Homeಮುಖಪುಟಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ...

ಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ ಕಂಪನಿ!

- Advertisement -
- Advertisement -

COVID-19 ಸಮಯದಲ್ಲಿ ಕಂಪನಿಯೊಂದು PM CARES ನಿಧಿಗೆ ದೇಣಿಗೆ ನೀಡಿದರೆ ಅದನ್ನು ತನ್ನ ಪರವಾನಗಿಯೆಂದು ಭಾವಿಸಬಹುದೇ? ಹೀಗೊಂದು ಪ್ರಶ್ನೆ ಪಾನ್ ಮಸಾಲ ಕಂಪನಿಯ ವಿಚಾರದಲ್ಲಿ ಭುಗಿಲೆದ್ದಿದೆ. ಈ ವಾರ ಅಲಹಾಬಾದ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆ ಸಂದರ್ಭದಲ್ಲಿ ಹಾಜರಾದ ‘ರಜನಿಗಂಧ’ ಬ್ರಾಂಡ್ ಪಾನ್ ಮಸಾಲ ತಯಾರಕರಾದ ಧರಂಪಾಲ್ ಸತ್ಯಪಾಲ್ ಲಿಮಿಟೆಡ್ ಅವರು ಸಲ್ಲಿಸಿದ ಮನವಿಯು ಈ ಪ್ರಶ್ನೆಯನ್ನು ಮುನ್ನೆಲೆಗೆ ತಂದಿದೆ.

ಕೊರೊನಾ ವೈರಸ್‌ ಸಾಂಕ್ರಾಮಿಕದ ಸಂದರ್ಭದಲ್ಲಿ ಪಾನ್ ಮಸಾಲ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಪಿಐಎಲ್‌ ಒಂದು ದಾಖಲಾಗಿದೆ. ಏಕೆಂದರೆ ಇದನ್ನು ಬಳಸುವವರು ಪದೇ ಪದೇ ಉಗುಳುವುದರಿಂದಾಗಿ ಕೊರೊನಾ ವೈರಸ್ ಹರಡುವಿಕೆ ಅಧಿಕವಾಗುತ್ತದೆ ಎಂದು ದೂರಲಾಗಿದೆ.

ಇದಕ್ಕೆ ಪ್ರತಿಕ್ರಿಯೆಯಾಗಿ ರಜನಿಗಂಧ ತನ್ನ ಅಫಿಡವಿಟ್‌ನಲ್ಲಿ “ಈ ಕಠೋರ ಕ್ಷಣದಲ್ಲಿ ತನ್ನ ಜವಾಬ್ದಾರಿಗಳ ಬಗ್ಗೆ ತಿಳಿದಿದೆ.  ಹಾಗಾಗಿ ‘ಪಿಎಂ ಕೇರ್ಸ್’ ನಿಧಿಗೆ 10 ಕೋಟಿ ರೂ. ಮತ್ತು ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಸಂಸ್ಥೆಗಳಿಗೆ ಸಹಾಯ ಮಾಡಲು 10 ಕೋಟಿ ರೂ ನೀಡಿದ್ದೇವೆ ಎಂದು ಹೇಳಿಕೊಂಡಿದೆ.

ಸೋಮವಾರ ಸಾರ್ವಜನಿಕ ವಲಯದಲ್ಲಿ ವೈರಲ್ ಆದ ಅಫಿಡವಿಟ್‌ನಲ್ಲಿ, “ಇದು ನೋಯ್ಡಾದಲ್ಲಿ ವೈದ್ಯರಿಗೆ (ಕರೋನಾ ಯೋಧರಿಗೆ) ಹೋಟೆಲ್ ಹಾಸಿಗೆಗಳನ್ನು ಕಾಯ್ದಿರಿಸುವುದು, ಅಗತ್ಯವಿರುವವರಿಗೆ ಆಹಾರ ಮತ್ತು ಪಡಿತರ ಒದಗಿಸುವುದಕ್ಕಾಗಿ ಗುರುದ್ವಾರ ಪ್ರಬಂಧಕ್ ಸಮಿತಿಯು ಅಗತ್ಯವಿರುವವರಿಗೆ ತಮ್ಮ ಸಾಮುದಾಯಿಕ ಆಹಾರ ಕೇಂದ್ರವನ್ನು ಮುಂದುವರಿಸಲು ಬೆಂಬಲ ನೀಡಿದೆ” ಎಂದು ಬರೆದುಕೊಂಡಿದೆ.

