Homeಕರ್ನಾಟಕ‘ಹಂದಿಗಳೊಂದಿಗೆ...' | ಕೇಂದ್ರ ಸಚಿವ ಕುಮಾರಸ್ವಾಮಿಗೆ ಎಡಿಜಿಪಿ ತೀಕ್ಷ್ಣ ಪ್ರತಿಕ್ರಿಯೆ

‘ಹಂದಿಗಳೊಂದಿಗೆ…’ | ಕೇಂದ್ರ ಸಚಿವ ಕುಮಾರಸ್ವಾಮಿಗೆ ಎಡಿಜಿಪಿ ತೀಕ್ಷ್ಣ ಪ್ರತಿಕ್ರಿಯೆ

- Advertisement -
- Advertisement -

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಇತ್ತಿಚೆಗಿನ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್‌ಐಟಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ ಚಂದ್ರಶೇಖರ್ ಅವರು ‘ಹಂದಿಗಳೊಂದಿಗೆ ಎಂದಿಗೂ ಗುದ್ದಾಡಬೇಡಿ’ ಎಂದು ಹೇಳಿದ್ದಾರೆ. ಹಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೆಪ್ಟಂಬರ್ 28 ರಂದು ಎಸ್‌ಐಟಿ ಸಿಬ್ಬಂದಿಗೆ ಪತ್ರ ಬರೆದಿರುವ ಚಂದ್ರಶೇಖರ್ ಅವರು, ಕೇಂದ್ರ ಸಚಿವರನ್ನು “ಎಸ್‌ಐಟಿಯ ಅಪರಾಧ ಸಂಖ್ಯೆ 16/14” ಆರೋಪಿ ಎಂದು ಉಲ್ಲೇಖಿಸಿದ್ದಾರೆ ಮತ್ತು ಕುಮಾರಸ್ವಾಮಿ ಅವರು “ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳು ಮತ್ತು ಬೆದರಿಕೆಗಳನ್ನು” ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂಓದಿ: ಅಂಗಡಿ ಮಾಲೀಕರ ಗುರುತು ವಿವಾದ | ಖರ್ಗೆ ಭೇಟಿಯಾದ ಹಿಮಾಚಲ ಸಚಿವ ವಿಕ್ರಮಾದಿತ್ಯ ಸಿಂಗ್

ಜಾರ್ಜ್ ಬರ್ನಾರ್ಡ್ ಶಾ ಉಲ್ಲೇಖವನ್ನು ಉಲ್ಲೇಖಿಸಿದ ಅವರು “ಹಂದಿಗಳೊಂದಿಗೆ ಎಂದಿಗೂ ಗುದ್ದಾಡಬೇಡಿ. ಇಬ್ಬರೂ ಕೊಳಕಾಗುತ್ತೀರಿ ಮತ್ತು ಹಂದಿ ಕೂಡಾ ಅದನ್ನು ಇಷ್ಟಪಡುತ್ತದೆ” ಎಂದು ಹೇಳಿದ್ದಾರೆ. ನಮ್ಮ ಕರ್ತವ್ಯ ನಿರ್ವಹಣೆಯ ಸಮಯದಲ್ಲಿ ಅಪರಾಧಿಗಳು ಮತ್ತು ಆರೋಪಿಗಳನ್ನು ಎದುರಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ಕೆಲವೊಮ್ಮೆ ನಾವು ಎದುರಿಸುವ ಅಪರಾಧಿಗಳು ಮತ್ತು ಆರೋಪಿಗಳು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ಇದು ಕರ್ತವ್ಯ ನಿರ್ವಹಿಸುವ ನಮ್ಮನ್ನು ತಡೆಯುವಂತೆ ಆಗಬಾರದು” ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಹಂದಿ

ಬೆಂಗಳೂರಿನ ಗಂಗೇನಹಳ್ಳಿಯಲ್ಲಿ 1.1 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿರುವ ಬಗ್ಗೆ ಕುಮಾರಸ್ವಾಮಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ, ಚಂದ್ರಶೇಖರ್ ಅವರು ಕಾಂಗ್ರೆಸ್ ರಕ್ಷಣೆಯಲ್ಲಿ ಭ್ರಷ್ಟಾಚಾರ ಮತ್ತು ಪುರಾವೆಗಳ ಕಟ್ಟುಕಥೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದರು.

