Homeಮುಖಪುಟರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ

ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ

- Advertisement -
- Advertisement -

ಆರೆಸ್ಸೆಸ್‌ನ ಬಾವುಟ ಹಿಡಿದ ಭಾರತ ಮಾತೆಯ ಚಿತ್ರವನ್ನು ಸರ್ಕಾರಿ ಕಾರ್ಯಕ್ರಮದಲ್ಲಿ ಇರಿಸಿದ್ದನ್ನು ವಿರೋಧಿಸಿ, ಕೇರಳ ಸರ್ಕಾರವು ರಾಜಭವನದಲ್ಲಿ ನಡೆದ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಬಹಿಷ್ಕರಿಸಿದೆ. ರಾಜಭವನದ ಕೇಂದ್ರ ಸಭಾಂಗಣದಲ್ಲಿ ಗುರುವಾರ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ  ಇರಿಸಲಾಗಿದ್ದ ಚಿತ್ರವು ಆರ್‌ಎಸ್‌ಎಸ್ ಹೆಚ್ಚಾಗಿ ಬಳಸುವ ಭಾರತ ಮಾತೆಯ ಚಿತ್ರ ಎಂದು ಸರ್ಕಾರ ವಾದಿಸಿದೆ. ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ

ಚಿತ್ರವನ್ನು ಬದಲಾಯಿಸುವಂತೆ ಕೇಳಿದ್ದ ಸರ್ಕಾರದ ವಿನಂತಿಯನ್ನು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ತಿರಸ್ಕರಿಸಿದ ನಂತರ, ರಾಜ್ಯದ ಕೃಷಿ ಇಲಾಖೆಯು ಸಮಾರಂಭವನ್ನು ಸರ್ಕಾರಿ ಸಚಿವಾಲಯದ ದರ್ಬಾರ್ ಹಾಲ್‌ಗೆ ಸ್ಥಳಾಂತರಿಸಿದೆ.

ಪ್ರಸ್ತುತ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಈ ವರ್ಷದ ಆರಂಭದಲ್ಲಿ ಅಧಿಕಾರ ವಹಿಸಿಕೊಂಡ ನಂತರ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರವು ರಾಜಭವನದ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದು ಇದೇ ಮೊದಲು.

ರಾಜ್ಯಪಾಲರನ್ನು ಮುಖ್ಯ ಅತಿಥಿಯಾಗಿಟ್ಟುಕೊಂಡು ರಾಜಭವನದಲ್ಲಿ ಪರಿಸರ ದಿನಾಚರಣೆಯ ರಾಜ್ಯ ಮಟ್ಟದ ಉದ್ಘಾಟನೆಯನ್ನು ಕೃಷಿ ಇಲಾಖೆ ಯೋಜಿಸಿತ್ತು. ರಾಜಭವನದ ಕೇಂದ್ರ ಸಭಾಂಗಣದಲ್ಲಿ ನಡೆದ ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಕೃಷಿ ಇಲಾಖೆಯ ಅಧಿಕಾರಿಗಳು, ಸ್ಥಳದಲ್ಲಿ ಬಳಸಬೇಕಾದ ಭಾರತ ಮಾತೆಯ ಚಿತ್ರವು ಸಂಘ ಪರಿವಾರವು ಸಾಮಾನ್ಯವಾಗಿ ಬಳಸುವ ಆರೆಸ್ಸೆಸ್‌ನ ಭಾವುಟ ಹಿಡಿದ ಚಿತ್ರವಾಗಿದೆ ಎಂದು ಗಮನಿಸಿದ್ದಾರೆ. ಇದರ ನಂತರ ಅವರು ಸಿಪಿಐ ನಾಯಕ ಮತ್ತು ಕೃಷಿ ಸಚಿವ ಪಿ ಪ್ರಸಾದ್ ಅವರೊಂದಿಗೆ ಈ ವಿಷಯವನ್ನು ಚರ್ಚಿಸಿದ್ದರು, ಅವರು ಚಿತ್ರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪರಿಣಾಮವಾಗಿ, ಇಲಾಖೆಯು ರಾಜ್ಯ ಸಚಿವಾಲಯದ ದರ್ಬಾರ್ ಸಭಾಂಗಣದಲ್ಲಿ ತನ್ನದೇ ಆದ ಕಾರ್ಯವನ್ನು ನಡೆಸಿದೆ. ರಾಜಭವನದಲ್ಲಿ ಕಾರ್ಯಕ್ರಮವನ್ನು ಸರ್ಕಾರ ಯೋಜಿಸಿತ್ತು ಆದರೆ ಫೋಟೋದ ಬಗ್ಗೆ ರಾಜ್ಯಪಾಲರೊಂದಿಗೆ ಉಂಟಾದ ಬಿಕ್ಕಟ್ಟಿನ ನಂತರ ಅದರ ಸ್ಥಳವನ್ನು ಬದಲಾಯಿಸಿದೆ ಎಂದು ಸಚಿವ ಪಿ. ಪ್ರಸಾದ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಸ್ಥಳದಲ್ಲಿ (ರಾಜಭವನದ ಕೇಂದ್ರ ಸಭಾಂಗಣ) ಪ್ರದರ್ಶಿಸಲಾದ ಭಾರತ ಮಾತೆಯ ಚಿತ್ರವು ಆರ್‌ಎಸ್‌ಎಸ್ ಬಳಸುವಂತಹ ಚಿತ್ರವಾಗಿದೆ. ಸಾಂವಿಧಾನಿಕ ಸಂಸ್ಥೆಯ ಹುದ್ದೆಯು ಅದನ್ನು ಬಳಸಬಾರದು. ಸಾಂವಿಧಾನಿಕವಾಗಿ, ಸರ್ಕಾರಿ ಸಮಾರಂಭದಲ್ಲಿ ಆ ಚಿತ್ರವನ್ನು ಬಳಸುವುದು ಸೂಕ್ತವಲ್ಲ. ರಾಜ್ಯಪಾಲರು ಆ ಚಿತ್ರವನ್ನು ಬಳಸಬೇಕೆಂದು ಒತ್ತಾಯಿಸಿದರು, ಆದರೆ ನಾವು ಆ ನಿರ್ಧಾರವನ್ನು ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ, ಸರ್ಕಾರಿ ಕಾರ್ಯಕ್ರಮವನ್ನು ರಾಜಭವನದಿಂದ ಹೊರಗೆ ಸ್ಥಳಾಂತರಿಸಲಾಯಿತು, ”ಎಂದು ಅವರು ಹೇಳಿದ್ದಾರೆ.

