Homeಮುಖಪುಟರಾಮಮಂದಿರ ಪ್ರಾಣಪ್ರತಿಷ್ಠಾನ: ಮೋದಿ, ಯೋಗಿಗೆ ನಿರ್ಬಂಧ ವಿಧಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

ರಾಮಮಂದಿರ ಪ್ರಾಣಪ್ರತಿಷ್ಠಾನ: ಮೋದಿ, ಯೋಗಿಗೆ ನಿರ್ಬಂಧ ವಿಧಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

- Advertisement -
- Advertisement -

ರಾಮಮಂದಿರದ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ನಾಲ್ಕು ದಿನಗಳು ಬಾಕಿ ಇದೆ. ಈ ಮಧ್ಯೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್) ಸಲ್ಲಿಸಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಗಾಝಿಯಾಬಾದ್ ಜಿಲ್ಲೆಯ ಭೋಲಾ ದಾಸ್ ಎಂಬವರು ಈ ಬಗ್ಗೆ ಮೊದಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, 2024ರ ಸಂಸತ್ತಿನ ಚುನಾವಣೆ ಮುಗಿಯುವವರೆಗೆ ಅಯೋಧ್ಯೆಯಲ್ಲಿ ನಡೆಯುವ ಪ್ರಾಣ-ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾರತದ ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಭಾಗವಹಿಸಲು ಅವಕಾಶ ನೀಡದಂತೆ ನ್ಯಾಯಾಲಯದ ನಿರ್ದೇಶನವನ್ನು ಕೋರಿದ್ದಾರೆ.

ಸನಾತನ ಧರ್ಮದ ಶಂಕರಾಚಾರ್ಯರುಗಳ ಅನುಮತಿ ದೊರೆಯುವ ತನಕ ನ್ಯಾಯದ ಹಿತಾಸಕ್ತಿಯಿಂದ ಮೇಲಿನ ನಿರ್ಬಂಧಗಳನ್ನು ಪ್ರಧಾನಿ ಹಾಗೂ ಉತ್ತರಪ್ರದೇಶ ಸಿಎಂಗೆ ಹೇರಬೇಕೆಂದೂ ಪಿಐಎಲ್‌ನಲ್ಲಿ ಕೋರಲಾಗಿದೆ.

