚ್ಚರಿಸಿದ್ದಾರೆ.

ಸಂಘ ಪರಿವಾರದ ಕ್ರಿಯೆ, ಪಿಎಫ್‌ಐನಂತಹ ಸಂಘಟನೆಗಳ ಪ್ರತಿತಂತ್ರ ಮತ್ತು ಪೊಲೀಸರ ಓಲೈಕೆಯ ಅಧಿಕಾರ ತಂತ್ರಗಳು ಜಿಲ್ಲೆಯನ್ನು ಕೋಮು ಉದ್ವಿಘ್ನತೆಯ ಅಗ್ನಿ ಕುಂಡದ ಬಳಿ ತಂದಿರಿಸಿದೆ. ಜಿಲ್ಲೆಯ ಶಾಂತಿ, ಸಾಮರಸ್ಯ, ಸಹಬಾಳ್ವೆ ಮರೀಚಿಕೆಯಾಗಿದೆ. ಕೊರೊನಾ ಸಾಂಕ್ರಾಮಿಕದಿಂದ, ಕೇಂದ್ರ, ರಾಜ್ಯ ಸರಕಾರದ ತಪ್ಪು ಆರ್ಥಿಕ ನೀತಿ, ಕೈಗಾರಿಕಾ ನೀತಿಯಿಂದ; ವ್ಯಾಪಕ ಬಡತನ, ಹಸಿವು, ಬೆಲೆ ಏರಿಕೆ, ನಿರುದ್ಯೋಗದಿಂದ ಜಿಲ್ಲೆಯ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಹಿಳೆಯರ ಮೇಲೆ, ಅಪ್ರಾಪ್ತ ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರದ ಘಟನೆಗಳು ಹೆಚ್ಚಾಗುತ್ತಿದೆ. ಇಂತಹ ಜ್ವಲಂತ ಸಮಸ್ಯೆಗಳು ಜನರನ್ನು ಕಾಡುತ್ತಿರುವಾಗ ಸಂಘ ಪರಿವಾರದ ಸಂಘಟನೆಗಳು ಮತ್ತು ಪಿ.ಎಫ್.ಐ. ಜನರನ್ನು ದಾರಿ ತಪ್ಪಿಸಿ ರಾಜಕೀಯ ಲಾಭ ಪಡೆಯಲು ಕೋಮು ದ್ವೇಷದ ವಿಷ ಪ್ರಸರಿಸುತ್ತಿರುವುದು ತೀವ್ರ ಖಂಡನೀಯ ಎಂದಿದ್ದಾರೆ.

ಜಿಲ್ಲೆಯ ಜಾತ್ಯಾತೀತ ಪರಂಪರೆ, ಶಾಂತಿ ಮತ್ತು ಅಭಿವೃದ್ಧಿಗಾಗಿ ಪ್ರಗತಿಪರ ಶಕ್ತಿಗಳೊಂದಿಗೆ ಸೇರಿ ಪರಸ್ಪರ ಶಾಂತಿ ಸೌಹಾರ್ದತೆಗಾಗಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿರಿ: ಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...