ಫಿಲಿಪೈನ್ಸ್‌ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆ, 150ಕ್ಕೂ ಹೆಚ್ಚು ಜನರಿಗೆ ಗಾಯ

ಸೆಂಟ್ರಲ್ ಫಿಲಿಪೈನ್ಸ್‌ನಲ್ಲಿ ಸಂಭವಿಸಿದ 6.9 ತೀವ್ರತೆಯ ಭೂಕಂಪದಲ್ಲಿ ಸಾವಿಗೀಡಾದವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಕುಸಿದ ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿರುವ ಜನರನ್ನು ರಕ್ಷಿಸಲು ರಕ್ಷಣಾ ತಂಡಗಳು ಕಾರ್ಯಪ್ರವೃತ್ತವಾಗಿವೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ದುರಂತದಲ್ಲಿ 100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಭೂಕಂಪದಿಂದ ಹಾನಿಗೊಳಗಾಗಿರುವ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಮರುಸ್ಥಾಪಿಸಲು ಸಂಬಂಧಪಟ್ಟ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದೆ. ಫಿಲಿಪೈನ್ಸ್‌ನ … Continue reading ಫಿಲಿಪೈನ್ಸ್‌ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆ, 150ಕ್ಕೂ ಹೆಚ್ಚು ಜನರಿಗೆ ಗಾಯ