ಇದನ್ನೂಓದಿ: ಕೇರಳ | ಆರೆಸ್ಸೆಸ್‌ ನಾಯಕರ ಭೇಟಿಯಾದ ಎಡಿಜಿಪಿ ಪದಚ್ಯುತಿಗೆ ಸಿಪಿಐ ಆಗ್ರಹ

ಚಂದ್ರಶೇಖರ್ ಅವರ ಪತ್ರಕ್ಕೆ ಭಾನುವಾರ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, “ಚಂದ್ರಶೇಖರ್ ಅಧಿಕಾರಿಯ ಸೋಗಿನಲ್ಲಿ ಕ್ರಿಮಿನಲ್ ಆಗಿದ್ದು, ಅವರ ವಿರುದ್ಧ ಸರಣಿ ಅಪರಾಧ ಎಸಗಿರುವ ಆರೋಪವಿದೆ,” ಎಂದು ಹೇಳಿದ್ದಾರೆ.

ಚಂದ್ರಶೇಖರ್ ಅವರ ಪತ್ರದಲ್ಲಿ, “ಎಸ್‌ಐಟಿ ಆರೋಪಿಗೆ ಸಕ್ಷಮ ಪ್ರಾಧಿಕಾರದಿಂದ ಪ್ರಾಸಿಕ್ಯೂಷನ್ ಮಂಜೂರು ಮಾಡುವಂತೆ ಕೋರಿತ್ತು ಮತ್ತು ಅವರು ಜಾಮೀನಿನಲ್ಲಿದ್ದರು. ನಮ್ಮ ಕರ್ತವ್ಯವನ್ನು ನಿಭಾಯಿಸದಂತೆ ನಮ್ಮನ್ನು ತಡೆಯಲು ಕುಮಾರಸ್ವಾಮಿ ಈ ರೀತಿ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ನನ್ನ ಮೇಲೆ ದಾಳಿ ಮಾಡುವ ಮೂಲಕ ಎಸ್‌ಐಟಿ ಅಧಿಕಾರಿಗಳ ಮನಸ್ಸಿನಲ್ಲಿ ಭಯ ಮೂಡಿಸುವುದು ಅವರ ಉದ್ದೇಶವಾಗಿದೆ. ಆದರೆ ಒಬ್ಬ ಆರೋಪಿ, ಎಷ್ಟೇ ಉನ್ನತ ಮತ್ತು ಶಕ್ತಿಶಾಲಿಯಾಗಿದ್ದರೂ, ಆತ ಆರೋಪಿಯೆ ಆಗಿದ್ದಾನೆ” ಎಂದು ಹೇಳಿದ್ದಾರೆ.

ಇದನ್ನೂಓದಿ: ಆದೇಶವನ್ನು ಉಲ್ಲಂಘಿಸಿ ಅಕ್ರಮ ಧ್ವಂಸ | ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಅಸ್ಸಾಂ ನಿವಾಸಿಗಳು

2006ರಿಂದ 2007ರ ಅವಧಿಯಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದ ಅವಧಿಯಲ್ಲಿ ಗಣಿ ಗುತ್ತಿಗೆ ನೀಡಿಕೆಯಲ್ಲಿನ ಅಕ್ರಮಗಳ ಕುರಿತು ಐಪಿಎಸ್ ಅಧಿಕಾರಿಯಾಗಿರುವ ಚಂದ್ರಶೇಖರ್ ಅವರು ತನಿಖೆ ನಡೆಸುತ್ತಿದ್ದಾರೆ. ಈ ವರ್ಷದ ಆಗಸ್ಟ್‌ನಲ್ಲಿ ಅವರ ಅಧೀನದಲ್ಲಿರುವ ಎಸ್‌ಐಟಿ ಕೇಂದ್ರ ಸಚಿವರ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿ ರಾಜ್ಯಪಾಲರಿಗೆ ಹೆಚ್ಚುವರಿ ದಾಖಲೆಗಳನ್ನು ಕೋರಿತ್ತು.

ಚಂದ್ರಶೇಖರ್ ವಿರುದ್ಧ ಕಿರಿಯ ಅಧಿಕಾರಿಯೊಬ್ಬರು ನೀಡಿದ ದೂರಿನ ಪ್ರತಿಯನ್ನು ಕುಮಾರಸ್ವಾಮಿ ಬಿಡುಗಡೆ ಮಾಡಿದ ಮರುದಿನ ಚಂದ್ರಶೇಖರ್ ಅವರು ಈ ಪತ್ರ ಬರೆದಿದ್ದಾರೆ. ಚಂದ್ರಶೇಖರ್ ಅವರು “ಅಕ್ರಮ ನಿರ್ಮಾಣ ಮತ್ತು ಅತಿಕ್ರಮಣ” ದಲ್ಲಿ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಿಸಿದ್ದಾರೆ.

ವಿಡಿಯೊ ನೋಡಿ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಾಮಕುಮಾರ್ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...