ಶಾಸಕರು, ಪರಿಷತ್ ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನಮಾನ ಪ್ರಶ್ನಿಸಿ ಪಿಐಎಲ್ : ಫೆ.21ಕ್ಕೆ ವಿಚಾರಣೆ

ಶಾಸಕರು ಮತ್ತು ವಿಧಾನಪರಿಷತ್‌ ಸದಸ್ಯರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ ನೀಡಿ ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಕೆಯಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ (ಕೆಸ್‌ಪಿಸಿಬಿ) ಕೆಲಸ ಮಾಡುತ್ತಿರುವ ಬೆಂಗಳೂರು ನಗರದ ನಿವಾಸಿ ಸೂರಿ ಪಾಯಲ ಅವರು ಪಿಐಎಲ್‌ ಸಲ್ಲಿಸಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರನ್ನೊಳಗೊಂಡ ವಿಭಾಗೀಯ ಪೀಠ ಗುರುವಾರ (ಫೆ13) ಪಿಐಎಲ್‌ ವಿಚಾರಣೆಯನ್ನು ಫೆಬ್ರವರಿ 21ಕ್ಕೆ ಮುಂದೂಡಿದೆ. … Continue reading ಶಾಸಕರು, ಪರಿಷತ್ ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನಮಾನ ಪ್ರಶ್ನಿಸಿ ಪಿಐಎಲ್ : ಫೆ.21ಕ್ಕೆ ವಿಚಾರಣೆ