ಫಿಜರ್ ಮತ್ತು ಮಾಡೆರ್ನಾ ಲಸಿಕಾ ಕಂಪೆನಿಗಳು ರಾಜ್ಯ ಸರ್ಕಾರಕ್ಕೆ ಲಸಿಕೆಗಳನ್ನು ಮಾರಾಟ ಮಾಡಲು ನಿರಾಕರಿಸಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಲಸಿಕೆ ತಯಾರಕರು ಕೇಂದ್ರ ಸರ್ಕಾರದೊಂದಿಗೆ ನೇರವಾಗಿ ವ್ಯವಹರಿಸುವುದಾಗಿ ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.
“ನಾವು ಲಸಿಕೆಗಳಿಗಾಗಿ ಫಿಜರ್ ಮತ್ತು ಮಾಡೆರ್ನಾ ಕಂಪನಿಗಳೊಂದಿಗೆ ಮಾತನಾಡಿದ್ದೇವೆ, ಎರಡೂ ತಯಾರಕರು ಲಸಿಕೆಗಳನ್ನು ನೇರವಾಗಿ ನಮಗೆ ಮಾರಾಟ ಮಾಡಲು ನಿರಾಕರಿಸಿದ್ದಾರೆ. ಅವರು ಕೇಂದ್ರ ಸರ್ಕಾರದೊಂದಿಗೆ ವ್ಯವಹರಿಸುವುದಾಗಿ ಹೇಳಿದ್ದಾರೆ. ಲಸಿಕೆಗಳನ್ನು ಆಮದು ಮಾಡಿಕೊಳ್ಳಲು ಮತ್ತು ರಾಜ್ಯಗಳಿಗೆ ವಿತರಿಸಲು ನಾವು ಕೇಂದ್ರಕ್ಕೆ ಮನವಿ ಮಾಡುತ್ತೇವೆ ಎಂದು ಕೇಂಜ್ರಿವಾಲ್ ಇಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದನ್ನು ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು
ಅಮೆರಿಕ ಔಷಧೀಯ ಸಂಸ್ಥೆ ಮಾಡೆರ್ನಾ ನೇರವಾಗಿ ರಾಜ್ಯಕ್ಕೆ ಲಸಿಕೆಗಳನ್ನು ಮಾರಾಟ ಮಾಡಲು ನಿರಾಕರಿಸಿದೆ ಎಂದು ಪಂಜಾಬ್ ನಿನ್ನೆ ಹೇಳಿತ್ತು. ಅಮರಿಂದರ್ ಸಿಂಗ್ ಸರ್ಕಾರವು ಅಂತಹ ಎಲ್ಲ ತಯಾರಕರನ್ನು ನೇರ ಖರೀದಿಗಾಗಿ ಸಂಪರ್ಕಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯು ಲಸಿಕೆಗಳ ಕೊರತೆಯನ್ನು ಎದುರಿಸುತ್ತಿದ್ದು, ಶನಿವಾರ ಅನಿವಾರ್ಯವಾಗಿ 18-44 ವಯಸ್ಸಿನವರಿಗೆ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆವು ಎಂದು ಅರವಿಂದ್ ಕೇಜ್ರಿವಾಲ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ: ‘ಟೂಲ್‌ಕಿಟ್-ಲೆಟರ್‌ಹೆಡ್ ಫೋರ್ಜರಿ ಪ್ರಕರಣ: ಬಿಜೆಪಿಯ ರಮಣಸಿಂಗ್, ಸಂಬಿತ್ ಪಾತ್ರಾ ವಿರುದ್ಧ ಎಫ್‌ಐಆರ್ ದಾಖಲು


