Homeಮುಖಪುಟಪೋನ್ ಕದ್ದಾಲಿಕೆ ಪ್ರಕರಣ: ಇಂದು ದೇವೇಂದ್ರ ಫಡ್ನಾವಿಸ್‌ ವಿಚಾರಣೆ

ಪೋನ್ ಕದ್ದಾಲಿಕೆ ಪ್ರಕರಣ: ಇಂದು ದೇವೇಂದ್ರ ಫಡ್ನಾವಿಸ್‌ ವಿಚಾರಣೆ

- Advertisement -
- Advertisement -

ಪೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ತಮ್ಮ ಮುಂದೆ ಹಾಜರಾಗುವಂತೆ ಮುಂಬೈ ಸೈಬರ್ ಪೋಲಿಸರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನಾವಿಸ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫಡ್ನಾವಿಸ್ ಅವರಿಗೆ ಮುಚ್ಚಿದ ಲಕೋಟೆಯಲ್ಲಿ ಹಲವಾರು ಪ್ರಶ್ನೆಗಳನ್ನು ಕಳುಹಿಸಲಾಗಿದೆ. ನೋಟಿಸ್‌ಗೆ ಯಾವುದೇ ಪ್ರತಿಕ್ರಿಯೆಯನ್ನು ಫಡ್ನಾವೀಸ್ ನೀಡಿಲ್ಲ. ಅವರಿಗೆ ಎರಡು ಬಾರಿ ನೋಟಿಸ್ ನೀಡಲಾಗಿದೆ. ಆದರೆ ಆ ಪ್ರಶ್ನೆಗಳಿಗೆ ಉತ್ತರ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪೋನ್ ಕದ್ದಾಲಿಕೆ ಮತ್ತು ಗೌಪ್ಯ ದಾಖಲೆಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಮುಂಬೈ ಬಿಕೆಸಿ ಸೈಬರ್ ಪೊಲೀಸ್‌‌ ಠಾಣೆಯಲ್ಲಿ ಕಳೆದ ವರ್ಷ ಅಧಿಕೃತ ರಹಸ್ಯ ಕಾಯ್ದೆಯಡಿ ಪ್ರಕರಣವನ್ನು ರಾಜ್ಯ ಗುಪ್ತಚರ ಇಲಾಖೆ ದಾಖಲು ಮಾಡಿದೆ. ಅಂದಿನ ಐಪಿಎಸ್ ಅಧಿಕಾರಿ ರಶ್ಮೀ ಶುಕ್ಲಾ ಅವರು ಗೌಪ್ಯ ವರದಿಯನ್ನು ಸೋರಿಕೆ ಮಾಡಿದ್ದಾರೆ ಎಂದು ತನಿಖಾ ವರದಿ ಹೇಳಿತ್ತು.

ರಶ್ಮೀ ಶುಕ್ಲಾರವರು ಎಸ್ಐಡಿ ಮುಖ್ಯಸ್ಥರಾಗಿದ್ದಾಗ ರಾಜಕೀಯ ಮುಖಂಡರು ಮತ್ತು ಹಿರಿಯ ಅಧಿಕಾರಿಗಳ ಪೋನ್ ಕರೆಗಳನ್ನು ಕದ್ದಾಲಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ಏಪ್ರಿಲ್ ನಲ್ಲಿ ಮುಂಬೈ ಪೋಲಿಸರು ಶುಕ್ಲಾ ಅವರನ್ನು ಬಿಕೆಸಿ ಸೈಬರ್ ಪೋಲಿಸ್ ಮುಂದೆ ವಿಚಾರಣೆಗೆ ಕರೆದಿದ್ದರು. ಆದರೆ ಅವರು ಕೊರೊನಾ ನೆಪ ಹೇಳಿ ಹಾಜರಾಗಲಿಲ್ಲ. ಮುಂದೆ ಪೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ ತಿಂಗಳಿನಲ್ಲಿ ಮುಂಬೈ ಸೈಬರ್ ಪೊಲೀಸರ ತಂಡ ಹೈದರಬಾದ್ ನಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿತ್ತು.

ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನಾವೀಸ್, “ಬಿಕೆಸಿ ಸೈಬರ್ ಪೊಲೀಸರು ನನಗೆ ವಿಚಾರಣೆಗೆ ನೋಟಿಸ್‌ ನೀಡಿದ್ದಾರೆ. ನಾನು ಭಾನುವಾರ ಬೆಳಿಗ್ಗೆ 11 ಗಂಟೆಗೆ ಪೊಲೀಸ್ ಠಾಣೆಗೆ ಹಾಜರಾಗುತ್ತೇನೆ” ಎಂದಿದ್ದಾರೆ.

“ನಾನು ಎಂವಿಎ ಸರ್ಕಾರವನ್ನು ಬಹಿರಂಗಪಡಿಸಿದ್ದರಿಂದ ನನಗೆ ನೋಟಿಸ್‌‌ ನೀಡಲಾಗಿದೆ. ಈ ಪೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾದಳಕ್ಕೆ (ಸಿಬಿಐ) ಹಸ್ತಾಂತರಿಸಬೇಕು ಎಂದು ಒತ್ತಾಯಿಸುತ್ತೇನೆ. ಇಂತಹ ಪ್ರಕರಣಗಳಲ್ಲಿ ರಾಜ್ಯ ಸರ್ಕಾರವು ಸರಿಯಾದ ತನಿಖೆ ನೆಡೆಸಲು ಸಾಧ್ಯವಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ರಾಜ್ಯ ಪೊಲೀಸ್‌‌ ಇಲಾಖೆಯಲ್ಲಿನ ವರ್ಗಾವಣೆ ಹಗರಣವನ್ನು ನಾನು ಬಹಿರಂಗಪಡಿಸಿದ್ದರಿಂದ ಸರ್ಕಾರ ನನ್ನ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ನನ್ನ ಬಳಿ ಹೆಚ್ಚಿನ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ಸಿಬಿಐಗೆ ಒಪ್ಪಿಸುತ್ತೇನೆ. ನಾಳೆ ಮುಂಬೈ ಪೊಲೀಸರೊಂದಿಗೆ ವಿಚಾರಣೆಗೆ ಸಹಕರಿಸುತ್ತೇನೆ” ಎಂದಿದ್ದಾರೆ.


ಇದನ್ನೂ ಓದಿರಿ: ಸೋನಿಯಾ, ರಾಹುಲ್‌, ಪ್ರಿಯಾಂಕಾ ರಾಜೀನಾಮೆ ಸಾಧ್ಯತೆ: ಎನ್‌ಡಿಟಿವಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....