ಕುತೂಹಲಕಾರಿಯಾಗಿ, ರಾಷ್ಟ್ರೀಯ ಲಾಕ್ ಡೌನ್ ಘೋಷಣೆಯಾದ ಕೆಲವೇ ದಿನಗಳಲ್ಲಿ “ಸಾರ್ವಜನಿಕ ಆರೋಗ್ಯ” ದ ಹಿತದೃಷ್ಟಿಯಿಂದ ಪಾನ್ ಮಸಾಲ ಮಾರಾಟವನ್ನು ನಿಷೇಧಿಸಲು ಉತ್ತರ ಪ್ರದೇಶ ಸರ್ಕಾರ ಮಾರ್ಚ್ 25 ರಂದು ಆದೇಶಿಸಿತು. ಪಾನ್ ಮಸಾಲವನ್ನು ಅಗಿಯುವುದು ಮತ್ತು ಉಗುಳುವುದು COVID-19 ಹರಡುವಿಕೆಯನ್ನು ಹೆಚ್ಚಿಸುತ್ತದೆ ಮತ್ತು ವೇಗಗೊಳಿಸುತ್ತದೆ ಎಂಬ ಎಚ್ಚರಿಕೆಯಿಂದ ಈ ಕ್ರಮ ಕೈಗೊಂಡಿತ್ತು.

ಆದರೆ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಾಗಲೇ ಯುಪಿ ಸರ್ಕಾರವು ಮೇ 6 ರಂದು ಇದ್ದಕ್ಕಿದ್ದಂತೆ ಪಾನ್ ಮಸಾಲ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರ್ಧರಿಸಿತು. ತಂಬಾಕು ಅಥವಾ ನಿಕೋಟಿನ್ ಅನ್ನು ಹೊಂದಿರದ ಪಾನ್ ಮಸಾಲಾವನ್ನು ಮಾತ್ರ ಅನುಮತಿಸಲಾಗುವುದು ಎಂದು ತಿಳಿಸಿತು.

ನಿಷೇಧವನ್ನು ತೆಗೆದುಹಾಕುವ ಸರ್ಕಾರದ ಕ್ರಮ ಪ್ರಶ್ನಿಸಿ ಲಕ್ನೋ ಮೂಲದ ಪತ್ರಕರ್ತ ಸಂಜಯ್ ಶರ್ಮಾ ಅವರು ಪಿಐಎಲ್ ಸಲ್ಲಿಸಿದ್ದಾರೆ.

ಇತ್ತೀಚೆಗೆ ಯುಪಿ ಸರ್ಕಾರದ ಆಹಾರ ಸುರಕ್ಷತೆ ಮತ್ತು ಔಷಧಿಗಳ ಆಡಳಿತದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಐಎಎಸ್ ಅಧಿಕಾರಿ ಅನಿತಾ ಸಿಂಗ್, ಉದ್ಯಮದ ಜೊತೆಗೆ ರೈತರ ಬಗೆಗಿನ ವಿಶಾಲ ಹಿತದೃಷ್ಟಿಯಿಂದ ಇದನ್ನು ಮಾಡಬೇಕಾಗಿದೆ ಎಂಬ ಮನವಿಯನ್ನು ಮಂಡಿಸಿದರು. “ನಿಷೇಧದ ಕಾರಣದಿಂದಾಗಿ ಪಾನ್ ಉದ್ಯಮ ಮತ್ತು ಕೃಷಿ ಸಮುದಾಯ ಎರಡೂ ಗಂಭೀರ ಪರಿಣಾಮ ಎದುರಿಸಿದೆ. ಮಸಾಲದ ಎಲ್ಲಾ ಕಚ್ಚಾ ವಸ್ತುಗಳು ರೈತರಿಂದ ಬರುವುದರಿಂದ ಉದ್ಯಮದ ಮೇಲಿನ ಇಲಾಖೆಯು ನಿಷೇಧವನ್ನು ತೆಗೆದುಹಾಕುವ ಕ್ರಮವನ್ನು ಅಂತಿಮ ನಿರ್ಧಾರವನ್ನು ಉನ್ನತ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

ರಜನಿಗಂಧ ಕಂಪನಿಯು ತನ್ನ ಅಫಿಡವಿಟ್ನಲ್ಲಿ “ಪಾನ್‌ ಮಸಾಲ ಕೇವಲ ಮೌತ್ ಫ್ರೆಶನರ್ ಆಗಿದೆ, ಅದು ತಂಬಾಕನ್ನು ಹೊಂದಿರುವುದಿಲ್ಲ. ಸಾವಿರಾರು ಜನರ ಜೀವನೋಪಾಯವು ಪಾನ್‌ ಮಸಾಲದ ವ್ಯವಹಾರದೊಂದಿಗೆ ಸಂಬಂಧ ಹೊಂದಿದೆ. ಹಾಗಾಗಿ ನಾವು ಉತ್ಪನ್ನದ ಮಾರಾಟವನ್ನು ಸಮರ್ಥಿಸಿಕೊಳ್ಳುತ್ತೇವೆ. ಆದ್ದರಿಂದ ಇದು ಯಾವುದೇ ನಿಷೇಧದಿಂದ ಮುಕ್ತವಾಗಿರಬೇಕು” ಎಂದಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 8 ಕ್ಕೆ ನಿಗದಿಪಡಿಸಲಾಗಿದೆ. ಕೋರ್ಟ್ ಏನು ತೀರ್ಪು ನೀಡಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕೊರೋನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...