Homeಮುಖಪುಟಪಿಎಫ್‌ಐ, ಜನಸಂಖ್ಯಾ ಹೆಚ್ಚಳ ಕುರಿತು ಸುಳ್ಳು ಸುದ್ದಿ ಪ್ರಸಾರ; ಟೈಮ್ಸ್‌ ನೌ, ಝೀ ನ್ಯೂಸ್‌ ವಿರುದ್ಧ...

ಪಿಎಫ್‌ಐ, ಜನಸಂಖ್ಯಾ ಹೆಚ್ಚಳ ಕುರಿತು ಸುಳ್ಳು ಸುದ್ದಿ ಪ್ರಸಾರ; ಟೈಮ್ಸ್‌ ನೌ, ಝೀ ನ್ಯೂಸ್‌ ವಿರುದ್ಧ ಎನ್‌ಬಿಡಿಎಸ್‌ಎ ಆದೇಶ

ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ‘ನ್ಯೂಸ್ 18 ಇಂಡಿಯಾ’ ಹಿಂದಿ ಸುದ್ದಿ ವಾಹಿನಿಗೆ ದಂಡ ವಿಧಿಸಲಾಗಿದೆ

- Advertisement -
- Advertisement -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪ್ರತಿಭಟನೆ ಮತ್ತು ದೇಶದ ಜನಸಂಖ್ಯೆಯಲ್ಲಿನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೋಮು ಬಣ್ಣ ಕಟ್ಟಿ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಕಾರಣ ‘ಟೈಮ್ಸ್ ನೌ’ ಮತ್ತು ‘ಝೀ ನ್ಯೂಸ್’ ವಿರುದ್ಧ ‘ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ’ (ಎನ್‌ಬಿಡಿಎಸ್‌ಎ) ಸೋಮವಾರ ಆದೇಶ ಹೊರಡಿಸಿದೆ.

ಮುಂದಿನ ದಿನಗಳಲ್ಲಿ ಇಂತಹ ವಿಷಯಗಳ ಕುರಿತು ವರದಿ ಮಾಡುವಾಗ ಹೆಚ್ಚು ಜಾಗರೂಕರಾಗಿರಬೇಕು ಎಂದು ಟೈಮ್ಸ್‌ ನೌ ಚಾನೆಲ್‌ಗೆ ಪ್ರಾಧಿಕಾರ ಎಚ್ಚರಿಕೆ ನೀಡಿದೆ. ಪ್ರಸಾರದ ವೀಡಿಯೊ ಮತ್ತು ಅದರ ಎಲ್ಲಾ ಹೈಪರ್‌ಲಿಂಕ್‌ಗಳನ್ನು ತೆಗೆದುಹಾಕುವಂತೆ ನಿರ್ದೇಶನವನ್ನೂ ನೀಡಿದೆ.

ಸೆಪ್ಟೆಂಬರ್ 24 ರಂದು ಚಾನೆಲ್ ಪ್ರಸಾರ ಮಾಡಿದ ಸುದ್ದಿ ವರದಿಗೆ ಸಂಬಂಧಿಸಿದಂತೆ ಎನ್‌ಬಿಡಿಎಸ್‌ಎ ಈ ಆದೇಶವನ್ನು ನೀಡಿದೆ.

ಇಸ್ಲಾಮಿಕ್ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ಪುಣೆಯಲ್ಲಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳನ್ನು ಕೂಗಲಾಗಿದೆ ಎಂದು ಸುದ್ದಿ ಪ್ರಸಾರ ಮಾಡಲಾಗಿತ್ತು. ಆದರೆ ನಂತರದಲ್ಲಿ ಸತ್ಯಾಂಶ ಹೊರಬಿದ್ದಿತ್ತು.

ದೂರಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಟೈಮ್ಸ್‌ ನೌ ಚಾನೆಲ್‌, “ಎಎನ್‌ಐ, ಪಿಟಿಐ ಸುದ್ದಿ ಸಂಸ್ಥೆಗಳು ಸೇರಿದಂತೆ ವಿವಿಧ ಮೂಲಗಳಿಂದ, ಸ್ವತಂತ್ರ ವರದಿಗಾರರಿಂದ ಪಡೆದ ಮಾಹಿತಿಯನ್ನು ಆಧರಿಸಿ ನಾವು ಸುದ್ದಿ ಪ್ರಕಟಿಸಿದ್ದೇವೆ. ನಮ್ಮ ಸಂಸ್ಥೆಯ ವರದಿಗಾರ ಸ್ಥಳದಲ್ಲಿ ಇರಲಿಲ್ಲ” ಎಂದು ಸಮರ್ಥನೆ  ನೀಡಿದೆ.

