Homeಮುಖಪುಟಪಿಣರಾಯಿ 2.0 - ಸಿಪಿಐ(ಎಂ)ನಿಂದ ಹೊಸ ಮುಖಗಳಿಗೆ ಮಂತ್ರಿ ಸ್ಥಾನ; ಕೆ.ಕೆ. ಶೈಲಜಾ ಔಟ್‌!

ಪಿಣರಾಯಿ 2.0 – ಸಿಪಿಐ(ಎಂ)ನಿಂದ ಹೊಸ ಮುಖಗಳಿಗೆ ಮಂತ್ರಿ ಸ್ಥಾನ; ಕೆ.ಕೆ. ಶೈಲಜಾ ಔಟ್‌!

ಮುಖ್ಯಮಂತ್ರಿ ಪಿಣರಾಯಿ ಅವರನ್ನು ಬಿಟ್ಟು ಉಳಿದಂತೆ ಹೊಸ ಮುಖಗಳಿಗೆ ಪಕ್ಷವು ಮಣೆಹಾಕಿದೆ

- Advertisement -
- Advertisement -

ಕೇರಳದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಸತತ ಎರಡನೆ ಬಾರಿ ಆಯ್ಕೆಯಾಗಿರುವ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್‌ ಸರ್ಕಾರ, ತನ್ನ ಹೊಸ ಸಚಿವ ಸಂಪುಟದ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕೇರಳದ ಮಾಜಿ ಆರೋಗ್ಯ ಮಂತ್ರಿ ಕೆ.ಕೆ.ಶೈಲಜಾ ಅವರ ಹೆಸರು ಕಾಣಿಸಿಕೊಂಡಿಲ್ಲ.

ಕೆ.ಕೆ. ಶೈಲಜಾ ಅವರು ಕೇರಳದ ಹೊಸ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಒಕ್ಕೂಟ ಘೋಷಿಸಿದೆ. ವಾಸ್ತವವಾಗಿ, ಎಲ್‌ಡಿಎಫ್‌‌‌ ಮೈತ್ರಿಕೂಟದ ಪ್ರಮುಖ ಪಕ್ಷವಾಗಿರುವ ಸಿಪಿಐ(ಎಂ) ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರನ್ನು ಹೊರತುಪಡಿಸಿ ಹಿಂದಿನ ಸರ್ಕಾರದಿಂದ ಎಲ್ಲ ಮಂತ್ರಿಗಳನ್ನು ಕೈಬಿಟ್ಟು ಹೊಸ ಮುಖಗಳನ್ನು ತರಲು ನಿರ್ಧರಿಸಿದೆ. ಕೆ.ಕೆ. ಶೈಲಜಾ ಅವರು ಪಕ್ಷದ ವಿಪ್ ಆಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

ಆರೋಗ್ಯ ಮಂತ್ರಿಯಾಗಿದ್ದ ಕೆ.ಕೆ. ಶೈಲಾಜಾ ಟೀಚರ್ ಅವರು ನಿಫಾ ಮತ್ತು ಕೊರೊನಾ ಸಾಂಕ್ರಮಿಕವನ್ನು ನಿಭಾಯಿಸಿರುವ ಮಾದರಿಗೆ ವಿಶ್ವದ ಗಮನ ಸೆಳೆದಿದ್ದರು. ಇತ್ತೀಚಿನ ಚುನಾವಣೆಯಲ್ಲಿ ಅವರು ಕಣ್ಣೂರಿನ ಮಟ್ಟನ್ನೂರಿನಿಂದ ವಿಧಾನಸಭೆಗೆ 60,000 ಮತಗಳ ಅಂತರದಲ್ಲಿ ಜಯಗಳಿಸಿದ್ದರು.

ಪಕ್ಷದ ಹೇಳಿಕೆಯ ಪ್ರಕಾರ, ಪಿಣರಾಯಿ ವಿಜಯನ್ ಸರ್ಕಾರದ ಎರಡನೆ ಅವಧಿಯ ಆಡಳಿತದ ಸಂಪುಟದಲ್ಲಿ ಎಂ.ವಿ.ಗೋವಿಂದನ್, ಕೆ. ರಾಧಾಕೃಷ್ಣನ್, ಸಾಜಿ ಚೆರಿಯನ್, ಕೆ.ಎನ್.ಬಾಲಗೋಪಾಲ್, ಪಿ ರಾಜೀವ್, ವಿ.ಎನ್. ವಾಸವನ್, ವಿ. ಶಿವನ್‌ಕುಟ್ಟಿ, ಮುಹಮ್ಮದ್ ರಿಯಾಸ್, ಡಾ.ಆರ್. ಬಿಂಧು, ವೀನಾ ಜಾರ್ಜ್ ಮತ್ತು ಅಬ್ದುಲ್ ರಹ್ಮಾನ್ ಅವರು ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ‘ಹೊಸ ಶಿಕ್ಷಣ ನೀತಿ’ಯ ಅನುಷ್ಠಾನ ಕುರಿತ ಕೇಂದ್ರದ ಸಭೆಯನ್ನು ಬಹಿಷ್ಕರಿಸಿದ ‘ಸ್ಟಾಲಿನ್’ ಸರ್ಕಾರ

ಎಂ.ಬಿ. ರಾಜೀಶ್ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದ್ದು, ಮಾಜಿ ಸಚಿವ ಟಿ.ಪಿ.ರಾಮಕೃಷ್ಣನ್ ಅವರು ಪಕ್ಷದ ಸಂಸದೀಯ ಕಾರ್ಯದರ್ಶಿಯಾಗಲಿದ್ದಾರೆ.

ರಾಜ್ಯ ಸಮಿತಿ ಸಭೆಯ ಅಧ್ಯಕ್ಷತೆ ಎಲಮರಂ ಕರೀಮ್ ವಹಿಸಿದ್ದರು. ಎಸ್.ರಾಮಚಂದ್ರನ್ ಪಿಳ್ಳೈ, ಪಿಣರಾಯಿ ವಿಜಯನ್, ಕೊಡಿಯೇರಿ ಬಾಲಕೃಷ್ಣನ್ ಮತ್ತು ಎಂ.ಎ. ಬೇಬಿ ಸೇರಿದಂತೆ ಪಾಲಿಟ್‌ಬ್ಯುರೊ ಸದಸ್ಯರು ಉಪಸ್ಥಿತರಿದ್ದರು.

ಕೊರೊನಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಮೇ 20 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಇದನ್ನೂ ಓದಿ: ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತ್ತಿತ್ತು- ನಳೀನ್ ಕುಮಾರ್‌ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...