ಈ ವಿವಾದದ ಬಗ್ಗೆ ರಾಜ್ಯಪಾಲರು ಪ್ರತಿಕ್ರಿಯಿಸಿ ರಾಜಭವನದಲ್ಲಿ ನಡೆದ ಮತ್ತೊಂದು ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಾ, “ಸಚಿವರು ಭಾರತ ಮಾತೆಯ ಭಾವಚಿತ್ರವನ್ನು ಡಯಾಸ್‌ನಿಂದ ತೆಗೆದುಹಾಕಬೇಕೆಂದು ಬಯಸಿದ್ದರು. ನಾವು ಭಾರತ ಮಾತೆಯನ್ನು ತೆಗೆದುಹಾಕಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ತಿಳಿಸಿದ್ದೇನೆ. ಭಾರತ ಮಾತೆಯನ್ನು ದೂರವಿಡಲು ಸಾಧ್ಯವಿಲ್ಲ… ಯಾವುದೇ ಕಡೆಯಿಂದ ಏನೇ ಒತ್ತಡ ಬಂದರೂ, ಭಾರತ ಮಾತೆಯ ಬಗ್ಗೆ ಯಾವುದೇ ರಾಜಿ ಇರುವುದಿಲ್ಲ.” ಎಂದು ಹೇಳಿದ್ದಾರೆ.

ರಾಜಭವನದಲ್ಲಿ ಏನು ಬಳಸಬೇಕು ಅಥವಾ ಬಳಸಬಾರದು ಎಂದು ಸಚಿವರು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ರಾಜಭವನದ ಮೂಲಗಳು ತಿಳಿಸಿವೆ. ರಾಜಭವನದಲ್ಲಿ ಕಾರ್ಯಕ್ರಮವು ಯೋಜಿಸಿದಂತೆ ನಡೆಯಿತು ಮತ್ತು ಅದರಲ್ಲಿ “ರಾಜ್ಯಪಾಲರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು” ಎಂದು ಮೂಲಗಳು ತಿಳಿಸಿವೆ. “ರಾಜಭವನದಲ್ಲಿ ಕಾರ್ಯಕ್ರಮ ನಡೆಯುತ್ತಿರುವಾಗ, ಏನು ಬಳಸಬೇಕು ಮತ್ತು ಏನು ಬಳಸಬಾರದು ಎಂದು ಸಚಿವರು ನಿರ್ದೇಶಿಸುವಂತಿಲ್ಲ. ಭಾರತ ಮಾತೆಯ ಯಾವ ಚಿತ್ರವನ್ನು ಬಳಸಬೇಕೆಂದು ಹೇಳುವ ಹಕ್ಕು ಸಚಿವರಿಗೆ ಇಲ್ಲ” ಎಂದು ರಾಜ್ಯಪಾಲರದ ಮೂಲವನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆಪರೇಷನ್ ಸಿಂಧೂರ್: ಮೇಣದಬತ್ತಿಯ ಬೆಳಕಿನಿಂದ ಬ್ರಹ್ಮೋಸ್‌ ಮಾದರಿಗೆ ಬದಲಾವಣೆ” ಎಂಬ ವಿಚಾರದ ಕುರಿತು ರಾಜಭವನದಲ್ಲಿ ಆರೆಸ್ಸೆಸ್‌ ನಾಯಕ ಗುರುಮೂರ್ತಿ ಮಾಡಿದ ಭಾಷಣದ ಎರಡು ವಾರಗಳ ನಂತರ ಈ ಘಟನೆ ನಡೆದಿದೆ. ಈ ಘಟನೆಯನ್ನು ವಿಪಕ್ಷ ಕಾಂಗ್ರೆಸ್ ಕೂಡಾ ವಿರೋಧಿಸಿದ್ದು, “ರಾಜಭವನದನ್ನು ಆರ್‌ಎಸ್‌ಎಸ್ ಪ್ರಧಾನ ಕಚೇರಿಯಾಗಿ ಪರಿವರ್ತಿಸಲಾಗುತ್ತಿದೆ” ಎಂದು ಹೇಳಿತ್ತು.