ಆದರೆ ಸೆ.24ರ ಬೆಳಗ್ಗೆ 10.06ರ ಸಮಯದಲ್ಲಿ ಸುದ್ದಿ ಪ್ರಸಾರವಾಗಿದ್ದು, “ಈ ಕುರಿತು ವರದಿ ಮಾಡಿರುವುದು ನಾವೇ ಮೊದಲು” ಎಂದು ಟೈಮ್ಸ್‌ ನೌ ತನ್ನ ತನ್ನ ವರದಿಯಲ್ಲಿ ಹಾಗೂ ವಿಚಾರಣೆ ವೇಳೆ ಒಪ್ಪಿಕೊಂಡಿದೆ ಎಂದು ಸುದ್ದಿ ನಿಯಂತ್ರಣ ಸಂಸ್ಥೆ ಉಲ್ಲೇಖಿಸಿದೆ.

“ಹಲವಾರು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ಗಳು ಮಾಡಿರುವ ವರದಿಗಳನ್ನು ಪರಿಶೀಲಿಸಿದ್ದೇವೆ. ಅಂದು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಪಿಎಫ್‌ಐ ಕೂಗಿಲ್ಲ. ‘ಪಿಎಫ್‌ಐ ಜಿಂದಾಬಾದ್’ ಎಂಬ ಘೋಷಣೆಗಳನ್ನು ಪ್ರತಿಭಟನೆಯ ಸಮಯದಲ್ಲಿ ಕೂಗಲಾಗಿದೆ” ಎಂದು ತನ್ನ ಆದೇಶದಲ್ಲಿ ಎನ್‌ಬಿಡಿಎಸ್‌ಎ ಸ್ಪಷ್ಟಪಡಿಸಿದೆ.

“News Break Here First ‘Pakistan Zindabad’ slogans at PFI stir” (ಪಿಎಫ್‌ಐನಿಂದ ಪಾಕಿಸ್ತಾನ್‌ ಜಿಂದಾಬಾದ್‌, ನಮ್ಮಲ್ಲೇ ಮೊದಲು), “Pak slogans by PFI workers” (ಪಿಎಫ್‌ಐ ಕಾರ್ಯಕರ್ತರಿಂದ ಪಾಕಿಸ್ತಾನ್‌ ಜಿಂದಾಬಾದ್‌) ಮತ್ತು “Pak Zindabad slogans raised” (ಪಾಕ್‌ ಜಿಂದಾಬಾದ್‌ ಘೋಷಣೆ ಕೂಗಲಾಗಿದೆ) ಎಂಬ ಟಿಕ್ಕರ್‌ಗಳನ್ನು ಬಳಸಿದ್ದು ಮಾತ್ರವಲ್ಲದೆ, ಕಾರ್ಯಕ್ರಮ ನಿರೂಪಕರು ಇದಕ್ಕೆ ಒತ್ತು ನೀಡಿದ್ದರು ಎಂದು ತನ್ನ ಆದೇಶದಲ್ಲಿ ಪ್ರಾಧಿಕಾರ ಹೇಳಿದೆ.

ವೀಡಿಯೊದಲ್ಲಿ ತೋರಿಸಿರುವ ಘೋಷಣೆಗಳ ಬಗ್ಗೆ ಖಚಿತವಾಗಿ ತಿಳಿಯದಿದ್ದರೆ ಟೈಮ್ಸ್ ನೌ ಈ ವಿಷಯವನ್ನು ವರದಿ ಮಾಡುವಲ್ಲಿ ಜಾಗರೂಕರಾಗಿರಬೇಕು ಮತ್ತು ವೀಡಿಯೊದ ಸತ್ಯಾಸತ್ಯತೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಬೇಕಿತ್ತು ಎಂದು ಸುದ್ದಿ ನಿಯಂತ್ರಣ ಸಂಸ್ಥೆ ಹೇಳಿದೆ.

ಜನಸಂಖ್ಯಾ ಸ್ಫೋಟಕ್ಕೆ ಕೋಮು ಬಣ್ಣ ನೀಡಿದ ಝೀ ನ್ಯೂಸ್: ಎನ್‌ಬಿಡಿಎಸ್‌ಎ

ದೇಶದ ಜನಸಂಖ್ಯೆ ಏರಿಕೆ ಸಂಬಂಧ ವರದಿ ಮಾಡುವಾಗ ಮುಸ್ಲಿಂ ಸಮುದಾಯವನ್ನು ‘ಝೀ ನ್ಯೂಸ್’ ಟಾರ್ಗೆಟ್ ಮಾಡಿದೆ ಮತ್ತು ಈ ವಿಷಯಕ್ಕೆ ಕೋಮು ಬಣ್ಣವನ್ನು ನೀಡಲು ಅಂಕಿಅಂಶಗಳನ್ನು ಆಯ್ದು ಪ್ರಸಾರ ಮಾಡಿದೆ ಎಂದು ಎನ್‌ಬಿಡಿಎಸ್‌ಎ ತಿಳಿಸಿದೆ.

