Homeಅಂತರಾಷ್ಟ್ರೀಯಫಿಲಿಪೈನ್ಸ್ ಮಿಲಿಟರಿ ವಿಮಾನ ದುರಂತ: 17 ಜನರ ಸಾವು

ಫಿಲಿಪೈನ್ಸ್ ಮಿಲಿಟರಿ ವಿಮಾನ ದುರಂತ: 17 ಜನರ ಸಾವು

- Advertisement -
- Advertisement -

ಫಿಲಿಪೈನ್ಸ್‌ ವಾಯುಸೇನೆಗೆ ಸೇರಿದ ಸಿ-30 ವಿಮಾನವು ದಕ್ಷಿಣ ಫಿಲಿಪೈನ್ಸ್‌ ದ್ವೀಪದಲ್ಲಿ ಪತನಗೊಂಡಿದೆ. 92 ಪ್ರಯಣಿಕರು ಪ್ರಯಾಣಿಸುತ್ತಿದ್ದ ವಾಯುಸೇನೆಯ ವಿಮಾನಕ್ಕೆ ಜೋಲೊ ದ್ವೀಪದಲ್ಲಿ ಲ್ಯಾಂಡಿಂಗ್‌ ವೇಳೆ ಅಪಘಾತಕ್ಕೆ ಈಡಾಗಿದೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಅಪಘಾತದಲ್ಲಿ 17 ಜನರು ಮೃತಪಟ್ಟಿದ್ದು 40 ಜನ ಪ್ರಯಾಣಿಕರನ್ನು ಅಪಾಯದಿಂದ ರಕ್ಷಿಸಲಾಗಿದೆ.

ಒಬ್ಬ ಪೈಲೆಟ್, 5 ಜನ ಸಿಬ್ಬಂದಿಗಳು ಸೇರಿದಂತೆ ಒಟ್ಟೂ 92 ಜನರು ವಿಮಾನದಲ್ಲಿದ್ದರು ಎಂದು ರಕ್ಷಣಾ ಮಂತ್ರಿ ಡೆಲ್ಫಿನ್ ಲೊರೆಂಜಾನಾ ಅಧಿಕೃತ ಹೇಳಿಕೆ ನೀಡಿದ್ದು ರಕ್ಷಿಸಲಾದ 40 ಜನ ಪ್ರಯಾಣಿಕರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಬು ಸಯ್ಯಾಫ್ ಬಂಡುಕೋರರ ವಿರುದ್ಧ ಫಿಲಿಫೈನ್ಸ್‌ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದು ವಿಮಾನವು ದಕ್ಷಿಣ ಕಗಯಾನ್ ಡಿ ಒರೋ ನಗರಕ್ಕೆ ರಕ್ಷಣಾ ಪಡೆಯ ಸಿಬ್ಬಂದಿಗಳನ್ನು ವಿಮಾನದಲ್ಲಿ ಸಾಗಿಸಲಾಗಿತ್ತು ಎಂದು ಫಿಲಿಪೈನ್ಸ್‌ ಮಿಲಿಟರಿ ಮೂಲಗಳು ತಿಳಿಸಿವೆ.

ವಿಮಾನವು ರನ್‌ವೇಯಿಂದ ತಪ್ಪಿಸಿಕೊಂಡು ಹೊರ ಹೋಗಿದ್ದೇ ಅಪಾಯಕ್ಕೆ ಕಾರಣವೆಂದು ರಕ್ಷಣಾಪಡೆಗಳ ಮುಖ್ಯಸ್ಥ ಕಿರಿಲಿಟೊ ಸೋಬೆಜನ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ವಿಮಾನದಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸಲು ರಕ್ಷಣಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದು ಹೆಚ್ಚಿನ ಸಾವು ಸಂಭವಿಸಿರುವ ಸಾಧ್ಯತೆ ಇದೆ ಎಂದು ಮಿಲಿಟರಿ ಮೂಲಗಳು ತಿಳಿಸಿವೆ. ಬೆಂಕಿ ಹೊತ್ತಿಕೊಂಡಿರುವ ಚಿತ್ರಗಳು ಅಂತರಾಷ್ಟ್ರೀಯ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಕೆಲಹೊತ್ತು ಆಂತಕವನ್ನು ಸೃಷ್ಟಿಸಿತ್ತು.


ಇದನ್ನೂ ಓದಿ: ಓವೈಸಿ ಸವಾಲು ಸ್ವೀಕರಿಸಿದ್ದೇವೆ, ಯುಪಿಯಲ್ಲಿ 300ಕ್ಕೂ ಅಧಿಕ ಸ್ಥಾನ ಪಡೆಯುತ್ತೇವೆ- ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...