ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಕಾರಣಕ್ಕೆ ಮಥುರಾ ಮುನ್ಸಿಪಲ್ ಕಾರ್ಪೋರೇಷನ್ ಗುತ್ತಿಗೆ ಪೌರಕಾರ್ಮಿಕರೊಬ್ಬರನ್ನು ಕೆಲಸದಿಂದ ವಜಾ ಮಾಡಿದೆ ಎಂದು ವರದಿಯಾಗಿದೆ.
ಮಥುರಾ ಮುನ್ಸಿಪಲ್ ಕಾರ್ಪೊರೇಶನ್ ಗುತ್ತಿಗೆ ಪೌರಕಾರ್ಮಿಕರೊಬ್ಬರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಫೋಟೋವನ್ನು ಕಸದ ಗಾಡಿಯಲ್ಲಿ ಹಾಕಿಕೊಂಡು ಹೋಗುತ್ತಿರುವುದು ವೈರಲ್ ವಿಡಿಯೊದಲ್ಲಿ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಮಥುರಾ ದರ್ಶನಕ್ಕೆ ಬಂದಿದ್ದ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಕೆಲವರು ಕಸದ ಗಾಡಿಯಲ್ಲಿ ಫೋಟೋಗಳನ್ನು ಗುರುತಿಸಿದ್ದಾರೆ. ಈ ಘಟನೆಯನ್ನು ಯಾರೋ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಈಗ ಅದು ವೇಗವಾಗಿ ವೈರಲ್ ಆಗುತ್ತಿದೆ. ಯುಪಿಯ ಮಥುರಾದ ಕೊತ್ವಾಲಿ ಪ್ರದೇಶದಲ್ಲಿ ಪ್ರಕರಣ ನಡೆದಿದೆ.
Listen what Satyendra Kumar Tiwari, additional municipal commissioner, Nagar Nigam #Mathura-Vrindavan said on the incident. pic.twitter.com/THTXvMxGt7
— Arvind Chauhan अरविंद चौहान (@Arv_Ind_Chauhan) July 17, 2022
ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರ ಫೋಟೋಗಳನ್ನು ಕಸದ ಬಂಡಿಯಲ್ಲಿ ತುಂಬಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆದ ನಂತರ ಮಹಾನಗರ ಪಾಲಿಕೆಯಲ್ಲಿ ಗದ್ದಲ ಉಂಟಾಗಿದೆ. ಈ ಪ್ರಕರಣದಲ್ಲಿ ಗುತ್ತಿಗೆ ಪೌರಕಾರ್ಮಿಕ ತಪ್ಪಿತಸ್ಥ ಎಂದು ಪರಿಗಣಿಸಿ ಆತನನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿರಿ: ಪೌರಕಾರ್ಮಿಕರ ವಲಸೆಯ ಸುತ್ತ…
ಶನಿವಾರ ಪೌರಕಾರ್ಮಿಕ ದುಲಿಚಂದ್ ಕಸ ಸಂಗ್ರಹಿಸುತ್ತಿದ್ದರು. ಕಸದಲ್ಲಿ ಯೋಗಿ ಮತ್ತು ಆದಿತ್ಯನಾಥ್ ಅವರ ಚಿತ್ರಗಳಿದ್ದವು. ಮಾಹಿತಿ ಪ್ರಕಾರ ನಗರಸಭೆಯ ನೌಕರರೊಬ್ಬರು ಕಸ ಎತ್ತಲು ಹೋಗುತ್ತಿದ್ದರು. ಈ ಕಸದಲ್ಲಿ ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಅವರ ಫೋಟೋ ಕೂಡ ಇತ್ತು. ಈ ಫೋಟೋಗಳನ್ನು ಪ್ರತ್ಯೇಕವಾಗಿ ಇಡುವ ಬದಲು ಕಸದ ರಾಶಿಯಲ್ಲೇ ಇಟ್ಟಿದ್ದರು ಎಂದು ದೂರಲಾಗಿದೆ.



Perfect