ಈ ಸುದ್ದಿಯು ವಸ್ತುನಿಷ್ಠತೆ ಮತ್ತು ತಟಸ್ಥತೆಯನ್ನು ಹೊಂದಿಲ್ಲ. ಏಕೆಂದರೆ ಜನಸಂಖ್ಯೆಯ ಬೆಳವಣಿಗೆಗೆ ಕೇವಲ ಒಂದು ಧರ್ಮವನ್ನು ಆರೋಪಿಸಲಾಗಿದೆ. “ಮುಸ್ಲಿಮರು ಒಂದೆಡೆ ಸೇರಿದ, ವಿಷಯಕ್ಕೆ ಸಂಬಂಧವಿಲ್ಲದ ದೃಶ್ಯಗಳನ್ನು ಪ್ರಸಾರ ಮಾಡುವ ಮೂಲಕ ಮತ್ತು ಹಿಂದೂ-ಮುಸ್ಲಿಂ ಜನಸಂಖ್ಯೆಯ ಅಂಕಿಅಂಶಗಳನ್ನು ಆಯ್ದು ಹಂಚಿಕೊಳ್ಳುವ ಮೂಲಕ, ಜನಸಂಖ್ಯಾ ಸ್ಫೋಟದ ವಿಷಯಕ್ಕೆ ಕೋಮು ಬಣ್ಣ ನೀಡಲಾಗಿದೆ” ಎಂದು ತನ್ನ ಆದೇಶದಲ್ಲಿ ಎನ್‌ಬಿಡಿಎಸ್‌ಎ ಬೇಸರ ವ್ಯಕ್ತಪಡಿಸಿದೆ.

ಇದನ್ನೂ ಓದಿರಿ: ಸರ್ಕಾರದ ವಿರುದ್ಧ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಇಂದಿನಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳು ಬಹುತೇಕ ಬಂದ್

ಭವಿಷ್ಯದಲ್ಲಿ ಇಂತಹ ವರದಿಗಳನ್ನು ಪ್ರಸಾರ ಮಾಡದಂತೆ ಝೀ ನ್ಯೂಸ್‌ಗೆ ಎಚ್ಚರಿಕೆಯನ್ನೂ ನೀಡಲಾಗಿದೆ. ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿರುವ ಸಂದೇಶವನ್ನು ಪ್ರಸಾರ ಮಾಡುವಂತೆ ಝೀ ನ್ಯೂಸ್‌ ಚಾನೆಲ್‌ಗೆ ನಿರ್ದೇಶನವನ್ನೂ ನೀಡಲಾಗಿದೆ. ಕಾರ್ಯಕ್ರಮದ ವೀಡಿಯೊ ಮತ್ತು ಅದರ ಎಲ್ಲಾ ಹೈಪರ್‌ಲಿಂಕ್‌ಗಳನ್ನು ತೆಗೆದುಹಾಕುವಂತೆ ಸೂಚಿಸಲಾಗಿದೆ.

ನ್ಯೂಸ್‌ 18ಗೆ ದಂಡ

ಸುದ್ದಿ ನಿರೂಪಕ ಅಮನ್ ಚೋಪ್ರಾ ಅವರು ನಡೆಸಿಕೊಟ್ಟ ನಾಲ್ಕು ಕಾರ್ಯಕ್ರಮಗಳಲ್ಲಿ ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ‘ನ್ಯೂಸ್ 18 ಇಂಡಿಯಾ’ ಹಿಂದಿ ಸುದ್ದಿ ವಾಹಿನಿಗೆ ಸುದ್ದಿ ನಿಯಂತ್ರಣ ಸಂಸ್ಥೆ ಸೋಮವಾರ ದಂಡ ವಿಧಿಸಿದೆ.

ಮುಸ್ಲಿಮರನ್ನು ಸಾರ್ವಜನಿಕವಾಗಿ ಥಳಿಸುವುದನ್ನು ವೈಭವೀಕರಿಸುವುದರಿಂದ ಹಿಡಿದು, ಸಮುದಾಯದಲ್ಲಿ ಜನಸಂಖ್ಯೆ ಹೆಚ್ಚಿದೆ ಎಂದು ಆರೋಪಿಸುವವರೆಗೆ ಕಾರ್ಯಕ್ರಮಗಳನ್ನು ನಡೆಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....