ಪಿಐಎಲ್‌ನಲ್ಲಿ ಅರ್ಜಿದಾರರು ಕೆಂದ್ರ ಸರಕಾರ, ಪ್ರಧಾನಿ, ಯುಪಿ ಮುಖ್ಯಮಂತ್ರಿ, ಯುಪಿ ರಾಜ್ಯ ಮತ್ತು ನಾಲ್ವರು ಶಂಕರಾಚಾರ್ಯರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ. ಆಡಳಿತಾರೂಢ ಬಿಜೆಪಿಯು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಮತ್ತು ಲೋಕಸಭೆ ಚುನಾವಣೆಗೆ ಮುಂದಿರುವ ಪಕ್ಷದ ರಾಜಕೀಯ ಹಿತಾಸಕ್ತಿಯಲ್ಲಿ ಸನಾತನ ಸಂಸ್ಕೃತಿಯನ್ನು ನಾಶಪಡಿಸುತ್ತಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ನಿರ್ಬಂಧ ವಿಧಿಸಲು ಕೂಡ ಅರ್ಜಿದಾರರು ಆಗ್ರಹಿಸಿದ್ದಾರೆ. ಹಿಂದೂ ಪಂಚಾಂಗದ ಪ್ರಕಾರ, ಪುಷ್ಯ ಮಾಸದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ಆಯೋಜಿಸಬಾರದು. ಅಲ್ಲದೆ ದೇವಾಲಯ ಇನ್ನೂ ನಿರ್ಮಾಣ ಹಂತದಲ್ಲಿದ್ದು, ಉದ್ಘಾಟನೆ ಸನಾತನ ಸಂಪ್ರದಾಯಕ್ಕೆ ವ್ಯತಿರಿಕ್ತವಾಗಿರುವುದರಿಂದ ದೇವರ ಪ್ರತಿಷ್ಠಾಪನೆ ಮಾಡಬಾರದು ಎಂದು ಅರ್ಜಿದಾರರು ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಶಂಕರಾಚಾರ್ಯರ ಆಕ್ಷೇಪವಿದೆ. ದೇವಾಲಯ ಅಪೂರ್ಣವಾಗಿದ್ದು, ದೇವರ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮಾಡುವುದು ಸನಾತನ ಧರ್ಮದ ಆಚರಣೆಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. ಇದಲ್ಲದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ಬಿಜೆಪಿ ಈ ಸಮಾರಂಭ ಹಮ್ಮಿಕೊಂಡಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಈ ಮೊದಲು ರಾಮಂದಿರದ ಕಾಮಗಾರಿ ಪೂರ್ತಿಯಾಗದೆ ಪ್ರಾಣ ಪ್ರತಿಷ್ಠಾಪನೆಗೆ ಶಂಕಾರಾಚಾರ್ಯ ಮಠದ ನಾಲ್ವರು ಪ್ರಸಿದ್ದ ಮಠಾದೀಶರು ವಿರೋಧವನ್ನು ವ್ಯಕ್ತಪಡಿಸಿದ್ದರು. ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ ಮತ್ತು ಸಂವಿಧಾನವೂ ಇದನ್ನು ಅನುಮತಿಸುವುದಿಲ್ಲ ಎಂದು ಪುರಿಯ ಶಂಕರಾಚಾರ್ಯ ಮಠದ ನಿಶ್ಚಲಾನಂದ ಸರಸ್ವತಿ ಅವರು ಹೇಳಿದ್ದರು.

ಸಮಾರಂಭದಲ್ಲಿ ಶಾಸ್ತ್ರಗಳನ್ನು ಪಾಲಿಸದ ಕಾರಣ ಉದ್ಘಾಟನೆಗೆ ಬರುವುದಿಲ್ಲ. ಧರ್ಮಗ್ರಂಥಗಳ ಪ್ರಕಾರ ಪ್ರಾಣ ಪ್ರತಿಷ್ಟಾಪನೆಗೆ ನಿಯಮಗಳಿವೆ ಮತ್ತು ಪ್ರಧಾನ ಮಂತ್ರಿ ಅವುಗಳನ್ನು ಅನುಸರಿಸಬೇಕು. ಒಬ್ಬರ ಹೆಸರನ್ನು ಪ್ರಚಾರ ಮಾಡಲು ಈ ನಿಯಮಗಳನ್ನು ಮೀರುವುದು ವಿನಾಶದ ಹಾದಿಯಲ್ಲಿ ಹೋಗುವುದಾಗಿದೆ ಎಂದು ಶಂಕರಾಚಾರ್ಯರು ಹೇಳಿದ್ದರು.

ಜ.4ರಂದು ಸುದ್ದಿಗಾರರ ಜೊತೆ ಮಾತನಾಡಿದ್ದ ಪುರಿ ಶಂಕರಾಚಾರ್ಯರು, ನನಗೆ ನನ್ನ ಸ್ಥಾನದ ಘನತೆಯ ಅರಿವಿದೆ. ಹೀಗಾಗಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರದಲ್ಲಿ ಭಾಗವಹಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ರಾಮ ಮಂದಿರವನ್ನು ಉದ್ಘಾಟಿಸುತ್ತಾರೆ. ಅವರು ವಿಗ್ರಹವನ್ನು ಸ್ಪರ್ಶಿಸುತ್ತಾರೆ. ಆಗ ನಾನು ಏನು ಮಾಡಬೇಕು? ನಿಂತುಕೊಂಡು ಚಪ್ಪಾಳೆ ಹೊಡೆಯಬೇಕೇ ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ಮಳವಳ್ಳಿಯಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...