Homeಮುಖಪುಟಬಸವ ಜಯಂತಿ ಕುರಿತು ಪಿಣರಾಯಿ ವಿಜಯನ್‌ರಿಂದ‌ ಕನ್ನಡದಲ್ಲಿ ಟ್ವೀಟ್‌: ನೆಟ್ಟಿಗರು ಫಿದಾ!

ಬಸವ ಜಯಂತಿ ಕುರಿತು ಪಿಣರಾಯಿ ವಿಜಯನ್‌ರಿಂದ‌ ಕನ್ನಡದಲ್ಲಿ ಟ್ವೀಟ್‌: ನೆಟ್ಟಿಗರು ಫಿದಾ!

- Advertisement -
- Advertisement -

ಬಸವ ಜಯಂತಿಯ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರವರು ಕನ್ನಡದಲ್ಲಿ ಬಸವಣ್ಣನವರ ವಚನವನ್ನು ಟ್ವೀಟ್‌ ಮಾಡುವ ಮೂಲಕ ಸಾವಿರಾರು ಕನ್ನಡ ಅಭಿಮಾನಿಗಳು ಮನಗೆದ್ದಿದ್ದಾರೆ.

ಬಸವ ಜಯಂತಿ ಗ್ರೀಟಿಂಗ್ಸ್‌ ಎಂಬ ವಾಕ್ಯಗಳಿಂದ ಆರಂಭವಾಗುವ ಅವರ ಟ್ವೀಟ್‌ “ನಮ್ಮೊಳಗಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಮಹಾನ್‌ ಬಸವಣ್ಣನವರು ಮಾರ್ಗದರ್ಶಕರಾಗಲಿ. ನಾವು ವಿಭಜಿತವಾಗಿದ್ದರೆ ಈ ಸಾಂಕ್ರಾಮಿಕದ ವಿರುದ್ಧ ಜಯಿಸಲು ಸಾಧ್ಯವಿಲ್ಲ. ಗೆಲ್ಲಲ್ಲು ಅದು ನಮ್ಮ ಒಗ್ಗಟ್ಟನ್ನು ಕೇಳುತ್ತದೆ” ಎಂದು ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

ಮುಂದುವರಿದು “”ಇವನಾರವ ಇವನಾರವ ಇವನಾರವನೆಂದು ಎನಿಸದಿರಯ್ಯ. ಇವ ನಮ್ಮವ ಇವ ನಮ್ಮವ, ಇವ ನಮ್ಮವನೆಂದು ಎನಿಸಯ್ಯ.” ಎಂಬ ಬಸವಣ್ಣನವರ ಖ್ಯಾತ ವಚನವನ್ನು ಟ್ವೀಟ್‌ ಮಾಡುವ ಮೂಲಕ ಬಸವಣ್ಣನವರನ್ನು ಸ್ಮರಿಸಿದ್ದಾರೆ.

ಪಿಣರಾಯಿ ವಿಜಯನ್‌ರವರ ಬಸವ ಜಯಂತಿಯ ಕುರಿತು ಈ ಟ್ವೀಟ್‌ ಮಾಡುತ್ತಲೇ ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಬಹಳಷ್ಟು ನೆಟ್ಟಿಗರು ಅವರ ಟ್ವೀಟ್‌ಗೆ ಫಿದಾ ಆಗಿದ್ದು ಅದನ್ನು ಹಂಚಿಕೊಂಡಿದ್ದಾರೆ.

ಕೇರಳ CM ಅವರಿಂದ ಬಸವ ಜಯಂತಿಯ ಶುಭಾಶಯ ❤️

Posted by Sharath Chandra on Sunday, April 26, 2020

#Pinarayivijayan ❤️❤️ದುರಂತ ಅಂದರೆ ನಮ್ಮ ರಾಜ್ಯಾಧವರಿಗೆ ಬಸವ ತತ್ವ ಬೇಡ ಲಿಂಗಾಯತರ ವೋಟ್ ಬ್ಯಾಂಕ್ ಸಾಕು.

Posted by Vinay Shivanna on Sunday, April 26, 2020

ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಕೇರಳದ ರೋಗಿಗಳನ್ನು ಕರ್ನಾಟಕಕ್ಕೆ ಬರದಂತೆ ರಸ್ತೆ ಮುಚ್ಚಲಾಗಿತ್ತು. ಈ ಕುರಿತು ಪರವಿರೋಧದ ಅಭಿಪ್ರಾಯಗಳು ದಾಖಲಾಗಿದ್ದವು. ಕೊನೆಗೆ ವಿಷಯ ಕೋರ್ಟ್ ಮೆಟ್ಟಿಲೇರಿತ್ತು ಸಹ. ಈ ಹಿನ್ನೆಲೆಯಲ್ಲಿ ಪಿಣರಾಯಿರವರು ಕೊರೊನಾ ಸಾಂಕ್ರಾಮಿಕದ ವಿರುದ್ಧ ಜೊತೆಯಾಗಿ ಹೋರಾಡೋಣ ಎಂಬ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಠೀವಿ ಬಂದು ಮಾಡಿ, ರುವಾಂಡ ಮಾದರಿ ನೋಡಿದರೆ ನಮ್ಮ ದೇಶ ಉಳಿತ್ತೈತೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...