Homeಚಳವಳಿಕೇರಳ ವಿಧಾನಸಭೆಯಲ್ಲಿ ಸಿಎಎ ವಿರುದ್ಧ ನಿರ್ಣಯ ಮಂಡಿಸಿದ ಪಿಣರಾಯಿ ವಿಜಯನ್‌...

ಕೇರಳ ವಿಧಾನಸಭೆಯಲ್ಲಿ ಸಿಎಎ ವಿರುದ್ಧ ನಿರ್ಣಯ ಮಂಡಿಸಿದ ಪಿಣರಾಯಿ ವಿಜಯನ್‌…

- Advertisement -
- Advertisement -

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರದ್ದುಗೊಳಿಸುವಂತೆ ಒತ್ತಾಯಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು.

ಅಸೆಂಬ್ಲಿ ಮತ್ತು ಸಂಸತ್ತಿನಲ್ಲಿ ಎಸ್‌ಸಿ ಮತ್ತು ಎಸ್‌ಟಿಗಳಿಗೆ ಮೀಸಲಾತಿಯನ್ನು ಮತ್ತೊಂದು ದಶಕಗಳವರೆಗೆ ವಿಸ್ತರಿಸುವುದನ್ನು ಅಂಗೀಕರಿಸಲು ಒಂದು ದಿನದ ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಇದೇ ಸಂದರ್ಭದಲ್ಲಿ ಸಿಎಎ ವಿರುದ್ಧ ಸಾರ್ವಜನಿಕರಲ್ಲಿ ವ್ಯಾಪಕವಾದ ಭಿನ್ನಾಭಿಪ್ರಾಯಗಳು ಮೂಡಿಬಂದಿದ್ದನ್ನು ಗಮನದಲ್ಲಿಟ್ಟುಕೊಂಡು ಸಿಎಎ ವಿರುದ್ಧದ ನಿರ್ಣಯವನ್ನು ಸಹ ಕೈಗೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ.

ನಿರ್ಣಯವನ್ನು ಮಂಡಿಸುವಾಗ, ಸಿಎಎ ದೇಶದ “ಜಾತ್ಯತೀತ” ದೃಷ್ಟಿಕೋನಕ್ಕೆ ವಿರುದ್ಧವಾಗಿದೆ ಮತ್ತು ಪೌರತ್ವ ನೀಡುವಲ್ಲಿ ಧರ್ಮ ಆಧಾರಿತ ತಾರತಮ್ಯಕ್ಕೆ ಕಾರಣವಾಗುತ್ತದೆ ಎಂದು ವಿಜಯನ್‌ ಹೇಳಿದರು. “ಈ ಕಾಯಿದೆಯು ಸಂವಿಧಾನದ ಮೂಲ ಮೌಲ್ಯಗಳು ಮತ್ತು ತತ್ವಗಳಿಗೆ ವಿರುದ್ಧವಾಗಿದೆ. ದೇಶದ ಜನರಲ್ಲಿನ ಆತಂಕವನ್ನು ಗಮನದಲ್ಲಿಟ್ಟುಕೊಂಡು, ಸಿಎಎಯನ್ನು ಕೈಬಿಡಲು ಮತ್ತು ಸಂವಿಧಾನದ ಜಾತ್ಯತೀತ ದೃಷ್ಟಿಕೋನವನ್ನು ಎತ್ತಿಹಿಡಿಯಲು ಕೇಂದ್ರವು ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಅವರು ಹೇಳಿದರು.

ಈ ಕಾಯ್ದೆಯು ಸಮಾಜದ ವಿವಿಧ ಸ್ತರಗಳಲ್ಲಿ ವ್ಯಾಪಕ ಪ್ರತಿಭಟನೆಯನ್ನು ಹುಟ್ಟುಹಾಕಿದೆ ಎಂದ ಅವರು ಇದು ಭಾರತವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟದಾಗಿ ಚಿತ್ರಿಸಿದೆ ಎಂದಿದ್ದಾರೆ. ಪಿಣರಾಯಿ ವಿಜಯನ್ ಅವರು ಕೇರಳ ರಾಜ್ಯದಲ್ಲಿ ಯಾವುದೇ ಬಂಧನ ಕೇಂದ್ರಗಳು ಇರುವುದಿಲ್ಲ ಎಂದು ವಿಧಾನಸಭೆಗೆ ತಿಳಿಸಿದ್ದಾರೆ. ಅಧಿವೇಶನ ಪ್ರಾರಂಭವಾದಾಗ, ವಿಧಾನಸಭೆಯ ಏಕೈಕ ಬಿಜೆಪಿ ಸದಸ್ಯ ಓ ರಾಜಗೋಪಾಲ್, ಸಂಸತ್ತಿನ ಉಭಯ ಸದನಗಳು ಸಿಎಎ ಕಾಯ್ದೆಯನ್ನು ಅಂಗೀಕರಿಸಿದ್ದರಿಂದ ಇದು “ಕಾನೂನುಬಾಹಿರ” ಎಂದು ಹೇಳುವ ಮೂಲಕ ನಿರ್ಣಯವನ್ನು ಆಕ್ಷೇಪಿಸಿದರು.

ಈ ವಿಷಯದ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಡಿಸೆಂಬರ್ 29 ರಂದು ಕರೆದ ಸರ್ವಪಕ್ಷ ಸಭೆಯಲ್ಲಿ ವಿಶೇಷ ಅಧಿವೇಶನ ನಡೆಸಿ ಸಿಎಎ ವಿರುದ್ಧ ನಿರ್ಣಯ ಮಂಡಿಸುವಂತೆ ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಎಡ ಸರ್ಕಾರಕ್ಕೆ ಒತ್ತಾಯಿಸಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...