Homeಕರ್ನಾಟಕಕರ್ನಾಟಕದ ವಿಚಾರದಲ್ಲಿ ಪಿಣರಾಯಿ ವಿಜಯನ್ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕದ ವಿಚಾರದಲ್ಲಿ ಪಿಣರಾಯಿ ವಿಜಯನ್ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

“ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರಿನ ನಿವಾಸದ ಬಳಿ, ಕರ್ನಾಟಕದಲ್ಲಿ ಬುಲ್ಡೋಜರ್ ರಾಜ್ ನಡೆಯುತ್ತಿದೆ ಎಂಬ ಪಿಣರಾಯಿ ವಿಜಯನ್ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, “ಪಿಣರಾಯಿ ವಿಜಯನ್ ರಂತಹ ಹಿರಿಯ ನಾಯಕರು ಸತ್ಯಾಸತ್ಯತೆ ಅರಿಯದೇ ಮಾತನಾಡಿರುವುದು ದುರಾದೃಷ್ಟಕರ. ಬೆಂಗಳೂರಿನ ವಿಚಾರ ಏನು ಎಂದು ಅವರು ತಿಳಿಯಬೇಕು. ಈ ಜಾಗ ಘನತ್ಯಾಜ್ಯ ವಿಲೇವಾರಿ ಮಾಡುವ ‘ಕ್ವಾರಿ ಪಿಟ್’ ಆಗಿದೆ. ಈ ಪ್ರದೇಶದಲ್ಲಿ ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳಿವೆ. ಕೆಲವರು ಕಾನೂನುಬಾಹಿರವಾಗಿ ಆ ಜಾಗವನ್ನು ಅತಿಕ್ರಮಣ ಮಾಡಿದ್ದಾರೆ. ನಮಗೂ ಮಾನವೀಯತೆ ಇದೆ; ಅವರಿಗೆ ಬೇರೆ ಜಾಗಗಳಿಗೆ ಹೋಗಲು ಸರ್ಕಾರ ಹಾಗೂ ಸ್ಥಳೀಯ ಶಾಸಕರು ಅವಕಾಶ ನೀಡಿದ್ದೆವು. ಅಲ್ಲಿದ್ದವರ ಪೈಕಿ ಕೆಲವರು ಮಾತ್ರ ಸ್ಥಳೀಯರಾಗಿದ್ದು ಉಳಿದವರು ಏಕಾಏಕಿ ಅತಿಕ್ರಮಣ ಮಾಡಿದ್ದಾರೆ. ಇದು ಘನತ್ಯಾಜ್ಯ ವಿಲೇವಾರಿ ಘಟಕವಾಗಿದ್ದು 9 ವರ್ಷಗಳ ಹಿಂದೆಯೇ ಅಧಿಸೂಚನೆ ಹೊರಡಿಸಲಾಗಿದೆ. ಪಿಣರಾಯಿ ಅವರಂತಹ ನಾಯಕರು ಇಂತಹ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು. ನಮಗೆ ಬೆಂಗಳೂರು ಬಗ್ಗೆ ಚೆನ್ನಾಗಿ ಗೊತ್ತಿದೆ. ಲ್ಯಾಂಡ್ ಮಾಫಿಯಾದವರು ಸ್ಲಂಗಳನ್ನು ನಿರ್ಮಿಸಲು ನಾವು ಬಿಡುವುದಿಲ್ಲ. ನಾವು ನಮ್ಮ ಭೂಮಿಯನ್ನು ರಕ್ಷಣೆ ಮಾಡಿಕೊಳ್ಳುತ್ತೇವೆ. ಅವರಲ್ಲಿ ಯಾರೆಲ್ಲಾ ಅರ್ಹರಿದ್ದಾರೆ, ಅವರಿಗೆ ರಾಜೀವ್ ಗಾಂಧಿ ಯೋಜನೆಯಲ್ಲಿ ಮನೆಗಳನ್ನು ನೀಡಲು ಬದ್ಧವಾಗಿದ್ದೇವೆ” ಎಂದು ತಿಳಿಸಿದರು.

“ಪ್ರಕರಣದ ಸತ್ಯಾಸತ್ಯತೆ ತಿಳಿಯದೇ ಪಿಣರಾಯಿ ಅವರು ಈ ರೀತಿ ಮಾತನಾಡಬಾರದು ಎಂದು ಮನವಿ ಮಾಡುತ್ತೇನೆ. ಬುಲ್ಡೋಜರ್ ಸಂಸ್ಕೃತಿ ನಮ್ಮಲ್ಲಿ ಇಲ್ಲ. ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಜಮೀನನ್ನು ರಕ್ಷಣೆ ಮಾಡಿಕೊಳ್ಳಲಾಗಿದೆ. ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಿಗದಿಯಾಗಿರುವ ಜಾಗವನ್ನು ಒತ್ತುವರಿ ಮಾಡಿಕೊಳ್ಳಲು ಬಿಡುವುದಿಲ್ಲ. ಈ ಬಗ್ಗೆ ನಮ್ಮ ಪಕ್ಷ ಹಾಗೂ ಕೇರಳದ ನಾಯಕರಿಗೆ ವರದಿ ರವಾನೆ ಮಾಡುತ್ತೇನೆ” ಎಂದರು.

