Homeಮುಖಪುಟಫೋನ್‌ ಕದ್ದಾಳಿಕೆ: ತಮ್ಮದೆ ಸರ್ಕಾರ ಮೇಲೆ ಸಂಶಯ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ

ಫೋನ್‌ ಕದ್ದಾಳಿಕೆ: ತಮ್ಮದೆ ಸರ್ಕಾರ ಮೇಲೆ ಸಂಶಯ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ

ರಾಜಸ್ಥಾನದ ಗೆಹ್ಲೋಟ್‌ ಸರ್ಕಾರಕ್ಕೆ ಇದು ಹೊಸ ಸಮಸ್ಯೆಯನ್ನು ತಂದೊಡ್ಡಬಹುದು ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗಿದೆ.

- Advertisement -
- Advertisement -

ನಮ್ಮ ಕೆಲವು ಶಾಸಕರ ದೂರವಾಣಿ ಕರೆಗಳನ್ನು ಕದ್ದಾಲಿಸಲಾಗುತ್ತಿದೆ ಎಂದು ರಾಜಸ್ಥಾನದ ಕಾಂಗ್ರೆಸ್‌ ಶಾಸಕ ವೇದ ಪ್ರಕಾಶ್‌ ಸೋಲಂಕಿ ಭಾನುವಾರ ಆರೋಪಿಸಿದ್ದಾರೆ. ಸ್ವತಃ ತಮ್ಮ ಸರ್ಕಾರದ ವಿರುದ್ದವೆ ಸಂಶಯ ವ್ಯಕ್ತಪಡಿಸಿರುವ ಅವರು, ದೂರವಾಣಿ ಕರೆಗಳ ಕದ್ದಾಲಿಕೆಯಲ್ಲಿ ರಾಜ್ಯ ಸರ್ಕಾರ ಭಾಗಿಯಾಗಿದೆಯೇ ಎನ್ನುವುದು ತಿಳಿದಿಲ್ಲ ಎಂದಿದ್ದಾರೆ.

“ನನ್ನ ದೂರವಾಣಿ ಕರೆಗಳನ್ನು ಕದ್ದಾಲಿಸಲಾಗುತ್ತಿದೆ ಎನ್ನುವುದು ಗೊತ್ತಿಲ್ಲ. ಆದರೆ, ಕೆಲವು ಶಾಸಕರು ಈ ಬಗ್ಗೆ ನನ್ನ ಬಳಿ ಹೇಳಿಕೊಂಡಿದ್ದಾರೆ. ದೂರವಾಣಿ ಕರೆಗಳ ಕದ್ದಾಲಿಕೆಯಲ್ಲಿ ರಾಜ್ಯ ಸರ್ಕಾರ ಭಾಗಿಯಾಗಿದೆಯೇ ಎನ್ನುವುದು ಸಹ ನನಗೆ ಗೊತ್ತಿಲ್ಲ” ರಾಜಸ್ಥಾನ ಕಾಂಗ್ರೆಸ್‌ನ ಬಂಡಾಯ ನಾಯಕ ಸಚಿನ್‌ ಪೈಲಟ್‌ ಅವರ ಆಪ್ತರೂ ಆಗಿರುವ ವೇದ ಪ್ರಕಾಶ್‌ ಸೋಲಂಕಿ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಹೆಚ್ಚಿನ ಲಸಿಕೆ ನೀಡುವಂತೆ ಆಗ್ರಹಿಸಿ ಪ್ರಧಾನಿ ಭೇಟಿಗೆ ಸಜ್ಜಾದ ತಮಿಳುನಾಡು ಸಿಎಂ ಸ್ಟಾಲಿನ್

ಶಾಸಕರನ್ನು ಸಿಲುಕಿಸಲು ಕದ್ದಾಲಿಕೆ ನಡೆಸಲಾಗುತ್ತಿದೆ ಎಂದು ಹಲವು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಆದರೆ, ಯಾವುದೇ ಶಾಸಕರ ಹೆಸರನ್ನು ಅವರು ಬಹಿರಂಗ ಪಡಿಸಿಲ್ಲ. ಸದ್ಯ, ದೂರವಾಣಿ ಕದ್ದಾಲಿಕೆ ಪ್ರಕರಣ ರಾಜಸ್ಥಾನದ ಅಶೋಕ್‌ ಗೆಹ್ಲೋಟ್‌ ಸರ್ಕಾರಕ್ಕೆ ಹೊಸ ಸಮಸ್ಯೆಯನ್ನು ತಂದೊಡ್ಡಬಹುದು ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸತೀಶ್‌ ಪೂನಿಯಾ, “ತನ್ನ ಶಾಸಕರಿಗೆ ಕಾಂಗ್ರೆಸ್‌ ಬೆದರಿಕೆ ಹಾಕುತ್ತಿದೆ. ಶಾಸಕರ ವಿರುದ್ಧವೇ ಬೇಹುಗಾರಿಕೆ ನಡೆಸಲಾಗುತ್ತಿದೆ. ಈ ಶಾಸಕರು ಯಾರು ಎನ್ನುವುದನ್ನು ಬಹಿರಂಗಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರ ‘ಥರ್ಡ್‌ ಕ್ಲಾಸ್‌’ ರಾಜಕಾರಣ ಮಾಡುತ್ತಿದೆ: ಶಿವಸೇನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...