Homeಮುಖಪುಟಏರ್ ಇಂಡಿಯಾ ಅಪಘಾತದ ಕುರಿತು ವರದಿ: ವಾಲ್‌ ಸ್ಟ್ರೀಟ್ ಜರ್ನಲ್‌, ರಾಯಿಟರ್ಸ್‌ಗೆ ಲೀಗಲ್ ನೋಟಿಸ್ ನೀಡಿದ...

ಏರ್ ಇಂಡಿಯಾ ಅಪಘಾತದ ಕುರಿತು ವರದಿ: ವಾಲ್‌ ಸ್ಟ್ರೀಟ್ ಜರ್ನಲ್‌, ರಾಯಿಟರ್ಸ್‌ಗೆ ಲೀಗಲ್ ನೋಟಿಸ್ ನೀಡಿದ ಪೈಲಟ್‌ಗಳ ಒಕ್ಕೂಟ

- Advertisement -
- Advertisement -

ಜೂನ್ 12 ರಂದು ನಡೆದ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಪೈಲಟ್ ದೋಷ ಅಥವಾ ಕಾಕ್‌ಪಿಟ್ ಗೊಂದಲ ಕಾರಣ ಎಂದು ಉಲ್ಲೇಖಿಸಿ ವರದಿ ಮಾಡಿದ ‘ದಿ ವಾಲ್ ಸ್ಟ್ರೀಟ್ ಜರ್ನಲ್’ ಮತ್ತು ‘ರಾಯಿಟರ್ಸ್’ ಸುದ್ದಿ ಸಂಸ್ಥೆಗಳಿಗೆ ಭಾರತೀಯ ಪೈಲಟ್‌ಗಳ ಒಕ್ಕೂಟ (ಎಫ್‌ಐಪಿ) ಲೀಗಲ್ ನೋಟಿಸ್ ನೀಡಿದೆ ಎಂದು ವರದಿಯಾಗಿದೆ.

ಪೈಲಟ್ ದೋಷದಿಂದಾಗಿ ಅಪಘಾತ ಸಂಭವಿಸಿದೆ ಎಂಬುವುದನ್ನು ಯಾವುದೇ ಪುರಾವೆಗಳಿಲ್ಲದೆ ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ ಎಂದು ಪೈಲಟ್‌ಗಳ ಒಕ್ಕೂಟ ನೋಟಿಸ್‌ನಲ್ಲಿ ತಿಳಿಸಿದೆ.

ಎರಡು ಮಾಧ್ಯಮ ಸಂಸ್ಥೆಗಳ ವರದಿಗಳನ್ನು ಪೈಲಟ್‌ಗಳ ಸಂಘಟನೆ ಪಕ್ಷಪಾತದಿಂದ ಕೂಡಿದ್ದು ಮತ್ತು ಪರಿಶೀಲಿಸದ ವರದಿ ಎಂದು ಟೀಕಿಸಿವೆ. ಈ ಸಂಬಂಧ ಕ್ಷಮೆ ಯಾಚಿಸುವಂತೆ ಫಾರ್ಮಲ್ ಲೀಗಲ್ ನೋಟಿಸ್‌ನಲ್ಲಿ ಒತ್ತಾಯಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ದುರಂತದ ಕಾರಣದ ಬಗ್ಗೆ ತನಿಖೆ ನಡೆಯುತ್ತಿರುವಾಗ ಈ ರೀತಿಯ ವರದಿ ಪ್ರಕಟಿಸಿರುವುದು ಬೇಜವಾಬ್ದಾರಿಯನ್ನು ಎಂದು ಎತ್ತಿ ತೋರಿಸಿದೆ. ಮಾಧ್ಯಮಗಳು ಪತ್ರಿಕೋದ್ಯಮದ ಸಮಗ್ರತೆಯನ್ನು ಎತ್ತಿಹಿಡಿಯಬೇಕು ಮತ್ತು ಸಾರ್ವಜನಿಕರನ್ನು ದಾರಿ ತಪ್ಪಿಸುವ ತಪ್ಪು ಮಾಹಿತಿಯನ್ನು ಹರಡುವುದನ್ನು ತಪ್ಪಿಸಬೇಕು ಎಂದು ಒಕ್ಕೂಟ ಹೇಳಿದೆ.