“ಬೆಂಗಳೂರು ಬೇರೆ ನಗರಗಳಂತೆ ಅಲ್ಲ. ನಮ್ಮಲ್ಲಿ ಹೆಚ್ಚು ಕೊಳಗೇರಿ ಪ್ರದೇಶಗಳಿಲ್ಲ. ಹೊಸದಾಗಿ ಕೊಳಗೇರಿ ಪ್ರದೇಶ ನಿರ್ಮಾಣ ಮಾಡಲು ಬಿಡುವುದಿಲ್ಲ. ಇದು ಸಚಿವ ಕೃಷ್ಣ ಭೈರೇಗೌಡ ಅವರ ಕ್ಷೇತ್ರವಾಗಿದ್ದು, ಅವರು ಬಹಳ ಹಿರಿಯ ನಾಯಕರಿದ್ದು, ಅವರು ಅಧಿಕಾರಿಗಳ ಜೊತೆ ಮಾತನಾಡಿದ್ದಾರೆ. ಜಾಗ ಖಾಲಿ ಇದೆ ಎಂದು ಏಕಾಏಕಿ ಗುಡಿಸಲು ಹಾಕಿಕೊಳ್ಳಲು ಆಗುವುದಿಲ್ಲ. ಇದು ಅಲ್ಪಸಂಖ್ಯಾತರು ಅಥವಾ ಬೇರೆ ವಿಚಾರವಲ್ಲ. ಯಾರಿಗಾದರೂ ಜಾಗ ಬೇಕಾಗಿದ್ದರೆ ಅವರು ಅರ್ಹರಾಗಿದ್ದರೆ ಅವರಿಗೆ ಸರ್ಕಾರ ವಸತಿ ನೀಡಲಿದೆ. ಬೇರೆ ಸರ್ಕಾರಗಳು ಜನರಿಗೆ ಮನೆ ಕಟ್ಟಿಕೊಡಲು ಸಾಧ್ಯವಾಗಿರಲಿಲ್ಲ. ಮುಖ್ಯಮಂತ್ರಿಗಳು, ವಸತಿ ಸಚಿವರಾದ ಜಮೀರ್ ಅಹ್ಮದ್ ಸೇರಿದಂತೆ ನಮ್ಮ ಸರ್ಕಾರ ಬಡವರಿಗೆ ಲಕ್ಷಾಂತರ ಮನೆ ನಿರ್ಮಾಣ ಮಾಡಿದೆ. ಅರ್ಹರಿಗೆ ನಾವು ಸೂಕ್ತ ರೀತಿಯಲ್ಲಿ ಪುನರ್ವಸತಿ ಕಲ್ಪಿಸುತ್ತೇವೆ” ಎಂದು ಸ್ಪಷ್ಟನೆ ನೀಡಿದರು.

ಪಿಣರಾಯಿ ಅವರ ಹೇಳಿಕೆ ಬೆನ್ನಲ್ಲೇ ಕೆಲವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಇದೆಲ್ಲವೂ ರಾಜಕೀಯ ಹೇಳಿಕೆ ಹಾಗೂ ರಾಜಕೀಯ ಪ್ರೇರಿತ ಪ್ರತಿಭಟನೆಗಳು. ಸತ್ಯಾಸತ್ಯತೆ ಅರಿಯದೇ ನಮ್ಮ ರಾಜ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು. ಚುನಾವಣೆ ಸಮಯದಲ್ಲಿ ಇಂತಹ ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ” ಎಂದರು.

“ಯಾರೆಲ್ಲಾ ಕರ್ನಾಟಕದಲ್ಲಿ ವಾಸವಿದ್ದು, ದಾಖಲೆ ಹೊಂದಿದ್ದಾರೋ ಅವರಿಗೆ ರಾಜ್ಯದ ಕಾನೂನಿನಂತೆ ಅಗತ್ಯ ನೆರವು ನೀಡಲಾಗುವುದು. ಈ ಕುರಿತು ಸ್ಪಷ್ಟ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....

