Homeಚಳವಳಿತಾಲಿಬಾನಿಗಳಿಂದ ಹತರಾದ ದಾನಿಶ್ ಸಿದ್ದೀಕಿಗೆ ಮರಣೋತ್ತರವಾಗಿ ’ವರ್ಷದ ಪತ್ರಕರ್ತ’ ಪ್ರಶಸ್ತಿ

ತಾಲಿಬಾನಿಗಳಿಂದ ಹತರಾದ ದಾನಿಶ್ ಸಿದ್ದೀಕಿಗೆ ಮರಣೋತ್ತರವಾಗಿ ’ವರ್ಷದ ಪತ್ರಕರ್ತ’ ಪ್ರಶಸ್ತಿ

- Advertisement -
- Advertisement -

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳಿಂದ ಕೊಲ್ಲಲ್ಪಟ್ಟ ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಫೋಟೋ ಜರ್ನಲಿಸ್ಟ್ ದ್ಯಾನಿಶ್ ಸಿದ್ದೀಕಿ ಅವರಿಗೆ ಮರಣೋತ್ತರವಾಗಿ ಮುಂಬೈ ಪ್ರೆಸ್ ಕ್ಲಬ್ 2020 ರ ‘ವರ್ಷದ ಪತ್ರಕರ್ತ’ ಎಂದು ಪ್ರಶಸ್ತಿ ನೀಡಿ ಗೌರವಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಬುಧವಾರ ಮುಂಬೈ ಪ್ರೆಸ್ ಕ್ಲಬ್ ಸ್ಥಾಪಿಸಿದ ವಾರ್ಷಿಕ ‘ರೆಡ್‌ಇಂಕ್ ಅವಾರ್ಡ್ಸ್ ಫಾರ್ ಎಕ್ಸಲೆನ್ಸ್ ಇನ್ ಜರ್ನಲಿಸಂ’ ಅನ್ನು ವರ್ಚುವಲ್ ಈವೆಂಟ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

“ತನಿಖಾ ಮತ್ತು ಪ್ರಭಾವಶಾಲಿ ಸುದ್ದಿ ಛಾಯಾಗ್ರಹಣಕ್ಕಾಗಿ” ದಾನಿಶ್ ಸಿದ್ದೀಕಿ ಅವರಿಗೆ ಪ್ರಶಸ್ತಿ ನೀಡಲಾಗಿದೆ. ದಾನಿಶ್ ಸಿದ್ದೀಕಿ ಪತ್ನಿ ಫ್ರೆಡ್ರಿಕ್ ಸಿದ್ದೀಕಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

“ಅವರು ಮಾಂತ್ರಿಕ ಕಣ್ಣು ಹೊಂದಿದ್ದ ವ್ಯಕ್ತಿ ಮತ್ತು ಈ ಯುಗದ ಅಗ್ರಗಣ್ಯ ಫೋಟೋ ಜರ್ನಲಿಸ್ಟ್‌ಗಳಲ್ಲಿ ಒಬ್ಬರು ಎಂದು ಪರಿಗಣಿಸಲ್ಪಟ್ಟಿದ್ದಾರೆ. ಒಂದು ಚಿತ್ರವು ಸಾವಿರ ಪದಗಳನ್ನು ಹೇಳಬಲ್ಲದಾದರೆ, ಅವರ ಫೋಟೋಗಳು ಕಾದಂಬರಿಗಳಾಗಿವೆ” ಎಂದು ಮುಖ್ಯ ನ್ಯಾಯಮೂರ್ತಿ ರಮಣ ಅವರು ಸಿದ್ದೀಕಿ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

83 ವರ್ಷದ ಹಿರಿಯ ಪತ್ರಕರ್ತ ಪ್ರೇಮ್ ಶಂಕರ್ ಝಾ ಅವರಿಗೆ ಜೀವಮಾನದ ಸಾಧನೆ ಪ್ರಶಸ್ತಿಯನ್ನು ನೀಡಲಾಯಿತು. “ಕಠಿಣ ಪರಿಶ್ರಮ, ಅತ್ಯುನ್ನತ ನೈತಿಕ ಮಾನದಂಡಗಳು ಮತ್ತು ಬೌದ್ಧಿಕ ಜ್ಞಾನದಿಂದ ಈ ಕ್ಷೇತ್ರದಲ್ಲಿ ಅಪಾರ ಖ್ಯಾತಿ ಗಳಿಸಿದ್ದಾರೆ” ಎಂದು ಮುಖ್ಯ ನ್ಯಾಯಮೂರ್ತಿ ರಮಣ, ಪ್ರೇಮ್ ಶಂಕರ್ ಝಾ ಅವರನ್ನು ಅಭಿನಂದಿಸಿದರು.

ಮುಂಬೈ ಪ್ರೆಸ್ ಕ್ಲಬ್ ಒಂದು ದಶಕದ ಹಿಂದೆ ಉತ್ತಮ ತನಿಖಾ ಮತ್ತು ವೈಶಿಷ್ಟ್ಯಪೂರ್ಣ ಬರವಣಿಗೆಯನ್ನು ಗುರುತಿಸಲು ದಿ ರೆಡ್‌ಇಂಕ್ ಪ್ರಶಸ್ತಿಗಳನ್ನು ನೀಡುತ್ತಿದೆ. ಈ ಬಾರಿಯ 10 ನೇ ಆವೃತ್ತಿಯ ಭಾಗವಾಗಿ 12 ವಿಭಾಗಗಳಲ್ಲಿ ವಿವಿಧ ಇತರ ಪತ್ರಕರ್ತರಿಗೆ ಪ್ರಶಸ್ತಿ ನೀಡಲಾಯಿತು.

ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ 38 ವರ್ಷದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ಅಫ್ಘಾನ್ ಪಡೆಗಳು ಮತ್ತು ತಾಲಿಬಾನ್ ನಡುವೆ ನಡೆದ ಘರ್ಷಣೆಯಲ್ಲಿ ಸಾವನ್ನಪ್ಪಿದ್ದರು ಎಂದು ವರದಿಯಾಗಿತ್ತು. ಅವರು ಅಫ್ಘಾನ್‌‌‌‌ ವಿಶೇಷ ಪಡೆಯೊಂದಿಗೆ ವರದಿಗಾಗಿ ಅಲ್ಲಿ ನಿಯೋಜನೆಗೊಂಡಿದ್ದರು ಎನ್ನಲಾಗಿದೆ.

ಆದರೆ, ಪುಲಿಟ್ಜರ್ ಪ್ರಶಸ್ತಿ ವಿಜೇತ ಫೋಟೊ ಜರ್ನಲಿಸ್ಟ್ ದಾನಿಶ್ ಸಿದ್ದೀಕಿ ಅಫ್ಘಾನಿಸ್ತಾನದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿಲ್ಲ. ಅವರ ಗುರುತನ್ನು ಪತ್ತೆ ಹಚ್ಚಿದ ಬಳಿಕ ತಾಲಿಬಾನಿಗಳು ಅವರನ್ನು “ಕ್ರೂರವಾಗಿ ಕೊಂದಿದ್ದಾರೆ” ಎಂದು ಅಮೆರಿಕದ ನಿಯತಕಾಲಿಕವೊಂದರ ವರದಿಯಲ್ಲಿ ಹೇಳಲಾಗಿದೆ.


ಇದನ್ನೂ ಓದಿ: ದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಲಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...