Homeಮುಖಪುಟತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಾಂಶುಪಾಲೆ, ಶಿಕ್ಷಕನ ಬಂಧನ

ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಾಂಶುಪಾಲೆ, ಶಿಕ್ಷಕನ ಬಂಧನ

- Advertisement -
- Advertisement -

ತಮಿಳುನಾಡಿನಲ್ಲಿ ಈ ವರ್ಷದ ಆರಂಭದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಇತ್ತಿಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ 12 ನೇ ತರಗತಿಯ ವಿದ್ಯಾರ್ಥಿನಿಯ ಪ್ರಕರಣಕ್ಕೆ ಸಂಬಂಧಿಸಿದಂತೆ 31 ವರ್ಷದ ಭೌತಶಾಸ್ತ್ರ ಶಿಕ್ಷಕ ಮತ್ತು ಪ್ರಾಂಶುಪಾಲೆಯನ್ನು ಕೊಯಮತ್ತೂರಿನಲ್ಲಿ ಬಂಧಿಸಲಾಗಿದೆ.

ಇದೇ ಶಿಕ್ಷಕ ಇನ್ನೂ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನುವಂತಹ ವಾಟ್ಸಾಪ್ ಚಾಟ್ ಹಾಗೂ ಆಡಿಯೋ ಸಂಭಾಷಣೆ ಹರಿದಾಡುತ್ತಿದ್ದು, ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ, ಈ ಪುರಾವೆಗಳು ಅದೇ ಶಿಕ್ಷಕನಿಗೆ ಸಂಬಂಧಿಸಿದ್ದೇ ಎನ್ನುವುದು ಖಚಿತವಾಗಿಲ್ಲ. ಸಾರ್ವಜನಿಕ ಆಕ್ರೋಶ ಹೆಚ್ಚಾದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಪ್ರಕರಣದಲ್ಲಿ ಇನ್ನೂ ಇಬ್ಬರು ಭಾಗಿಯಾಗಿರುವ ಕುರಿತಾದ ಕೈಬರಹದ ಟಿಪ್ಪಣಿಯೊಂದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಲೈಂಗಿಕ ಕಿರುಕುಳವು ಈ ವರ್ಷದ ಮೊದಲರ್ಧದಲ್ಲಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ಎನ್‌ಡಿಟಿವಿ ಉಲ್ಲೇಖಿಸಿದೆ.

ಇದನ್ನೂ ಓದಿ: ನಟ ಸುಶಾಂತ್‌ ಸಿಂಗ್‌ ಕುಟುಂಬದ ಐವರು ಸದಸ್ಯರು ರಸ್ತೆ ಅಪಘಾತದಲ್ಲಿ ದುರ್ಮರಣ

ನವೆಂಬರ್ 11ರಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಲೈಂಗಿಕ ದೌರ್ಜನ್ಯದ ಬಗ್ಗೆ ವಿದ್ಯಾರ್ಥಿನಿಯ ದೂರಿನ ಮೇರೆಗೆ ಕ್ರಮಕೈಗೊಳ್ಳದ ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನೂ ಪೊಲೀಸರು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾನೂನಿನಡಿ ಬಂಧಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, “ಕೆಲವರ ವಿಕೃತಿಯು ವಿದ್ಯಾರ್ಥಿಯ ಜೀವನವನ್ನು ಕಸಿದುಕೊಂಡಿದೆ. ಶಾಲೆಗಳು ಲೈಂಗಿಕ ಕಿರುಕುಳವಾಗದಂತೆ ನೋಡಿಕೊಳ್ಳಬೇಕು. ನಾವು ಆರೋಪಿಗಳನ್ನು ಕಾನೂನಿನ ಮುಂದೆ ನಿಲ್ಲುಸುತ್ತೇವೆ” ಎಂದು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ, ಹಾಲಿ ಮತ್ತು ಹಳೆಯ ವಿದ್ಯಾರ್ಥಿಗಳು ಲೈಂಗಿಕ ಕಿರುಕುಳ ಆರೋಪದ ಮಾಡಿದ್ದ ನಂತರ ಚೆನ್ನೈನ ಪ್ರಮುಖ ಶಾಲೆಗಳ ಕೆಲವು ಶಿಕ್ಷಕರನ್ನು ಬಂಧಿಸಲಾಗಿತ್ತು. ಆ ಕೆಲವು ಪ್ರಕರಣಗಳಲ್ಲಿಯೂ ಸಹ, ಶಾಲಾ ಆಡಳಿತ ಮಂಡಳಿಯು ಲೈಂಗಿಕ ಕಿರುಕುಳದ ವರದಿಗಳು ತಮ್ಮ ಗಮನಕ್ಕೆ ಬಂದರೂ ಮುಚ್ಚಿಡಲು ಪ್ರಯತ್ನಿಸಿವೆ ಎಂದು ಆರೋಪಿಸಲಾಗಿದೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104


ಇದನ್ನೂ ಓದಿ: ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...