Homeಮುಖಪುಟವಿಕಲಚೇತನ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ವಿಕಲಚೇತನ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ಉತ್ತರಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ 17 ವರ್ಷದ ದೈಹಿಕ ವಿಕಲಚೇತನ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

ಬಾಲಕಿಯ ಕುಟುಂಬದ ಪ್ರಕಾರ, ಶನಿವಾರ ಮೇಕೆ ಮೇಯಿಸಲು ತೆರಳಿದ್ದ ಬಾಲಕಿ ಸಂಜೆಯ ವೇಳೆಗೆ ತನ್ನ ನಿವಾಸದಿಂದ 200 ಮೀಟರ್‌ ದೂರದಲ್ಲಿರುವ ಬಾಜ್ರಾ ಮೈದಾನದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಸಂತ್ರಸ್ತೆಯ ಚಿಕ್ಕಪ್ಪ ಈ ಕುರಿತು ಮಾದ್ಯಮದ ಜೊತೆ ಮಾತನಾಡಿದ್ದು, ನಾವು ಆಕೆಯನ್ನು ಭಾಗಶಃ ಬಟ್ಟೆಯಿಲ್ಲದೆ ಮತ್ತು ರಕ್ತದ ಮಡುವಿನಲ್ಲಿ ಕಂಡುಕೊಂಡೆವು. ಇಬ್ಬರು ವ್ಯಕ್ತಿಗಳು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆಕೆ ಕೈ ಸನ್ನೆಯ ಮೂಲಕ ವಿವರಿಸಿದಳು. ಕೂಡಲೇ ಆಕೆಯನ್ನು ಫಿರೋಜಾಬಾದ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಆಕೆಯನ್ನು ಆಗ್ರಾದ ಸರೋಜಿನಿ ನಾಯ್ಡು ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಹೆಚ್ಚುವರಿ ಎಸ್ಪಿ ಸರ್ವೇಶ್ ಕುಮಾರ್ ಮಿಶ್ರಾ, ವೈದ್ಯಕೀಯ ಪರೀಕ್ಷೆಗಳು ಬಾಲಕಿಯ ಖಾಸಗಿ ಅಂಗಗಳಿಗೆ ಗಾಯಗಳು ಆಗಿರುವುದನ್ನು ದೃಢಪಡಿಸಿವೆ. ನಾವು ಅಲ್ಟ್ರಾಸೌಂಡ್ ವರದಿ ಮತ್ತು ಇತರ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದೇವೆ. ಸಂತ್ರಸ್ತೆಯ ಚಿಕ್ಕಪ್ಪನ ದೂರಿನ ಆಧಾರದ ಮೇಲೆ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 376ರಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.

ಬಾಲಕಿ ಬಡ ಕುಟುಂಬಕ್ಕೆ ಸೇರಿದವಳು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆಕೆಯ ತಂದೆ, ಚಿಕ್ಕಪ್ಪ ಮತ್ತು ಅಣ್ಣ ಕೂಲಿ ಕೆಲಸ ಮಾಡುತ್ತಾರೆ. ಬಾಲಕಿಗೆ ಕಲಿಕೆಗೆ ತೊಂದರೆ ಇದೆ ಮತ್ತು ಸರಿಯಾಗಿ ಮಾತನಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಬಿಜೆಪಿ ಸಚಿವರ ಕುರಿತು ವರದಿ ಮಾಡಿದ ಪತ್ರಕರ್ತನ ವಿರುದ್ಧ 11 ಎಫ್‌ಐಆರ್‌ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಧಾರವಾಡ ಅಖಾಡ: ಕೇಸರಿ ಕೋಟೆಯಲ್ಲೇ ಸಂಘೀ ಸೇನಾಧಿಪತಿ ಪ್ರಹ್ಲಾದ್ ಜೋಶಿಗೆ ನಡುಕ!!

0
ಪೇಡಾ ನಗರಿ, ಸಾಂಸ್ಕೃತಿಕ ರಾಜಧಾನಿ, ಕರ್ನಾಟಕದ ಆಕ್ಸ್‌ಫರ್ಡ್ ಎಂದೆಲ್ಲ ಗುರುತಿಸಲ್ಪಡುವ ಧಾರವಾಡ ನಗರ ಕೇಂದ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರ ಮಲೆನಾಡು, ಅರೆಮಲೆನಾಡು ಮತ್ತು ಬಯಲುನಾಡುಗಳ ವಿಭಿನ್ನ ನೈಸರ್ಗಿಕ ಗುಣ-ಧರ್ಮದ ಸೀಮೆ. ಖಡಕ್ ಜವಾರಿ...