Homeಮುಖಪುಟಪಿಕ್ ಪಾಕೆಟ್ ಆರೋಪ: ಬಂಗಾಳಿ ನಟಿ ರೂಪಾ ದತ್ತಾ ಬಂಧನ

ಪಿಕ್ ಪಾಕೆಟ್ ಆರೋಪ: ಬಂಗಾಳಿ ನಟಿ ರೂಪಾ ದತ್ತಾ ಬಂಧನ

ರೂಪಾ ದತ್ತಾ ಅವರು ಈ ಹಿಂದೆ ಬಾಲಿವುಡ್‌ನ ಖ್ಯಾತ ಚಲನಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳದ ಬಗ್ಗೆ ತಪ್ಪಾಗಿ ಆರೋಪಿಸಿ ಸಿಕ್ಕಿಬಿದ್ದಿದ್ದರು.

- Advertisement -
- Advertisement -

ಕೋಲ್ಕತ್ತದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಪುಸ್ತಕ ಮೇಳ -2022 ದಲ್ಲಿ ಪಿಕ್ ಪಾಕೆಟ್ ಮಾಡಿದ ಆರೋಪದ ಮೇಲೆ ನಟಿ ರೂಪಾ ದತ್ತಾರವರನ್ನು ಉತ್ತರ ಬಿಧಾನ್‌ನಗರ್ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರು ಹಲವು ಪರ್ಸ್‌ಗಳನ್ನು ಕಸದ ಬುಟ್ಟಿಗೆ ಎಸೆಯುವ ಸಮಯದಲ್ಲಿ ನಟಿ ಸಿಕ್ಕಿಬಿದ್ದಿದ್ದು, ಅವರಿಂದ ಸುಮಾರು 75,000 ರೂ ನಷ್ಟು ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರ ಹೇಳಿಕೆ ಉಲ್ಲೇಖಿಸಿ ಇಂಡಿಯಾ ಟುಡೆ ವರದಿ ಮಾಡಿದೆ.

ನಟಿ ಜನರ ಗಮನವನ್ನು ಬೇರೆಡೆಗೆ ಸೆಳೆದು ಕಳ್ಳತನ ಮಾಡುತ್ತಿದ್ದರು. ಮಾರ್ಚ್ 12ರ ಶನಿವಾರ ರಾತ್ರಿ ಘಟನೆ ನಡೆದಿದೆ. ಮಹಿಳೆಯೊಬ್ಬರು ಕಸದಬುಟ್ಟಿಗೆ ಪರ್ಸ್‌ಗಳನ್ನು ಎಸೆಯುವಾಗ ಸಂಶಯ ಬಂದು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ನಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ, ಅವರ ಬಳಿಯಿದ್ದ 75,000 ಹಣ ಎಲ್ಲಿಂದ ಬಂತು ಎಂಬುದಕ್ಕೆ ಸಮರ್ಪಕ ಉತ್ತರ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರೂಪಾ ದತ್ತಾ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ಅವರ ಹಳೆಯ ಫೋಟೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲಿ ರೂಪಾದತ್ತಾರವರು ಸಾವರ್ಕರ್ ಫೋಟೊಗೆ ಕೈಮುಗಿಯುತ್ತಿರುವ ಫೋಟೊ ಸಹ ಒಂದಾಗಿದೆ.

ರೂಪಾ ದತ್ತಾ ಅವರು ಈ ಹಿಂದೆ ಬಾಲಿವುಡ್‌ನ ಖ್ಯಾತ ಚಲನಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳದ ಬಗ್ಗೆ ತಪ್ಪಾಗಿ ಆರೋಪಿಸಿದ್ದರು. ಅನುರಾಗ್ ಕಶ್ಯಪ್ ಎಂಬ ಹೆಸರಿನಲ್ಲಿ ಖಾತೆದಾರನೊಂದಿಗೆ ನಡೆಸಿದ ಚಾಟ್ ಅನ್ನು ನಿಜವಾಗಿಯೂ ಅನುರಾಗ್ ಕಶ್ಯಪ್‌ರೊಂದಿಗಿನ ಸಂಭಾಷಣೆಯ ಸ್ಕ್ರೀನ್‌ಶಾಟ್‌ಗಳು ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ದೂರು ನೀಡಿದ್ದರು. ಆದರೆ ಪೊಲೀಸರು ತನಿಖೆ ನಡೆಸಿ ಆ ಖಾತೆ ಅನುರಾಗ್ ಕಶ್ಯಪ್‌ದಲ್ಲ ಎಂದು ಸ್ಪಷ್ಟಪಡಿಸಿದ್ದರು.


ಇದನ್ನೂ ಓದಿ: ಆದಿವಾಸಿ ಬಾಲಕಿಯರಿಗೆ ಸಾರ್ವಜನಿಕವಾಗಿ ಸಾಮೂಹಿಕ ಲೈಂಗಿಕ ಕಿರುಕುಳ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...