ಆರೆಸ್ಸೆಸ್ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ ಬಳಸಿರುವ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ, ವಿರೋಧ ಪಕ್ಷದ ನಾಯಕ ವಿ ಡಿ ಸತೀಸನ್ ಅವರು, ರಾಜಭವನದಲ್ಲಿ ಭಾರತ ಮಾತೆಯ ಚಿತ್ರವನ್ನು ಬಳಸುವುದು “ಸರಿಯಲ್ಲ” ಎಂದು ಹೇಳಿದ್ದಾರೆ.

“ವಾರಗಳ ಹಿಂದೆ, ಆರ್‌ಎಸ್‌ಎಸ್ ಸಿದ್ಧಾಂತವಾದಿ ಗುರುಮೂರ್ತಿ ಅವರನ್ನು ಭಾಷಣಕ್ಕಾಗಿ ರಾಜಭವನಕ್ಕೆ ಕರೆತರಲಾಯಿತು. ಅವರು ಮಾಜಿ ಪ್ರಧಾನಿಗಳನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದರು. ಮುಖ್ಯಮಂತ್ರಿ ವಿಜಯನ್ ಅದರ ಬಗ್ಗೆ ಏಕೆ ಮೌನವಾಗಿದ್ದಾರೆ? ಅವರು ರಾಜ್ಯಪಾಲರ ಬಗ್ಗೆ ಮಾತನಾಡಲು ಹೆದರುತ್ತಾರೆ. ರಾಜಭವನವು ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದನ್ನು ಅಂತಹ ರಾಜಕೀಯ ಕಾರ್ಯಕ್ರಮಗಳಿಗೆ ವೇದಿಕೆಯನ್ನಾಗಿ ಮಾಡಬಾರದು” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕದ ಹೋರಾಟಗಾರರೊಬ್ಬರು, ರಾಜ್ಯ ವಿಧಾನಸಭೆಯಲ್ಲಿ ಕೂಡಾ ಪ್ರತಿ ಶುಕ್ರವಾರ ಹಿಂದೂ ದೇವರುಗಳಿಗೆ ಪೂಜೆ ಸಲ್ಲಿಸದೆ ಯಾವ ಕೆಲಸವೂ ಪ್ರಾರಂಭವಾಗುವುದಿಲ್ಲ. ರಾಜ್ಯದ ಸರ್ಕಾರಿ ಕಚೇರಿ, ಕಾರ್ಯಾಲಯ ಹಾಗೂ ಪೊಲೀಸ್ ಠಾಣೆಗಳು ಸೇರಿದಂತೆ ಪೂಜೆ ಪುರಸ್ಕಾರಗಳು ನಡೆಯುತ್ತವೆ. ಇವೆಲ್ಲವೂ ಅಸಂವಿಧಾನಿಕ ಆಚರಣಗಳು, ಜಾತ್ಯಾತೀತ ನಾಡಿನಲ್ಲಿ ಧಾರ್ಮಿಕ ತಟಸ್ಥತೆ ಇರಬೇಕಾಗಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಕೂಡಾ ಈ ಬಗ್ಗೆ ಗಮನವಹಿಸಬೇಕು” ಎಂದು ಹೇಳಿದ್ದಾರೆ.  ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರೋಹಿತ್ ವೇಮುಲ ಕಾಯ್ದೆಯ ಕರಡು ಪ್ರತಿಯನ್ನು ಮತ್ತಷ್ಟು ಬಲಪಡಿಸಲು ವಿಶ್ವಸಂಸ್ಥೆಯಿಂದ ಸರಕಾರಕ್ಕೆ ಪತ್ರ

ರೋಹಿತ್ ವೇಮುಲ ಕಾಯ್ದೆಯ ಕರಡು ಪ್ರತಿಯನ್ನು ಮತ್ತಷ್ಟು ಬಲಪಡಿಸಲು ವಿಶ್ವಸಂಸ್ಥೆಯಿಂದ ಸರಕಾರಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...