“ಇಂತಹ ಊಹಾತ್ಮಕ ವಿಷಯಗಳ ಪ್ರಕಟಣೆಯು ಅತ್ಯಂತ ಬೇಜವಾಬ್ದಾರಿಯಿಂದ ಕೂಡಿದ್ದು, ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಧ್ಯವಾಗದ ಮೃತ ಪೈಲಟ್‌ಗಳ ಖ್ಯಾತಿಗೆ ಗಂಭೀರ ಮತ್ತು ಸರಿಪಡಿಸಲಾಗದ ಹಾನಿಯನ್ನುಂಟುಮಾಡಿದೆ. ಈ ಮೂಲಕ ರಾಯಿಟರ್ಸ್ ದುಃಖಿತ ಕುಟುಂಬಗಳಿಗೆ ಅನಗತ್ಯ ತೊಂದರೆಯನ್ನುಂಟುಮಾಡಿದೆ. ಅಲ್ಲದೆ, ಅಪಾರ ಒತ್ತಡ ಮತ್ತು ಸಾರ್ವಜನಿಕ ಜವಾಬ್ದಾರಿಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಪೈಲಟ್ ಭ್ರಾತೃತ್ವದ ನೈತಿಕತೆಯನ್ನು ಕುಗ್ಗಿಸಿದೆ” ಎಂದು ಲೀಗಲ್ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಅಪಘಾತವು ಸಾರ್ವಜನಿಕರ ಗಮನವನ್ನು ಸೆಳೆದಿದ್ದರೂ, “ವಿಶೇಷವಾಗಿ ಆಧಾರರಹಿತ ಸಂಗತಿಗಳ ಆಧಾರದ ಮೇಲೆ ಭಾರತೀಯ ವಾಯುಯಾನ ಉದ್ಯಮದ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಅಥವಾ ತಲ್ಲಣವನ್ನು ಸೃಷ್ಟಿಸುವ ಸಮಯ ಇದಲ್ಲ” ಎಂದು ಒಕ್ಕೂಟದ ಒತ್ತಿ ಹೇಳಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಮಾಧ್ಯಮಗಳು ಊಹಾಪೋಹಗಳಿಂದ ದೂರವಿರುವಂತೆ ಮನವಿ ಮಾಡಿದೆ.

ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ಇತ್ತೀಚೆಗೆ ಬಿಡುಗಡೆ ಮಾಡಿದ ಪ್ರಾಥಮಿಕ ವರದಿಯಲ್ಲಿ, ಅಹ್ಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ವಿಮಾನದ ಇಂಜಿನ್‌ಗಳ ಇಂಧನ ನಿಯಂತ್ರಣ ಸ್ವಿಚ್‌ಗಳು ಡಿಕ್ಕಿ ಹೊಡೆಯುವ ಕೆಲವೇ ಕ್ಷಣಗಳ ಮೊದಲು “ರನ್” ನಿಂದ “ಕಟ್ಆಫ್”ಗೆ ತಿರುಗಿತ್ತು. ಇದರಿಂದ ಎರಡೂ ಇಂಜಿನ್‌ಗಳಿಗೆ ಇಂಧನ ಪೂರೈಕೆ ಕಡಿತಗೊಂಡಿತ್ತು ಎಂದು ಹೇಳಿತ್ತು. ಇಂಧನ ಸ್ವಿಚ್‌ಗಳ ಕುರಿತು ಪೈಲಟ್‌ಗಳ ನಡುವಿನ ಸಂಭಾಷಣೆಯನ್ನುಉಲ್ಲೇಖಿಸಿದ್ದ ವರದಿಯು, “ಒಬ್ಬ ಪೈಲಟ್ ಸ್ಚಿಚ್ ಯಾರು ಕಟ್‌ಆಫ್‌ ಮಾಡಿತ್ತು ಎಂದು ಕೇಳಿದಾಗ, ಮತ್ತೊಬ್ಬರು ಪೈಲಟ್‌ ನನಗೆ ಗೊತ್ತಿಲ್ಲ” ಎಂದು ಹೇಳಿದ್ದಾರೆ” ಎಂದಿತ್ತು.

ಅಮೆರಿಕದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯ (ಎನ್‌ಟಿಎಸ್‌ಬಿ) ಮುಖ್ಯಸ್ಥರು ಏರ್ ಇಂಡಿಯಾ ವಿಮಾನ ಅಪಘಾತದ ತನಿಖೆಯ ವಿವರಗಳನ್ನು ವರದಿ ಮಾಡುವಾಗ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದರು. ಇತ್ತೀಚಿನ ಅಂತಾರಾಷ್ಟ್ರೀಯ ಮಾಧ್ಯಮ ವರದಿಗಳು ಅಕಾಲಿಕವಾಗಿವೆ ಮತ್ತು ಸರಿಯಾದ ತನಿಖಾ ಸಂದರ್ಭವನ್ನು ಹೊಂದಿಲ್ಲ ಎಂದು ಹೇಳಿದ್ದರು.

ಎಂವಿಎ ಒಗ್ಗಟ್ಟಿನ ಬಗ್ಗೆ ಪ್ರಶ್ನಿಸಿದ ಉದ್ಧವ್ ಠಾಕ್ರೆ: ಮೈತ್ರಿಕೂಟದಿಂದ ನಿರ್ಗಮಿಸುವ ಮುನ್ಸೂಚನೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...