ರೋಹಿತ್ ವೇಮುಲಾ 10ನೇ ಶಹಾದತ್ ದಿನ: ಜ.17ರಂದು ಹೈದರಾಬಾದ್ ವಿವಿಯಲ್ಲಿ ರೋಹಿತ್ ಕಾಯ್ದೆಯ ‘ಜನತಾ ಕರಡು’ ಅನಾವರಣ

ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ವಾಂಸ ಮತ್ತು ಅಂಬೇಡ್ಕರ್ ವಿದ್ಯಾರ್ಥಿ ಸಂಘದ (ASA) ನಾಯಕ ರೋಹಿತ್ ವೇಮುಲ ಅವರ ಮರಣದ ಹತ್ತು ವರ್ಷಗಳ ನಂತರ, ವಿದ್ಯಾರ್ಥಿ ಗುಂಪುಗಳು ಮತ್ತು ಸಾಮಾಜಿಕ ನ್ಯಾಯ...

ಮಹಾರಾಷ್ಟ್ರವು ಪ್ರಧಾನಿ ಮೋದಿಯನ್ನು ಹೆಚ್ಚು ಅವಲಂಬಿಸಿದೆ: ಸಿಎಂ ಫಡ್ನವೀಸ್

ನಗರ ಪಾಲಿಕೆ ಚುನಾವಣೆಯಲ್ಲಿ ಮಹಾಯುತಿ ಭರ್ಜರಿ ಜಯ ಸಾಧಿಸಿದ ನಂತರ ಮಹಾರಾಷ್ಟ್ರದ ಜನರಿಗೆ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ವಿಜಯವನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅರ್ಪಿಸಿದರು. ರಾಜ್ಯವು ಪ್ರಧಾನಿ...

ಮೆಹುಲ್ ಚೋಕ್ಸಿ ಪುತ್ರ ಕೂಡ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ: ಜಾರಿ ನಿರ್ದೇಶನಾಲಯ

ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ, ಅವರ ಮಗ ರೋಹನ್ ಚೋಕ್ಸಿ ಕೂಡ ಈ ಅಪರಾಧದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೊದಲ ಬಾರಿಗೆ ಹೇಳಿಕೊಂಡಿದೆ....

‘ವೋಟ್ ಚೋರಿ ಒಂದು ರಾಷ್ಟ್ರವಿರೋಧಿ ಕೃತ್ಯ..’; ಬಿಎಂಸಿ ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಎಣಿಕೆ ವೇಗ ಪಡೆಯುತ್ತಿದ್ದಂತೆ, ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ಗುರಿಯಾಗಿಸಿಕೊಂಡು ತಮ್ಮ ಮೊದಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....

ಪುನರಾಭಿವೃದ್ಧಿ ಹೆಸರಿನಲ್ಲಿ ಮಣಿಕರ್ಣಿಕಾ ಘಾಟ್ ಬಳಿ ದೇಗುಲಗಳ ಧ್ವಂಸ: ಮೋದಿ ವಿರುದ್ಧ ಖರ್ಗೆ ಆಕ್ರೋಶ!

ನವದೆಹಲಿ: ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ಪುನರಾಭಿವೃದ್ಧಿ ಕಾರ್ಯದ ಭಾಗವಾಗಿ ಬುಲ್ಡೋಜರ್‌ಗಳನ್ನು ಏಕೆ ಓಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ. ಮತ್ತು ಐತಿಹಾಸಿಕ ಪರಂಪರೆಯ ಅನೇಕ ಸ್ಥಳಗಳನ್ನು ಈ...

ಒಡಿಶಾ| ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ನಕಲಿ ಗೋರಕ್ಷಕರು; ಐವರ ಬಂಧನ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬುಧವಾರ (ಜ.14) ನಕಲಿ ಗೋರಕ್ಷಕರು 35 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಜಾನುವಾರುಗಳನ್ನು ಹೊತ್ತ ವ್ಯಾನ್ ನಿಲ್ಲಿಸಿ ಪ್ರಾಣಿಗಳ ಸಾಗಣೆ ಆರೋಪದ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ. ಜಿಲ್ಲಾ ಆಸ್ಪತ್ರೆಗೆ...

ರಾಜಸ್ಥಾನ: ಬಿಜೆಪಿ ಅತಿ ಕಡಿಮೆ ಅಂತರದಿಂದ ಗೆದ್ದ ಸ್ಥಾನದಲ್ಲಿ ಮುಸ್ಲಿಂ ಮತಗಳನ್ನು ಅಳಿಸುವಂತೆ ಒತ್ತಡ: ಆತ್ಮಹತ್ಯೆ ಬೆದರಿಕೆ ಹಾಕಿದ ಬಿಎಲ್ಒ

ಜೈಪುರದ ಹವಾ ಮಹಲ್ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಅಧಿಕಾರಿಯೊಬ್ಬರು ( ಬಿಎಲ್‌ಒ ) ನೂರಾರು ಮತದಾರರನ್ನು, ಅವರಲ್ಲಿ ಹೆಚ್ಚಿನವರು ಮುಸ್ಲಿಮರನ್ನು ಮತದಾರರ ಪಟ್ಟಿಯಿಂದ ಅಳಿಸಲು ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ...